Indira Gandhi International Airport: ದೆಹಲಿಯ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಮಹಿಳೆ
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಾದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಾದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೆಲಸ ಕಳೆದುಕೊಂಡಿದ್ದಕ್ಕೆ ಅಸಮಾಧಾನಗೊಂಡ ಮಹಿಳೆ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ರೇಜರ್ನಿಂದ ತನಗೆ ತಾನೇ ಗಾಯಮಾಡಿಕೊಂಡಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಸ್ಥರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಹಿಳೆ ಶನಿವಾರ ತಡರಾತ್ರಿ ಬಹ್ರೇನ್‌ನಿಂದ ಟರ್ಮಿನಲ್ -3 ಗೆ ಬಂದಿಳಿದಿದ್ದಳು ಮತ್ತು ಮಲೇಷ್ಯಾದ ಕೌಲಾಲಂಪುರಕ್ಕೆ ಹಾರಲು ಹೊರಟಿದ್ದಳು. ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ವಾಶ್ರೂಂಗೆ ತೆರಳಿದ್ದಾಗ ಕುತ್ತಿಗೆ ಹಾಗೂ ಕೈಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪಡೆದ ಅಧಿಕಾರಿಗಳು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಪೊಲೀಸರ ಪ್ರಕಾರ, ಈಗ ಚೀನಾದ ಮಹಿಳೆ ಸ್ಥಿತಿ ಸ್ಥಿರವಾಗಿದೆ. ಆತ್ಮಹತ್ಯೆಗೆ ಮಹಿಳೆ ಕೆಲಸ ಕಳೆದುಕೊಂಡಿದ್ದೇ ಕಾರಣ, ಹಾಗೆಯೇ ಆಕೆಯ ಪ್ರಿಯಕರ ಕೂಡ ಆಕೆಯನ್ನು ಬಿಟ್ಟು ಹೋಗಿದ್ದ ಹೀಗಾಗಿ ಮನನೊಂದು ಆತ್ಮಹತ್ಯೆಯ ಯೋಚನೆ ಮಾಡಿದ್ದಳು ಎಂದು ಹೇಳಿದ್ದಾರೆ.
ಮತ್ತಷ್ಟು ಓದಿ: ಬೆಂಗಳೂರು: ತಾಯಿ, ಮಗಳು ಹಾಗೂ ಮಗ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು 3 ವರ್ಷಗಳಲ್ಲಿ 2010ರಲ್ಲಿ ಪೂರ್ಣಗೊಳಿಸಲಾಗಿದೆ. ಟರ್ಮಿನಲ್ 3 ವಿಶ್ವದ ಅತಿದೊಡ್ಡ ಟರ್ಮಿನಲ್ಗಳಲ್ಲಿ ಒಂದಾಗಿದೆ. ಪ್ರತಿ ವರ್ಷ 40 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 3 ರಿಂದ ಕಾರ್ಯನಿರ್ವಹಿಸುತ್ತಿದೆ. ಕೆಲವು ದೇಶೀಯ ವಿಮಾನಗಳು ಇಲ್ಲಿಂದ ಕಾರ್ಯನಿರ್ವಹಿಸುತ್ತಿವೆ. ಐಜಿಐ ವಿಮಾನ ನಿಲ್ದಾಣವು ಒಟ್ಟು 3 ಟರ್ಮಿನಲ್ಗಳನ್ನು ಹೊಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ