Indira Gandhi Birth Anniversary: ಭಾರತದ ಐರನ್ ಲೇಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಲಂಡನ್‌ನ ಮೇಡಮ್ ಟುಸ್ಸಾಡ್ಸ್‌ನಲ್ಲಿ ಮೇಣದ ಪ್ರತಿಮೆ ಹೊಂದಿರುವ ಮೊದಲ ಭಾರತೀಯರಲ್ಲಿ ಇಂದಿರಾ ಗಾಂಧಿ ಕೂಡ ಒಬ್ಬರು. ಇಂದಿರಾ ಗಾಂಧಿ ಭಾರತದ ಅತ್ಯಂತ ಪ್ರಭಾವಶಾಲಿ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು.

Indira Gandhi Birth Anniversary: ಭಾರತದ ಐರನ್ ಲೇಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ
ಇಂದಿರಾ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 19, 2022 | 9:07 AM

ನವದೆಹಲಿ: ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್​​ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕಿಯಾಗಿದ್ದರು. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು (Jawaharlal Nehru) ನಂತರ ಭಾರತದ ಎರಡನೇ ಅತಿ ಹೆಚ್ಚು ಅವಧಿಯ ಪ್ರಧಾನ ಮಂತ್ರಿಯಾಗಿದ್ದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ಮನೆಯ ಇಬ್ಬರು ಭದ್ರತಾ ಸಿಬ್ಬಂದಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಭಾರತದ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 105ನೇ ಜನ್ಮದಿನವಾದ ಇಂದು ಅವರ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇವೆ.

  1. ಇಂದಿರಾ ಗಾಂಧಿ ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ. ಅವರು ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಜನವರಿ 1980ರಿಂದ ಅಕ್ಟೋಬರ್ 1984ರಲ್ಲಿ ಅವರ ಹತ್ಯೆಯಾಗುವವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
  2. ಇಂದಿರಾ ಗಾಂಧಿಯವರು ದೆಹಲಿಯ ಮಾಡರ್ನ್ ಸ್ಕೂಲ್, ಸೇಂಟ್ ಸಿಸಿಲಿಯಾಸ್ ಮತ್ತು ಅಲಹಾಬಾದ್‌ನ ಸೇಂಟ್ ಮೇರಿಸ್ ಕಾನ್ವೆಂಟ್‌ನಲ್ಲಿ ಅಧ್ಯಯನ ಮಾಡಿದರು. ಅವರು ಜಿನೀವಾ ಇಂಟರ್‌ನ್ಯಾಶನಲ್ ಸ್ಕೂಲ್, ಬ್ಯೂಕ್ಸ್‌ನಲ್ಲಿರುವ ಎಕೋಲ್ ನೌವೆಲ್ಲೆ ಮತ್ತು ಪುಣೆ ಮತ್ತು ಬಾಂಬೆಯ ಪೀಪಲ್ಸ್ ಓನ್ ಸ್ಕೂಲ್‌ನಲ್ಲಿಯೂ ಅಧ್ಯಯನ ಮಾಡಿದ್ದರು. ಬಳಿಕ ಇಂದಿರಾ ಗಾಂಧಿಯವರು ಉನ್ನತ ಶಿಕ್ಷಣವನ್ನು ಪಡೆಯಲು ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯಕ್ಕೆ ಸೇರಿಕೊಂಡರು. ಆದರೆ, ಅವರ ಕೋರ್ಸ್ ಮುಗಿಸಲು ಸಾಧ್ಯವಾಗಲಿಲ್ಲ.
  3. ಭಾರತಕ್ಕೆ ಮರಳಿದ ನಂತರ ಅವರು 1942ರಲ್ಲಿ ಫಿರೋಜ್ ಗಾಂಧಿಯನ್ನು ವಿವಾಹವಾದರು. ಅವರಿಗೆ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಎಂಬ ಇಬ್ಬರು ಗಂಡು ಮಕ್ಕಳಿದ್ದರು.
  4. ಇಂದಿರಾ ಗಾಂಧಿಯವರು ಪ್ರಧಾನಿಯಾಗಿ ಮೊದಲ ಅವಧಿಯಲ್ಲಿ 14 ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿದರು. ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ರಚನೆಗೆ ಕಾರಣವಾದ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸಿ ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಕರೆ ನೀಡಿದ್ದರು.
  5. ಇಂದಿರಾ ಗಾಂಧಿಯವರು 1959ರಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡರು.
  6. ಇಂದಿರಾ ಗಾಂಧಿ ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಕಮಲಾ ನೆಹರು ಅವರ ಏಕೈಕ ಪುತ್ರಿಯಾಗಿದ್ದರು.
  7. ಇಂದಿರಾ ಗಾಂಧಿಯವರು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಅಧ್ಯಯನ ಮಾಡಿದರು. ಅಲ್ಲಿ ಪ್ರಸಿದ್ಧ ಬರಹಗಾರ ಮತ್ತು ಕವಿ ರವೀಂದ್ರನಾಥ ಟ್ಯಾಗೋರ್ ಅವರು ಇಂದಿರಾ ಗಾಂಧಿ ಅವರಿಗೆ ಪ್ರಿಯದರ್ಶಿನಿ ಎಂದು ಹೆಸರಿಟ್ಟರು.
  8. ಲಂಡನ್‌ನ ಮೇಡಮ್ ಟುಸ್ಸಾಡ್ಸ್‌ನಲ್ಲಿ ಮೇಣದ ಪ್ರತಿಮೆ ಹೊಂದಿರುವ ಮೊದಲ ಭಾರತೀಯರಲ್ಲಿ ಇಂದಿರಾ ಗಾಂಧಿ ಕೂಡ ಒಬ್ಬರು.
  9. ಅಕ್ಟೋಬರ್ 31, 1984ರಂದು ಇಂದಿರಾ ಗಾಂಧಿ ಅವರನ್ನು ಅವರ ಇಬ್ಬರು ಅಂಗರಕ್ಷಕರು ಗುಂಡಿಕ್ಕಿ ಕೊಂದರು. ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ಅಡಗಿದ್ದ ಸಿಖ್ ಉಗ್ರರ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಕರೆ ನೀಡಿದ್ದ ಆಕೆಯ ‘ಆಪರೇಷನ್ ಬ್ಲೂ ಸ್ಟಾರ್’ಗೆ ಪ್ರತೀಕಾರವಾಗಿ ಆಕೆಯ ಅಂಗರಕ್ಷಕರು ಆಕೆಯ ಮೇಲೆ 31 ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಿದ್ದರು.
  10. ಇಂದಿರಾ ಗಾಂಧಿ ಭಾರತದ ಅತ್ಯಂತ ಪ್ರಭಾವಶಾಲಿ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು. 1975ರ ಜೂನ್ ತಿಂಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಇಂದಿರಾ ಗಾಂಧಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದರು. ಭಾರತ ದೇಶಕ್ಕೆ ಭದ್ರತಾ ಬೆದರಿಕೆಗಳ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಇಂದಿರಾ ಗಾಂಧಿ ದೇಶದ ಜನರಿಗೆ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ