Kannada News National Indira Gandhi death anniversary 10 interesting facts about Iron lady of India Kannada News
Indira Gandhi Death Anniversary: ಇಂದು ಇಂದಿರಾ ಗಾಂಧಿ ಪುಣ್ಯತಿಥಿ; ಭಾರತದ ಉಕ್ಕಿನ ಮಹಿಳೆ ಬಗ್ಗೆ ನಿಮಗೆಷ್ಟು ಗೊತ್ತು?
1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ಮನೆಯ ಇಬ್ಬರು ಭದ್ರತಾ ಸಿಬ್ಬಂದಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಭಾರತದ ಉಕ್ಕಿನ ಮಹಿಳೆ ಎಂದೇ ಹೆಸರಾಗಿದ್ದ ಇಂದಿರಾ ಗಾಂಧಿ ಕುರಿತ 10 ಕುತೂಹಲಕಾರಿ ಸಂಗತಿಗಳು ಇಲ್ಲಿವೆ.
ಇಂದಿರಾ ಗಾಂಧಿ
Image Credit source: News18
Follow us on
ನವದೆಹಲಿ: ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ (Indira Gandhi) ಪುಣ್ಯತಿಥಿಯನ್ನು ಇಂದು (ಅಕ್ಟೋಬರ್ 31) ಆಚರಿಸಲಾಗುತ್ತಿದೆ. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು (Jawaharlal Nehru) ನಂತರ ಭಾರತದ ಎರಡನೇ ಅತಿ ಹೆಚ್ಚು ಅವಧಿಯ ಪ್ರಧಾನ ಮಂತ್ರಿಯಾಗಿದ್ದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ಮನೆಯ ಇಬ್ಬರು ಭದ್ರತಾ ಸಿಬ್ಬಂದಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಭಾರತದ ಉಕ್ಕಿನ ಮಹಿಳೆ ಎಂದೇ ಹೆಸರಾಗಿದ್ದ ಇಂದಿರಾ ಗಾಂಧಿ ಕುರಿತ 10 ಕುತೂಹಲಕಾರಿ ಸಂಗತಿಗಳು ಇಲ್ಲಿವೆ:
ಇಂದಿರಾ ಗಾಂಧಿ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಅವರು ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಜನವರಿ 1980ರಿಂದ ಅಕ್ಟೋಬರ್ 1984ರಲ್ಲಿ ಅವರ ಹತ್ಯೆಯಾಗುವವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇಂದಿರಾ ಗಾಂಧಿ ಭಾರತದ ಅತ್ಯಂತ ಪ್ರಭಾವಶಾಲಿ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು.
ಇಂದಿರಾ ಗಾಂಧಿ ತಮ್ಮ ನೇರ ನಡೆ ಮತ್ತು ಸದೃಢ ವ್ಯಕ್ತಿತ್ವಕ್ಕೆ ಬಹಳ ಹೆಸರುವಾಸಿಯಾಗಿದ್ದರು.
ಬಾಂಗ್ಲಾದೇಶದ ರಚನೆಗೆ ಕಾರಣವಾದ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸುವ ಪಾಕಿಸ್ತಾನದೊಂದಿಗೆ ಇಂದಿರಾ ಗಾಂಧಿ ಯುದ್ಧಕ್ಕೆ ಕರೆ ನೀಡಿದ್ದರು.
ಅಮೃತಸರದ ಗೋಲ್ಡನ್ ಟೆಂಪಲ್ನಲ್ಲಿ ಅಡಗಿದ್ದ ಸಿಖ್ ಉಗ್ರರ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಕರೆ ನೀಡಿದ್ದ ಆಕೆಯ ‘ಆಪರೇಷನ್ ಬ್ಲೂ ಸ್ಟಾರ್’ಗೆ ಪ್ರತೀಕಾರವಾಗಿ ಆಕೆಯ ಇಬ್ಬರು ಭದ್ರತಾ ಸಿಬ್ಬಂದಿಗಳು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದರು.
ಇಂದಿರಾ ಗಾಂಧಿ ಅವರು ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಕಮಲಾ ನೆಹರು ಅವರ ಏಕೈಕ ಮಗಳು.
1964ರಲ್ಲಿ ತನ್ನ ತಂದೆ ಜವಾಹರಲಾಲ್ ನೆಹರು ಅವರ ಮರಣದ ನಂತರ ಇಂದಿರಾ ಗಾಂಧಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಇಂದಿರಾ ಗಾಂಧಿಯವರು 1959ರಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡರು.
1975ರ ಜೂನ್ ತಿಂಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಇಂದಿರಾ ಗಾಂಧಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದರು.
ಭಾರತ ದೇಶಕ್ಕೆ ಭದ್ರತಾ ಬೆದರಿಕೆಗಳ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಇಂದಿರಾ ಗಾಂಧಿ ದೇಶದ ಜನರಿಗೆ ತಿಳಿಸಿದರು. ತುರ್ತು ಪರಿಸ್ಥಿತಿಯ ಅವಧಿಯನ್ನು ಭಾರತದ ಅತ್ಯಂತ ಕೆಟ್ಟ ಅವಧಿ ಎನ್ನಲಾಗುತ್ತದೆ.