AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo Crisis: ಡಿಸೆಂಬರ್​ನಲ್ಲಿ ಉಂಟಾದ ವಿಮಾನಗಳ ಹಾರಾಟದ ತೊಂದರೆಗೆ ಇಂಡಿಗೋಗೆ 22 ಕೋಟಿ ರೂ. ದಂಡ!

ಡಿಸೆಂಬರ್ 2025ರಲ್ಲಿ ಸಂಭವಿಸಿದ ಬೃಹತ್ ವಿಮಾನ ಹಾರಾಟದ ಅಡಚಣೆಗಳ ಹಿಂದೆ ಪ್ಲಾನಿಂಗ್ ಕೊರತೆ, ಕಾರ್ಯಾಚರಣೆ ಮತ್ತು ನಿಯಂತ್ರಕ ಲೋಪಗಳು ಕಂಡುಬಂದಿವೆ ಎಂದು ತನಿಖೆಯಲ್ಲಿ ಕಂಡುಬಂದ ನಂತರ ನಾಗರಿಕ ವಿಮಾನಯಾನ ನಿಯಂತ್ರಕ (ಡಿಜಿಸಿಎ) ಇಂಡಿಗೋ ಸಂಸ್ಥೆಗೆ 22.20 ಕೋಟಿ ರೂ. ದಂಡ ವಿಧಿಸಿದೆ. ಕಳೆದ ವರ್ಷ ಡಿಸೆಂಬರ್ 3 ಮತ್ತು 5ರ ನಡುವೆ ಇಂಡಿಗೋ ವಿಮಾನಗಳಲ್ಲಿ ಭಾರೀ ವಿಳಂಬಗಳು ಮತ್ತು ರದ್ದತಿಗಳು ಸಂಭವಿಸಿತ್ತು. ಈ ಸಮಯದಲ್ಲಿ ಇಂಡಿಗೋ 2,507 ವಿಮಾನಗಳನ್ನು ರದ್ದುಗೊಳಿಸಿತ್ತು ಮತ್ತು 1,852 ವಿಮಾನಗಳು ವಿಳಂಬವಾಗಿದ್ದವು. ಇದರಿಂದ 3 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು.

IndiGo Crisis: ಡಿಸೆಂಬರ್​ನಲ್ಲಿ ಉಂಟಾದ ವಿಮಾನಗಳ ಹಾರಾಟದ ತೊಂದರೆಗೆ ಇಂಡಿಗೋಗೆ 22 ಕೋಟಿ ರೂ. ದಂಡ!
Indigo
ಸುಷ್ಮಾ ಚಕ್ರೆ
|

Updated on: Jan 17, 2026 | 11:05 PM

Share

ನವದೆಹಲಿ, ಜನವರಿ 17: 2025ರ ಡಿಸೆಂಬರ್​ನಲ್ಲಿ ಇಂಡಿಗೋ (IndiGo) ಪ್ರಯಾಣಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಡಿಸೆಂಬರ್ 3ರಿಂದ 5ರವರೆಗೆ ಇಂಡಿಗೋ ಸಾವಿರಾರು ವಿಮಾನಗಳ ಹಾರಾಟವನ್ನು ರದ್ದುಮಾಡಿತ್ತು. ವಿಮಾನಗಳ ರದ್ದತಿ ಮತ್ತು ವಿಳಂಬಗಳಿಗೆ ಪ್ರತಿಕ್ರಿಯೆಯಾಗಿ ಭಾರತದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ಸಂಸ್ಥೆಗೆ 22.2 ಕೋಟಿ ರೂ. ದಂಡ ವಿಧಿಸಿದೆ. ಇದರ ಜೊತೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ.

ಡಿಸೆಂಬರ್ ಮೊದಲ ವಾರ ಇಂಡಿಗೋ 2,507 ವಿಮಾನಗಳನ್ನು ರದ್ದುಗೊಳಿಸಿತ್ತು. ಇಂಡಿಗೋದ 1,852 ವಿಮಾನಗಳ ಹಾರಾಟ ವಿಳಂಬಗೊಂಡಿತ್ತು. ಇದರಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡಿದ್ದರು. ಇದರಿಂದ ಸಾವಿರಾರು ಪ್ರಯಾಣಿಕರು ಮದುವೆ, ತಿಥಿ, ನಾಮಕರಣ ಮುಂತಾದ ತಮ್ಮ ಜೀವನದ ಅಮೂಲ್ಯ ಕ್ಷಣಗಳಿಂದ ವಂಚಿತರಾದರು. ಅನೇಕ ಜನರು ಆಹಾರ, ನಿದ್ರೆಯಿಲ್ಲದೆ ಅನಾರೋಗ್ಯಕ್ಕೂ ತುತ್ತಾದರು. ಈ ಸಮಸ್ಯೆಗಳನ್ನು ಪರಿಹರಿಸಲು ಇಂಡಿಗೋ ಸಂಸ್ಥೆ ವಿಫಲವಾದ ಕಾರಣ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರ ಕೂಡ ಇಂಡಿಗೋ ಮುಖ್ಯಸ್ಥರ ಜೊತೆ ಸಭೆ ನಡೆಸಿ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಅದರಂತೆ ಇದೀಗ ಭಾರೀ ಪ್ರಮಾಣದ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ವಿಮಾನ ರದ್ದತಿಯಿಂದ ತೀವ್ರ ತೊಂದರೆಗೊಳಗಾದ ಪ್ರಯಾಣಿಕರಿಗೆ ಇಂಡಿಗೋದಿಂದ 10,000 ರೂ. ಪ್ರಯಾಣ ವೋಚರ್‌

“ಡಿಸೆಂಬರ್ 2025ರ ಅಡಚಣೆಗಳ ಸಂದರ್ಭದಲ್ಲಿ ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ಕಾರ್ಯಾಚರಣೆಯ ಲೋಪಗಳಿಗೆ ನಾವು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ. ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಬದ್ಧರಾಗಿದ್ದೇವೆ” ಎಂದು ಇಂಡಿಗೋ ವಕ್ತಾರರು ಹೇಳಿದ್ದಾರೆ. ಇದರ ಜೊತೆಗೆ ವಿಮಾನಗಳು ರದ್ದಾದ ಅಥವಾ 3 ಗಂಟೆಗಳಿಗಿಂತ ಹೆಚ್ಚು ವಿಳಂಬವಾದ ಪ್ರಯಾಣಿಕರಿಗೆ 10,000 ರೂ. ವೋಚರ್ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್