ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ
ವಿಮಾನ
Image Credit source: Siasat.com

Updated on: Aug 28, 2023 | 2:53 PM

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಇಂಡಿಗೋ ವಿಮಾನವು ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಬಾಂಬ್ ಬೆದರಿಕೆ ಬಂದಿತ್ತು. ಬೆದರಿಕೆ ಕರೆ ಬಂದ ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ವಿಮಾನವನ್ನು ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

6E6482 ವಿಮಾನವು ಬೆಳಗ್ಗೆ 10.30ಕ್ಕೆ ಬೆಂಗಳೂರಿಗೆ ಹೊರಡಬೇಕಿತ್ತು, ಬಾಂಬ್ ಬೆದರಿಕೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಸೋಮವಾರ ಬೆಂಗಳೂರಿಗೆ ಹೋಗುವ ಇಂಡಿಗೋ ವಿಮಾನಕ್ಕೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಪಿಟಿಐಗೆ ತಿಳಿಸಿವೆ.

ಮತ್ತಷ್ಟು ಓದಿ: ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಇಂಡಿಗೋ ವಿಮಾನ 6E6482 ಕೊಚ್ಚಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ಸುಮಾರು ಬೆಳಗ್ಗೆ 10.30ರ ವೇಳೆಗೆ ಕರೆ ಬಂದಿತ್ತು. ಬಾಂಬ್ ಬೆದರಿಕೆ ವರದಿಯಾದ ಕೂಡಲೇ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಜಂಟಿ ತನಿಖೆ ನಡೆಸಿದ್ದು, ವಿಮಾನದೊಳಗೆ ಸಂಪೂರ್ಣ ಶೋಧ ನಡೆಸಲಾಗಿದೆ. ಆದರೆ, ನಂತರ ಅಧಿಕಾರಿಗಳು ಬಾಂಬ್ ಬೆದರಿಕೆ ಸುಳ್ಳು ಎಂದು ಖಚಿತಪಡಿಸಿದರು. ಸುಮಾರು ಮೂರು ಗಂಟೆಗಳ ಕಾಲ ತಡವಾಗಿ ಇಂಡಿಗೋ ವಿಮಾನವು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಹೊರಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us