G20 summit: 17ನೇ ಜಿ20 ಶೃಂಗಸಭೆ ಹಿನ್ನೆಲೆ ಇಂದು ಇಂಡೋನೇಷ್ಯಾಗೆ ತೆರಳಲಿರುವ ಪ್ರಧಾನಿ ಮೋದಿ
17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಇಂದು ಇಂಡೋನೇಷ್ಯಾ ನಗರಕ್ಕೆ ತೆರಳಲಿದ್ದಾರೆ. ಅಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ನವೆಂಬರ್ 15-16 ರವರೆಗೆ ನಡೆಯಲಿರುವ 17ನೇ ಜಿ20 ಶೃಂಗಸಭೆ (17th G20 summit)ಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾಗಿಯಾಗಲಿದ್ದಾರೆ. ಈ ವೇಳೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ (UK PM Rishi Sunak) ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (French President Emmanuel Macron) ಅವರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಮಾತುಕತೆ (Bilateral talks) ನಡೆಸಲಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗವ ನಿಟ್ಟಿನಲ್ಲಿ ಇಂದು ಇಂಡೋನೇಷ್ಯಾ (Indonesia) ನಗರಕ್ಕೆ ಮೋದಿ ತೆರಳಲಿದ್ದಾರೆ. ಮೂಲಗಳ ಪ್ರಕಾರ, ನವೆಂಬರ್ 16ರಂದು ಭಾರತದ ಪ್ರಧಾನಿ ಆತಿಥೇಯ ದೇಶ ಇಂಡೋನೇಷ್ಯಾದೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳುವುದರ ಹೊರತಾಗಿ ಬ್ರಿಟಿಷ್ ಪ್ರಧಾನಿ ಮತ್ತು ಫ್ರೆಂಚ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಪ್ರಕಾರ, ಮೋದಿ ಅವರು ಇಂಡೋನೇಷ್ಯಾದಲ್ಲಿ ಸುಮಾರು 45 ಗಂಟೆಗಳ ಇರಲಿದ್ದು, ಈ ಸಮಯದಲ್ಲಿ ಆಹಾರ ಮತ್ತು ಇಂಧನ ಭದ್ರತೆ, ಡಿಜಿಟಲ್ ರೂಪಾಂತರ ಮತ್ತು ಆರೋಗ್ಯದ ಕುರಿತು ಮೂರು ನಿರ್ಣಾಯಕ ಅವಧಿಗಳಲ್ಲಿ ಭಾಗವಹಿಸಲಿದ್ದಾರೆ.
ಬಾಲಿ ಶೃಂಗಸಭೆಯು ಮಹತ್ವದ್ದಾಗಿದೆ. ಏಕೆಂದರೆ ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ ಅವರು ಮುಂದಿನ ವರ್ಷದ ಸಭೆಗೆ ಜಿ20 ಅಧ್ಯಕ್ಷರನ್ನು ಔಪಚಾರಿಕವಾಗಿ ಮೋದಿಗೆ ಹಸ್ತಾಂತರಿಸಲಿದ್ದಾರೆ. ಬಾಲಿ ಶೃಂಗಸಭೆಯ ಸಮಯದಲ್ಲಿ ಮೋದಿ ಅವರು ಎಲ್ಲಾ ಜಿ20 ನಾಯಕರನ್ನು ಭಾರತದಲ್ಲಿ 2023ರ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಶೃಂಗಸಭೆಗೆ ಆಹ್ವಾನಿಸಲಿದ್ದಾರೆ. ಭಾರತವು 2022ರ ಡಿಸೆಂಬರ್ 1ರಿಂದ ಒಂದು ವರ್ಷದವರೆಗೆ G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.
ಇತರ G20 ನಾಯಕರ ಜೊತೆಗೆ ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ ನೀಡುವುದು ಮತ್ತು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುವುದು ನ.15 ರ ಮೋದಿಯವರ ಕಾರ್ಯಸೂಚಿಯಲ್ಲಿದೆ. G20 ಕಮ್ಯುನಿಕ್ ಕುರಿತು ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಕಾರ್ಯದರ್ಶಿ, G20 ಸಂವಹನವು ಒಮ್ಮತದ ಮೂಲಕ ಮತ್ತು ವರ್ಷಪೂರ್ತಿ ಸಭೆಗಳು ಮತ್ತು ಸಂವಹನದ ಪರಾಕಾಷ್ಠೆಯಾಗಿದೆ ಎಂದು ಹೇಳಿದರು.
ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:06 am, Mon, 14 November 22