ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ
ದೇವಸ್ಥಾನImage Credit source: NDTV
Follow us
ನಯನಾ ರಾಜೀವ್
|

Updated on: Apr 03, 2023 | 10:03 AM

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ. ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 35 ಮಂದಿ ಮೃತಪಟ್ಟಿದ್ದರು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಬಾವಿಯ ಮೇಲ್ಛಾವಣಿ ಕುಸಿದಾಗ ಹತ್ತಾರು ಜನರು ಕೆಸರಿನ ನೀರಿನಲ್ಲಿ ಬಿದ್ದಿದ್ದರು. 35 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಆರೋಪಿಸಿದ್ದರು.

ಮತ್ತಷ್ಟು ಓದಿ: ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿದು ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ