AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

168 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ

ಇಂಧನ ಕಡಿಮೆ ಇರುವುದರಿಂದ ಇಂಡಿಗೋ ವಿಮಾನವನ್ನು 'ಮೇಡೇ' ಎಂದು ಘೋಷಿಸಲಾಯಿತು. ತಕ್ಷಣ ಗುವಾಹಟಿ-ಚೆನ್ನೈ ಮಾರ್ಗದ ಇಂಡಿಗೋ ವಿಮಾನದ ಮಾರ್ಗ ಬದಲಾಯಿಸಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಗುವಾಹಟಿಯಿಂದ ಚೆನ್ನೈಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಕಡಿಮೆ ಇಂಧನವಿದೆ ಎಂದು ಕ್ಯಾಪ್ಟನ್ ಘೋಷಿಸಿದ ನಂತರ ಆ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿತು.

168 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ
Indigo
ಸುಷ್ಮಾ ಚಕ್ರೆ
|

Updated on:Jun 21, 2025 | 6:50 PM

Share

ಬೆಂಗಳೂರು, ಜೂನ್ 21: ಪೈಲಟ್‌ಗಳು ‘ಮೇಡೇ’ (MayDay) ಎಂದು ಘೋಷಿಸಿದ ನಂತರ ಗುವಾಹಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನಲ್ಲಿ (Bengaluru Airport) ತುರ್ತು ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ. ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಡ್ರೀಮ್‌ಲೈನರ್ ವಿಮಾನವು ಕೆಲವು ದಿನಗಳ ಹಿಂದೆ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿತ್ತು. ಆ ವೇಳೆ ಕೂಡ ಪೈಲಟ್ ಮೇಡೇ ಘೋಷಿಸಿದ್ದರು. ಆದರೆ, ಅದಕ್ಕೆ ಪ್ರತಿಕ್ರಿಯಿಸುವ ಮುನ್ನ ವಿಮಾನ ಅಪಘಾತಕ್ಕೀಡಾಗಿತ್ತು. ಅದಾದ ಕೇವಲ ಒಂದು ವಾರದ ನಂತರ ಈ ಘಟನೆ ನಡೆದಿದೆ.

ಈ ಘಟನೆ ಗುರುವಾರ ರಾತ್ರಿಯೇ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ. “ಮೇಡೇ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ವಿಮಾನ ನಿಲ್ದಾಣದ ಸಿಬ್ಬಂದಿಗೆ ಎಚ್ಚರಿಕೆ ನೀಡಿತು, ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ಇಂಡಿಗೋ ವಿಮಾನವು ಗುರುವಾರ ರಾತ್ರಿ 8.20ಕ್ಕೆ ಸುರಕ್ಷಿತವಾಗಿ ಇಳಿಯಿತು” ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಇಂಧನದ ಪರೀಕ್ಷೆ ಮಾಡಿಕೊಳ್ಳದೆ ಹಾರಾಟಕ್ಕೆ ಮುಂದಾಗಿದ್ದಕ್ಕೆ ಆ ವಿಮಾನದ ಇಬ್ಬರಯ ಪೈಲಟ್​​ಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ, ಇಂಡಿಗೋ ಈ ಬಗ್ಗೆ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: Air India: ಜೂ.21ರಿಂದ ಜು.15ರವರೆಗೆ 3 ವಿದೇಶಿ ಮಾರ್ಗಗಳಲ್ಲಿ ಏರ್​ಇಂಡಿಯಾ ವಿಮಾನ ಸೇವೆ ಸ್ಥಗಿತ

ಇದೇ ರೀತಿ ಶುಕ್ರವಾರ, ಮಧುರೈಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ತಾಂತ್ರಿಕ ದೋಷವನ್ನು ಅನುಭವಿಸಿತು. ಬಳಿಕ ಚೆನ್ನೈಗೆ ಹಿಂತಿರುಗಲು ಮತ್ತು ಲ್ಯಾಂಡ್ ಆಗಲು ಅನುಮತಿ ಕೋರಿತು. ಸುಮಾರು 68 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಾಂತ್ರಿಕ ದೋಷ: ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಮೇಡೇ ಎಂದರೇನು?:

ಮೇಡೇ ಕರೆ ಎನ್ನುವುದು ಜೀವಕ್ಕೆ ಅಪಾಯಕಾರಿ ತುರ್ತು ಪರಿಸ್ಥಿತಿಯನ್ನು ತಿಳಿಸಲು ವಾಯುಯಾನ ಮತ್ತು ಸಮುದ್ರ ಕಾರ್ಯಾಚರಣೆಗಳಲ್ಲಿ ಬಳಸಲಾಗುವ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಒಂದು ಸಂಕೇತವಾಗಿದೆ. “ಮೈಡೆಜ್” (“ನನಗೆ ಸಹಾಯ ಮಾಡಿ”) ಎಂಬ ಫ್ರೆಂಚ್ ಪದಗುಚ್ಛದಿಂದ ಇದನ್ನು ಪಡೆಯಲಾಗಿದೆ. ಸ್ಪಷ್ಟತೆ ಮತ್ತು ತಕ್ಷಣದ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಇದನ್ನು 3 ಬಾರಿ ಪುನರಾವರ್ತಿಸಲಾಗುತ್ತದೆ. “ಮೇಡೇ, ಮೇಡೇ, ಮೇಡೇ” ಎಂದು ಪೈಲಟ್ ಘೋಷಿಸಿದರೆ ಆ ವಿಮಾನ ಅಪಾಯದಲ್ಲಿದೆ ಎಂದು ಅರ್ಥ. ಸುಳ್ಳು ಅಥವಾ ಸುಮ್ಮನೆ ಮೇಡೇ ಘೋಷಿಸಿದರೆ ಅದನ್ನು ನಿಯಮದ ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:50 pm, Sat, 21 June 25

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು