ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್
ಇಂಡಿಗೋ ವಿಮಾನ
Follow us
|

Updated on:Jun 01, 2024 | 1:03 PM

ಚೆನ್ನೈ ಜೂನ್ 01: ಶನಿವಾರ ಚೆನ್ನೈನಿಂದ (Chennai) ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ (emergency landing) ಮಾಡಿದೆ. ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸದ್ಯ ವಿಮಾನವು ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವನ್ನು ಟರ್ಮಿನಲ್​​ಗೆ ತರಲಾಗುವುದು ಎಂದು ಇಂಡಿಗೋ ಹೇಳಿದೆ.

ಶುಕ್ರವಾರ 177 ಪ್ರಯಾಣಿಕರಿದ್ದ ದೆಹಲಿ-ಶ್ರೀನಗರ ವಿಸ್ತಾರಾ ವಿಮಾನ ಹಾರಾಟದ ವೇಳೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನವು ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಂಡ ನಂತರ, ಭದ್ರತಾ ಪರಿಶೀಲನೆಯ ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಪರಿಗಣಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದ ಏರ್ ಟ್ರಾಫಿಕ್ ಕಂಟ್ರೋಲ್ ಗೆ ‘ಬೆದರಿಕೆ ಕರೆ’ಯ ಮಾಹಿತಿ ಸಿಕ್ಕಿತ್ತು. ಮೇ 28 ರಂದು ದೆಹಲಿಯಿಂದ ವಾರಣಾಸಿಗೆ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಬಂದಿದ್ದರಿಂದ ಪ್ರಯಾಣಿಕರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸಲಾಯಿತು.

ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6E2211 ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ದಿಷ್ಟ ಬಾಂಬ್ ಬೆದರಿಕೆಯನ್ನು ಪಡೆದಿತ್ತು. ಎಲ್ಲಾ ಅಗತ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ. ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗದಲ್ಲಿರಿಸಿದ್ದು, ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನದ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: West Bengal: ಮತಗಟ್ಟೆ ಬಳಿಯಿರುವ ಕೊಳಕ್ಕೆ EVM ಎಸೆದು ದುಷ್ಕೃತ್ಯ; ವಿಡಿಯೋ ವೈರಲ್

ಆದಾಗ್ಯೂ, ತಮ್ಮ ಬ್ಯಾಗ್‌ಗಳೊಂದಿಗೆ ತುರ್ತು ಸ್ಲೈಡ್‌ಗಳನ್ನು ಬಳಸಿಕೊಂಡು ಸ್ಥಳಾಂತರಿಸುವ ಸಮಯದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ಆ ವಿಮಾನದಲ್ಲಿನ ಎಲ್ಲಾ ನಾಲ್ವರು ಕ್ಯಾಬಿನ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಸ್ಥಳಾಂತರ ವಿಡಿಯೊದಲ್ಲಿ, ಪೈಲಟ್ ಸಾಮಾನು ಸರಂಜಾಮುಗಳೊಂದಿಗೆ ತುರ್ತು ಸ್ಲೈಡ್ ಮೂಲಕ ವಿಮಾನದಿಂದ ಹೊರಬರುತ್ತಿರುವುದು ವಿಡಿಯೊದಲ್ಲಿದೆ. ಅಂತರಾಷ್ಟ್ರೀಯ ಮಾನದಂಡಗಳ ಅಡಿಯಲ್ಲಿ, ಸ್ಥಳಾಂತರಿಸುವ ಸಮಯದಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ತಮ್ಮ ಸಾಮಾನುಗಳನ್ನು ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ. ಯಾಕೆಂದರೆ ಅದು ಸ್ಥಳಾಂತರಿಸುವುದಕ್ಕೆ ಹೆಚ್ಚಿನ ಸಮಯ ಬೇಡುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Sat, 1 June 24

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ