ಭಾರತ-ಕೆನಡಾ ಬಿಕ್ಕಟ್ಟು ಸೇನಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಭಾರತೀಯ ಸೇನೆ

india canada military relations: ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು, ವ್ಯಾಪರದ ಮೇಲೆ ಪರಿಣಾಮವನ್ನು ಉಂಟು ಮಾಡಿದೆ. ಆದರೆ ಸೇನಾ ಸಂಬಂಧದ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ ಹಾಗೂ ಉಭಯ ದೇಶಗಳ ನಡುವಿನ ಮಿಲಿಟರಿ ಸಂಬಂಧಗಳು ಹಾಗೆಯೇ ಮುಂದುವರಿಯುತ್ತವೆ ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾರ್ಯತಂತ್ರ ಯೋಜನೆ) ಮೇಜರ್ ಜನರಲ್ ಅಭಿನಯ ರೈ ಹೇಳಿದ್ದಾರೆ.

ಭಾರತ-ಕೆನಡಾ ಬಿಕ್ಕಟ್ಟು ಸೇನಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಭಾರತೀಯ ಸೇನೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Sep 20, 2023 | 4:05 PM

ದೆಹಲಿ,ಸೆ.20: ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು, ವ್ಯಾಪರದ ಮೇಲೆ ಪರಿಣಾಮವನ್ನು ಉಂಟು ಮಾಡಿದೆ. ಆದರೆ ಸೇನಾ ಸಂಬಂಧದ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ. ಜೂನ್ 18ರಂದು ಪಶ್ಚಿಮ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯ ಗುರುದ್ವಾರದ ಹೊರಗೆ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಹಿರಂಗ ಹೇಳಿಕೆ ಈಗ ಎರಡು ದೇಶಗಳ ನಡುವೆ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಇದರಿಂದ ಭಾರತ ಮತ್ತು ಕೆನಡಾದ ವ್ಯಾಪಾರಗಳು ಸ್ಥಗಿತಗೊಂಡಿರಬಹುದು, ಆದರೆ ಭಾರತೀಯ ಸೇನೆಯ ಮೇಲೆ ಪರಿಣಾಮ ಬೀರುವುದಿಲ್ಲ ಹಾಗೂ ಉಭಯ ದೇಶಗಳ ನಡುವಿನ ಮಿಲಿಟರಿ ಸಂಬಂಧಗಳು ಹಾಗೆಯೇ ಮುಂದುವರಿಯುತ್ತವೆ ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾರ್ಯತಂತ್ರ ಯೋಜನೆ) ಮೇಜರ್ ಜನರಲ್ ಅಭಿನಯ ರೈ ಹೇಳಿದ್ದಾರೆ.

ದೆಹಲಿ ಕಂಟೋನ್ಮೆಂಟ್‌ನ ಮಾನೆಕ್ಷಾ ಕೇಂದ್ರದಲ್ಲಿ ಸೆಪ್ಟೆಂಬರ್ 26-27ರಿಂದ ಇಂಡೋ-ಪೆಸಿಫಿಕ್ ಸೇನಾ ಮುಖ್ಯಸ್ಥರ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕೆನಡಾದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ವೇಯ್ನ್ ಐರ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಈ ಸಮ್ಮೇಳನವನ್ನು ಬಹುಪಕ್ಷೀಯ ಭದ್ರತಾ ಪಾಲುದಾರಿಕೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಎರಡು ದೇಶಗಳ ನಡುವಿನ ಸೇನಾ ಬಿಕ್ಕಟ್ಟುಗಳನ್ನು ತೆಗೆದು ಹಾಕಲು, ಜತೆಗೆ ಮುಕ್ತ ಇಂಡೋ-ಪೆಸಿಫಿಕ್‌ಗಾಗಿ ವೃತ್ತಿಪರ ಸೇನೆಗಳ ನಡುವೆ ನಂಬಿಕೆಯನ್ನು ಬೆಳೆಸಿಕೊಳ್ಳಲು ಮತ್ತು ಉತ್ತಮ ಸಂವಹನವನ್ನು ನಿರ್ಮಿಸಲು ನಡೆಸಲಾಗುವುದು ಎಂದು ಸೇನೆ ಹೇಳಿದೆ.

ಇನ್ನು ಖಲಿಸ್ತಾನದ ಭಯೋತ್ಪಾದಕ ಹಾಗೂ ಕೆನಡಾದ ಪ್ರಜೆಯಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಭಾರತದ ಏಜೆಂಟ್​​ಗಳೇ ಹತ್ಯೆ ಮಾಡಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ನಿರಕಾರಿಸಿದೆ. ಕೆನಡಾ ಭಾರತದ ಮೇಲೆ ದ್ವೇಷವನ್ನು ಸಾಧಿಸುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೆನಡಾದಲ್ಲಿರುವ ಭಾರತೀಯ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದೆ. ಇದಕ್ಕೆ ಪ್ರತ್ಯೋತ್ತರವಾಗಿ ಭಾರತ ಕೂಡ ಭಾರತದಲ್ಲಿರುವ ಕೆನಡಾ ರಾಜತಾಂತ್ರಿಕರನ್ನು ಉಚ್ಚಾಟಿಸಿದೆ.

ಇದನ್ನೂ ಓದಿ: ನಿಜ್ಜರ್ ಹತ್ಯೆ ಪ್ರಕರಣ: ಭಾರತದ ವಿರುದ್ಧ ಗುದ್ದಾಡಲು ಸದಸ್ಯ ರಾಷ್ಟ್ರಗಳ ಬೆಂಬಲ ಕೇಳಿದ ಕೆನಡಾ

ಇದರ ಜತೆಗೆ ಭಾರತದ ವಿರುದ್ಧ ಹೋರಾಡಲು ತನ್ನ ಸದಸ್ಯ ರಾಷ್ಟ್ರಗಳು ಬೆಂಬಲಿಸುವಂತೆ ಕೆನಡಾ ಹೇಳಿತ್ತು. ಆದರೆ ಕೆನಡಾದ ಮಾತಿಗೆ ಯಾವುದೇ ಸದಸ್ಯ ರಾಷ್ಟ್ರಗಳು ಸೊಪ್ಪು ಹಾಕಿಲ್ಲ. ಇನ್ನು ಭಾರತದ ವಿರುದ್ಧ ಬಹಿರಂಗವಾಗಿ ಕೆನಡಾ ಮಾಡಿದ ಆರೋಪಕ್ಕೆ US, UK, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಒಳಗೊಂಡಂತೆ ಒಕ್ಕೂಟದ ಸದಸ್ಯ ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿದೆ.

ಭಾರತೀಯ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದೆ ನಂತರ ಭಾರತವು ಕೂಡ ಭಾರತದಲ್ಲಿರುವ ಕೆನಡಾ ರಾಜತಾಂತ್ರಿಕರನ್ನು ಉಚ್ಚಾಟಿಸಿದೆ. ಇನ್ನು ಈ ಬಿಕ್ಕಟ್ಟಿನ ಬಗ್ಗೆ ಮಾಧ್ಯಗಳೊಂದಿಗೆ ಮಾತನಾಡಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ನಾವು ಎಲ್ಲದಕ್ಕೂ ಸಿದ್ಧ, ನಾವು ಯಾವುದನ್ನೂ ಪ್ರಚೋದಿಸುತ್ತಿಲ್ಲ. ಭಾರತ ಈ ಘಟನೆಯ ಬಗ್ಗೆ ಉತ್ತರ ನೀಡಬೇಕು. ಈಗಾಗಲೇ ತನಿಖೆಯನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕೆ ಭಾರತವು ಉತ್ತರಿಸಿದ್ದು, ನಾವು ಎಲ್ಲ ತನಿಖೆಗೂ ಸಿದ್ಧವಾಗಿದ್ದೇವೆ. ಕೆನಡಾ ಎಲ್ಲ ಭಾರತದ ಮೇಲೆ ಸುಳ್ಳು ಆರೋಪವನ್ನು ಮಾಡುತ್ತಿದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆ ಅಸಂಬದ್ಧ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ