AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲಾಘಾತ: ಮುಂಭಾಗ ಜಖಂ, ಲಕ್ನೋದಲ್ಲಿ ಇಳಿದ ವಿಮಾನ

ಪಾಟ್ನಾದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ 17,000 ಅಡಿ ಎತ್ತರದಲ್ಲಿ ಸಿಡಿಲು ಬಡಿದು ಮುಂಭಾಗ ಜಖಂಗೊಂಡಿತು. ಪೈಲಟ್ ಸಮಯಪ್ರಜ್ಞೆಯಿಂದ ಲಕ್ನೋದಲ್ಲಿ ಸುರಕ್ಷಿತವಾಗಿ ಇಳಿದ ಕಾರಣ, ವಿಮಾನದಲ್ಲಿದ್ದ 104 ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾದರು. ಪ್ರತಿಕೂಲ ಹವಾಮಾನದ ಮಧ್ಯೆಯೂ ಆದ ಈ ಘಟನೆ, ವಿಮಾನ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ.

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲಾಘಾತ: ಮುಂಭಾಗ ಜಖಂ, ಲಕ್ನೋದಲ್ಲಿ ಇಳಿದ ವಿಮಾನ
ವಿಮಾನ Image Credit source: Oxomiya Jiyori x account
ನಯನಾ ರಾಜೀವ್
|

Updated on: Oct 08, 2026 | 7:49 AM

Share

ಲಕ್ನೋ, ಅಕ್ಟೋಬರ್ 08: ಪಾಟ್ನಾದಿಂದ ಉತ್ತರ ಪ್ರದೇಶದ ಲಕ್ನೋಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನಕ್ಕೆ ಸುಮಾರು 17,000 ಅಡಿ ಎತ್ತರದಲ್ಲಿ ಭೀಕರ ಸಿಡಿಲು ಬಡಿದ ಘಟನೆ ನಡೆದಿದೆ. ಸಿಡಿಲಾಘಾತದ ತೀವ್ರತೆಗೆ ವಿಮಾನದ ಮುಂಭಾಗ ಗಂಭೀರವಾಗಿ ಜಖಂಗೊಂಡಿದೆ. ಅದೃಷ್ಟವಶಾತ್, ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ 104 ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಇಂಡಿಗೋ ಸಂಸ್ಥೆಯ ವಿಮಾನ ಸಂಖ್ಯೆ 6E925 ಪಾಟ್ನಾ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.10ಕ್ಕೆ ಹೊರಟು ಸಂಜೆ 4.20ಕ್ಕೆ ಲಕ್ನೋ ತಲುಪಬೇಕಿತ್ತು.

ಲಕ್ನೋ ಸಮೀಪಿಸುತ್ತಿದ್ದಂತೆ ಪ್ರತಿಕೂಲ ಹವಾಮಾನ ಎದುರಾಗಿ ಭಾರೀ ಗುಡುಗು-ಮಿಂಚಿನ ನಡುವೆ ವಿಮಾನಕ್ಕೆ ಸಿಡಿಲು ಅಪ್ಪಳಿಸಿದೆ. ಪರಿಣಾಮವಾಗಿ ಮುಂಭಾಗದ ರೇಡಾರ್ ಕವಚ ಜಖಂಗೊಂಡಿತು. ಪರಿಸ್ಥಿತಿಯನ್ನು ಅತ್ಯಂತ ಜಾಣ್ಮೆಯಿಂದ ನಿಭಾಯಿಸಿದ ಪೈಲಟ್, ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಸಂಜೆ 4.05ಕ್ಕೆ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರು.

ಇದೇ ವಿಮಾನವು ಲಕ್ನೋದಿಂದ ಅಹಮದಾಬಾದ್‌ಗೆ (6E6968) ತೆರಳಬೇಕಿತ್ತು. ಹಾನಿಗೊಳಗಾದ ವಿಮಾನವನ್ನು ತಪಾಸಣೆಗಾಗಿ ಅಲ್ಲೇ ನಿಲ್ಲಿಸಿ, ಪ್ರಯಾಣಿಕರಿಗೆ ಮತ್ತೊಂದು ಬದಲಿ ವಿಮಾನ ವ್ಯವಸ್ಥೆ ಮಾಡಿ ಸಂಜೆ 6.22ಕ್ಕೆ ಅಹಮದಾಬಾದ್‌ಗೆ ಕಳುಹಿಸಿಕೊಡಲಾಯಿತು. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಅಗರ್ತಲಾಕ್ಕೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ವಿದ್ಯುತ್ ವ್ಯವಸ್ಥೆ ಸ್ಥಗಿತಗೊಂಡಿತ್ತು. 141 ಪ್ರಯಾಣಿಕರನ್ನು ಬದಲಿ ವಿಮಾನದಲ್ಲಿ ಕಳುಹಿಸಲಾಗಿತ್ತು.

ಮತ್ತಷ್ಟು ಓದಿ: ಚಿಕಾಗೋಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ದಿಢೀರ್ 9,000 ಅಡಿಗೆ ಕುಸಿತ, ಎಮರ್ಜೆನ್ಸಿ ಘೋಷಣೆ: ಲಂಡನ್​ಗೆ ವಾಪಸ್

ಬೆಂಗಳೂರಿನಲ್ಲಿ ಟೇಲ್-ಸ್ಟ್ರೈಕ್: ಕಳೆದ ತಿಂಗಳು ಗುವಾಹಟಿಯಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ A321 ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಬಾರಿ ಲ್ಯಾಂಡಿಂಗ್ ಮಾಡಲು ಯತ್ನಿಸಿದಾಗ ಬಾಲದ ಭಾಗವು ರನ್‌ವೇಗೆ ತಾಗಿ ಅಸಹಜ ಸಂಪರ್ಕ ಅನುಭವಿಸಿತ್ತು.

ವಿಮಾನಗಳಿಗೆ ಸಿಡಿಲು ಬಡಿದರೆ ಏನಾಗುತ್ತದೆ?

ಆಧುನಿಕ ವಿಮಾನಗಳನ್ನು ಅಲ್ಯೂಮಿನಿಯಂ ಅಥವಾ ವಾಹಕ ಜಾಲರಿಗಳಿಂದ ನಿರ್ಮಿಸಲಾಗಿರುತ್ತದೆ. ಸಿಡಿಲು ಬಡಿದಾಗ ವಿದ್ಯುತ್ ಪ್ರವಾಹವು ಹೊರಮೈ ಮೂಲಕ ಹರಿದು ವಿಮಾನದ ಬಾಲ ಅಥವಾ ರೆಕ್ಕೆಯ ತುದಿಯಿಂದ ಹೊರಹೋಗುತ್ತದೆ. ಆದರೆ ಕೆಲವೊಮ್ಮೆ ರೇಡಾರ್ ಇರುವ ಮುಂಭಾಗದ ಸಂಯೋಜಿತ ಫೈಬರ್ ಭಾಗಗಳಿಗೆ ನೇರ ಹೊಡೆತ ಬಿದ್ದಾಗ ಹೀಗೆ ಬಿರುಕು ಅಥವಾ ಗುಳಿ ಬೀಳುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ