ಬಾಂಬ್ ಬೆದರಿಕೆ: ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಬಾಂಬ್ ಬೆದರಿಕೆ(Bomb Threat) ಬಂದ ಹಿನ್ನೆಲೆಯಲ್ಲಿ ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 6E2706 ವಿಮಾನವು ಬೆಳಗ್ಗೆ 9.20ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.35ಕ್ಕೆ ದೆಹಲಿಯಲ್ಲಿ ಇಳಿಯಬೇಕಿತ್ತು. ಪ್ರಯಾಣಿಕರನ್ನು ನಾಗ್ಪುರದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಬಾಂಬ್ ಬೆದರಿಕೆ: ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ಇಂಡಿಗೋ

Updated on: Jun 17, 2025 | 2:09 PM

ಕೊಚ್ಚಿ, ಜೂನ್ 17: ಬಾಂಬ್ ಬೆದರಿಕೆ(Bomb Threat) ಬಂದ ಹಿನ್ನೆಲೆಯಲ್ಲಿ ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 6E2706 ವಿಮಾನವು ಬೆಳಗ್ಗೆ 9.20ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.35ಕ್ಕೆ ದೆಹಲಿಯಲ್ಲಿ ಇಳಿಯಬೇಕಿತ್ತು. ಪ್ರಯಾಣಿಕರನ್ನು ನಾಗ್ಪುರದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು ತನಿಖೆ ನಡೆಯುತ್ತಿದೆ.

ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಮಂಗಳವಾರ ಬೆಳಗ್ಗೆ ಬಾಂಬ್ ಬೆದರಿಕೆ ಕರೆ ಸ್ವೀಕರಿಸಿತ್ತು ಎಂದು ಕೊಚ್ಚಿ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ವಿಮಾನ ಸಂಖ್ಯೆಯನ್ನು ಕೂಡ ಉಲ್ಲೇಖಿಸಲಾಗಿದೆ. ಅಧಿಕೃತವಾಗಿ ವಿಮಾನದ ಸಂಖ್ಯೆ ನೀಡಿದಾಗ ಬೆದರಿಕೆ ಬಂದಿದ್ದು ಸತ್ಯ ಎಂದು ನಂಬಬಹುದು.

ವಿಮಾನವು ಆಗಲೇ ಕೊಚ್ಚಿಯಿಂದ ಹೊರಟಿತ್ತು, ಆದ್ದರಿಂದ ಅದನ್ನು ನಾಗ್ಪುರಕ್ಕೆ ತಿರುಗಿಸಲಾಯಿತು. ಇಂದು ಮುಂಜಾನೆ, ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು, ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ನಿಗದಿತ ನಿಲುಗಡೆಯ ಸಮಯದಲ್ಲಿ ಎಂಜಿನ್‌ಗಳಲ್ಲಿ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ, ಪ್ರಯಾಣಿಕರು ಕೆಳಗಿಳಿಯಬೇಕಾಯಿತು.

ಮತ್ತಷ್ಟು ಓದಿ: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ಪ್ರಧಾನಿ ಮೋದಿ ಬಳಿ ಹೇಳಿದ್ದೇನು? ಇಲ್ಲಿದೆ ವಿವರ

ಸೋಮವಾರ ಸಂಜೆ, ದೆಹಲಿಗೆ ಹೊರಟಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸುಮಾರು 90 ನಿಮಿಷಗಳ ನಂತರ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಏರ್ ಇಂಡಿಯಾ ವಿಮಾನ AI 315 ಸೋಮವಾರ ಬೆಳಗ್ಗೆ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿತ್ತು.

ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ ನಂತರ, ಹೈದರಾಬಾದ್‌ಗೆ ಹೋಗುತ್ತಿದ್ದ ಲುಫ್ತಾನ್ಸಾ ವಿಮಾನವು ಫ್ರಾಂಕ್‌ಫರ್ಟ್‌ಗೆ ಮರಳಿತ್ತು. ಬೆದರಿಕೆ ಬಂದಾಗ ವಿಮಾನವು ಇನ್ನೂ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿರಲಿಲ್ಲ. ಜೂನ್ 12 ರಂದು ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಬಳಿಕ ವಿಮಾನಗಳ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ