Rahul Gandhi: ಇಂದಿರಾ ಗಾಂಧಿ ಭಾರತಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಈ ದೇಶವನ್ನು ಒಡೆಯಲು ಬಿಡುವುದಿಲ್ಲ; ರಾಹುಲ್ ಗಾಂಧಿ

Indira Gandhi Death Anniversary: ನೀವು ಈ ದೇಶಕ್ಕಾಗಿ ನಿಮ್ಮ ಜೀವವನ್ನು ತ್ಯಾಗ ಮಾಡಿದ್ದೀರಿ. ಈ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲ" ಎಂದು ಇಂದಿರಾ ಗಾಂಧಿ ಪುಣ್ಯಸ್ಮರಣೆಯ ದಿನವಾದ ಇಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Rahul Gandhi: ಇಂದಿರಾ ಗಾಂಧಿ ಭಾರತಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಈ ದೇಶವನ್ನು ಒಡೆಯಲು ಬಿಡುವುದಿಲ್ಲ; ರಾಹುಲ್ ಗಾಂಧಿ
ಇಂದಿರಾ ಗಾಂಧಿಗೆ ನಮನ ಸಲ್ಲಿಸಿದ ರಾಹುಲ್ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 31, 2022 | 12:06 PM

ನವದೆಹಲಿ: ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi Death Anniversary) ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಇಂದಿರಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿರುವ (Bharat Jodo Yatra) ರಾಹುಲ್ ಗಾಂಧಿ ಕೂಡ ತಮ್ಮ ಅಜ್ಜಿ ಇಂದಿರಾ ಗಾಂಧಿಯವರನ್ನು ನೆನಪಿಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರು ತಮ್ಮ ಹೃದಯದಲ್ಲಿ ಪ್ರೀತಿ ಮತ್ತು ಮೌಲ್ಯಗಳನ್ನು ಹೊತ್ತಿದ್ದರು. ದೇಶಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆ. ನಾವು ಈ ಭಾರತವನ್ನು ಒಡೆಯಲು ಬಿಡುವುದಿಲ್ಲ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕೂಡ ಇಂದಿರಾ ಗಾಂಧಿ ಅವರ ಶಕ್ತಿ ಸ್ಥಳದ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅವರ ಹುತಾತ್ಮ ದಿನವಿಂದು. ಕೃಷಿಯಾಗಿರಲಿ, ಆರ್ಥಿಕತೆಯಾಗಿರಲಿ ಅಥವಾ ಮಿಲಿಟರಿ ಶಕ್ತಿಯಾಗಿರಲಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಲ್ಲಿ ಇಂದಿರಾ ಗಾಂಧಿ ಅವರ ಕೊಡುಗೆ ಅಧಿಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅಜ್ಜಿ, ನಾನು ನಿಮ್ಮ ಪ್ರೀತಿ ಮತ್ತು ಮೌಲ್ಯ ಎರಡನ್ನೂ ನನ್ನ ಹೃದಯದಲ್ಲಿ ಇರಿಸಿಕೊಂಡಿದ್ದೇನೆ. ನೀವು ಈ ದೇಶಕ್ಕಾಗಿ ನಿಮ್ಮ ಜೀವವನ್ನು ತ್ಯಾಗ ಮಾಡಿದ್ದೀರಿ. ಈ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಈ ವೇಳೆ ಇಂದಿರಾ ಗಾಂಧಿ ಅವರ ವಿಡಿಯೋವನ್ನು ರಾಹುಲ್ ಗಾಂಧಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Indira Gandhi Death Anniversary: ಇಂದು ಇಂದಿರಾ ಗಾಂಧಿ ಪುಣ್ಯತಿಥಿ; ಭಾರತದ ಉಕ್ಕಿನ ಮಹಿಳೆ ಬಗ್ಗೆ ನಿಮಗೆಷ್ಟು ಗೊತ್ತು?

ಇಂದಿರಾ ಗಾಂಧಿ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಅವರು ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಜನವರಿ 1980ರಿಂದ ಅಕ್ಟೋಬರ್ 1984ರಲ್ಲಿ ಅವರ ಹತ್ಯೆಯಾಗುವವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಭಾರತದ ಅತ್ಯಂತ ಪ್ರಭಾವಶಾಲಿ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು. ಬಾಂಗ್ಲಾದೇಶದ ರಚನೆಗೆ ಕಾರಣವಾದ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸುವ ಪಾಕಿಸ್ತಾನದೊಂದಿಗೆ ಇಂದಿರಾ ಗಾಂಧಿ ಯುದ್ಧಕ್ಕೆ ಕರೆ ನೀಡಿದ್ದರು. ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ಅಡಗಿದ್ದ ಸಿಖ್ ಉಗ್ರರ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಕರೆ ನೀಡಿದ್ದ ಆಕೆಯ ‘ಆಪರೇಷನ್ ಬ್ಲೂ ಸ್ಟಾರ್’ಗೆ ಪ್ರತೀಕಾರವಾಗಿ 1984ರ ಅಕ್ಟೋಬರ್ 31ರಂದು ಆಕೆಯ ಇಬ್ಬರು ಭದ್ರತಾ ಸಿಬ್ಬಂದಿಗಳು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದರು. 1964ರಲ್ಲಿ ತನ್ನ ತಂದೆ ಜವಾಹರಲಾಲ್ ನೆಹರು ಅವರ ಮರಣದ ನಂತರ ಇಂದಿರಾ ಗಾಂಧಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.

ತೆಲಂಗಾಣದಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದುವರೆಸಿರುವ ರಾಹುಲ್ ಗಾಂಧಿ, ಇಂದಿರಾ ಗಾಂಧಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಶುಕ್ರವಾರ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,570 ಕಿಮೀ ಪಾದಯಾತ್ರೆಯಲ್ಲಿ 23.3 ಕಿಮೀ ಪೂರ್ಣಗೊಳಿಸಿದ್ದಾರೆ. ಈ ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಮುಂದಿನ ವರ್ಷ ಕಾಶ್ಮೀರದಲ್ಲಿ ಈ ಯಾತ್ರೆ ಮುಕ್ತಾಯವಾಗಲಿದೆ. ಭಾರತದ ಇತಿಹಾಸದಲ್ಲಿ ಯಾವುದೇ ಭಾರತೀಯ ರಾಜಕಾರಣಿಗಳು ಕಾಲ್ನಡಿಗೆಯಲ್ಲಿ ನಡೆಸಿದ ಅತಿ ಉದ್ದದ ಮೆರವಣಿಗೆ ಇದಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ