AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು

ಚೆನ್ನೈನಲ್ಲಿ ಇಂಡಿಗೋ ವಿಮಾನ ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪೈಲಟ್ ಬಿರುಕು ಗಮನಿಸಿದ ತಕ್ಷಣ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ಎಚ್ಚರಿಕೆ ನೀಡಿದರು.

ಇಂಡಿಗೋ ವಿಮಾನದ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು
ಇಂಡಿಗೋ
ನಯನಾ ರಾಜೀವ್
|

Updated on: Oct 11, 2025 | 9:24 AM

Share

ಚೆನ್ನೈ, ಅಕ್ಟೋಬರ್ 11: ಚೆನ್ನೈನಲ್ಲಿ ಇಂಡಿಗೋ ವಿಮಾನ(IndiGO Flight) ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪೈಲಟ್ ಬಿರುಕು ಗಮನಿಸಿದ ತಕ್ಷಣ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ಎಚ್ಚರಿಕೆ ನೀಡಿದರು.

ಸುರಕ್ಷತಾ ಪ್ರೋಟೋಕಾಲ್‌ಗಳನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು, ಸುರಕ್ಷಿತ ಲ್ಯಾಂಡಿಂಗ್ ಮಾಡಲಾಗಿದೆ. ಮಧುರೈನಿಂದ ಆಗಮಿಸುತ್ತಿದ್ದ ಇಂಡಿಗೋ ವಿಮಾನದ ಮುಂಭಾಗದ ವಿಂಡ್ ಷೀಲ್ಡ್ ನಲ್ಲಿ ಬಿರುಕು ಕಂಡುಬಂದಿದೆ. ಯಾವುದೇ ತೊಂದರೆಯಿಲ್ಲದೆ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ಲ್ಯಾಂಡಿಂಗ್ ನಂತರ, ವಿಮಾನವನ್ನು ಬೇ ನಂ. 95 ಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ತಾಂತ್ರಿಕ ತಂಡಗಳು ಹಾನಿಗೊಳಗಾದ ಗಾಜು ಬದಲಾಯಿಸಲು ಸಿದ್ಧತೆಗಳನ್ನು ಪ್ರಾರಂಭಿಸಿದವು. ಬಿರುಕಿಗೆ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರಿನಿಂದ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಕಾಕ್​ಪಿಟ್ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಒತ್ತಿ ಹೇಳಿದರು.ಹಬ್ಬದ ಸೀಸನ್​ಗೂ ಮುಂಚಿತವಾಗಿ ವಿಮಾನದ ಸುರಕ್ಷತೆ, ಕಾರ್ಯಾಚರಣೆ ಕುರಿತು ಮಾಹಿತಿ ಪಡೆಯಲು ನಾಯ್ಡು ತೆರಳಿದ್ದರು.

ಮತ್ತೊಂದು ಘಟನೆ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನ ಸುರಕ್ಷಿತವಾಗಿ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು . ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

ಹಕ್ಕಿ ಡಿಕ್ಕಿ ಹೊಡೆದ ವಿಮಾನವು ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಲು ನಿರ್ಧರಿಸಲಾಗಿತ್ತು. ಮೂಲಗಳ ಪ್ರಕಾರ, ಈ ಮಾರ್ಗಕ್ಕೆ ಮತ್ತೊಂದು ವಿಮಾನವನ್ನು ನಿಯೋಜಿಸಲಾಗಿದ್ದರಿಂದ ಈ ಸೇವೆ ಕೆಲವು ಗಂಟೆಗಳ ಕಾಲ ವಿಳಂಬವಾಯಿತು.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಸಂಖ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!