ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ನಿಲ್ಲುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ; ವಿದೇಶಾಂಗ ಸಚಿವಾಲಯ ಪುನರುಚ್ಛಾರ
ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಘೋಷಿಸಲಾಗಿರುವ ಸಿಂಧೂ ಜಲ ಒಪ್ಪಂದ ರದ್ದು ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಭಾರತ ಆರಂಭದಲ್ಲೇ ಸ್ಪಷ್ಟಪಡಿಸಿತ್ತು. ಇದೀಗ ಮತ್ತೆ ಅದೇ ವಿಚಾರವನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ. ಹಾಗೇ, ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲೂ ತನ್ನ ಹಿಂದಿನ ನಿಲುವಿಗೆ ಬದ್ಧವಾಗಿರುವ ಭಾರತ ಸರ್ಕಾರ ಪಾಕಿಸ್ತಾನ ಆಕ್ರಮಿತ ಪ್ರದೇಶವನ್ನು ಖಾಲಿ ಮಾಡುವಂತೆ ಸೂಚನೆ ನೀಡಿದೆ. ಈ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ನವದೆಹಲಿ, ಮೇ 13: ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು (Indus Water Treaty) ತಡೆಹಿಡಿಯಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನಿ ವಾಯುನೆಲೆಗಳನ್ನು ಅತ್ಯಂತ ಪರಿಣಾಮಕಾರಿ ಕ್ರಮದಿಂದ ನಿಷ್ಕ್ರಿಯಗೊಳಿಸಿವೆ. ಭಾರತೀಯ ಸಶಸ್ತ್ರ ಪಡೆಗಳ ಬಲದ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕದನ ವಿರಾಮಕ್ಕೆ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಪಾಕಿಸ್ತಾನದ ಕಡೆಯಿಂದ ನೀಡಲಾದ ಹೇಳಿಕೆಯನ್ನು ನಾವು ನೋಡಿದ್ದೇವೆ. ಕೈಗಾರಿಕಾ ಮಟ್ಟದಲ್ಲಿ ಭಯೋತ್ಪಾದನೆಯನ್ನು ಪೋಷಿಸಿದ ರಾಷ್ಟ್ರವು ಅದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವ ಮೂಲಕ ಪಾಕಿಸ್ತಾನ ತನ್ನನ್ನು ತಾನು ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದೆ. ಭಾರತ ನಾಶಪಡಿಸಿದ ಭಯೋತ್ಪಾದಕ ಮೂಲಸೌಕರ್ಯ ತಾಣಗಳು ಭಾರತೀಯರ ಸಾವಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಇತರ ಅನೇಕ ಅಮಾಯಕರ ಸಾವಿಗೆ ಕಾರಣವಾಗಿವೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಪೂರ್ತಿಯಾಗಿ ಹಿಂಪಡೆಯುವವರೆಗೂ ಭಾರತ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
#WATCH | Delhi: MEA Spokesperson Randhir Jaiswal says, “We have a long-standing national position that any issues pertaining to the Union Territory of Jammu and Kashmir have to be addressed by India and Pakistan bilaterally. That stated policy has not changed. The outstanding… pic.twitter.com/gsbwsFF36l
— ANI (@ANI) May 13, 2025
ಇದನ್ನೂ ಓದಿ: ಪಾಕ್ ವಿರುದ್ಧ ಭಾರತಕ್ಕೆ ಸ್ಪಷ್ಟ ಗೆಲುವು: ಕಾರಣಗಳನ್ನು ವಿವರಿಸಿದ ವಿಶ್ಲೇಷಕ ಟಾಮ್ ಕೂಪರ್
ಮೇ 22ರಂದು 25 ಪ್ರವಾಸಿಗರು ಮತ್ತು ಒಬ್ಬ ಸ್ಥಳೀಯ ಕಾಶ್ಮೀರಿ ಸಾವನ್ನಪ್ಪಿದ ಮಾರಕ ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಾಕಿಸ್ತಾನದ ಭೂಪ್ರದೇಶದೊಳಗಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕಿತ್ತುಹಾಕುವುದು ಸೇರಿದಂತೆ ಭಾರತದ ಕಾರ್ಯತಂತ್ರದ ಭಯೋತ್ಪಾದನಾ ನಿಗ್ರಹ ಪ್ರಯತ್ನಗಳ ಬಗ್ಗೆ ಅವರು ವಿವರಗಳನ್ನು ನೀಡಿದರು.
#WATCH | Delhi: On Pakistan Foreign Minister Ishaq Dar’s interview to foreign media, MEA Spokesperson Randhir Jaiswal says, “…In essence, India’s position remained the same; Pakistan’s position changed on 10th May morning after its airbases were effectively put out of action.… https://t.co/B59haWq2vC pic.twitter.com/IPuG1e0Zgu
— ANI (@ANI) May 13, 2025
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ನಂತರ ಜಮ್ಮು ಮತ್ತು ಕಾಶ್ಮೀರವು ಉದ್ವಿಗ್ನ ಪರಿಸ್ಥಿತಿಯ ನಂತರ ಸಹಜ ಸ್ಥಿತಿಗೆ ಮರಳಲು ಪ್ರಾರಂಭಿಸಿದೆ. ಕೇಂದ್ರಾಡಳಿತ ಪ್ರದೇಶದ ಕೆಲವು ಭಾಗಗಳಲ್ಲಿನ ಶಾಲೆಗಳು ಮತ್ತು ಕಾಲೇಜುಗಳು ಇಂದಿನಿಂದ ಮತ್ತೆ ತೆರೆಯಲ್ಪಡುತ್ತವೆ ಎಂದು ಜೈಸ್ವಾಲ್ ಘೋಷಿಸಿದರು.
ಇದನ್ನೂ ಓದಿ: ನಮ್ಮ ಡ್ರೋನ್, ಕ್ಷಿಪಣಿಗಳ ಬಗ್ಗೆ ಯೋಚಿಸಿದರೂ ಪಾಕಿಸ್ತಾನಕ್ಕೆ ನಿದ್ರೆ ಬರುವುದಿಲ್ಲ; ಆದಂಪುರ ವಾಯುನೆಲೆಯಲ್ಲಿ ಪ್ರಧಾನಿ ಮೋದಿ
ಪಿಒಕೆ ವಿಷಯ ಇತ್ಯರ್ಥವಾಗಲಿ:
ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿ ಪರಿಹರಿಸಬೇಕು ಎಂಬುದು ನಮ್ಮ ದೀರ್ಘಕಾಲದ ರಾಷ್ಟ್ರೀಯ ನಿಲುವು. ಆ ನೀತಿ ಬದಲಾಗಿಲ್ಲ. ನಿಮಗೆ ತಿಳಿದಿರುವಂತೆ, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ತೆರವುಗೊಳಿಸುವುದು ಬಾಕಿ ಉಳಿದಿರುವ ವಿಷಯವಾಗಿದೆ. ಅದು ಇತ್ಯರ್ಥವಾಗಬೇಕೆಂಬುದು ನಮ್ಮ ನಿಲುವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
#WATCH | Delhi: On US President Donald Trump and trade, MEA Spokesperson Randhir Jaiswal says, “From the time Operation Sindoor commenced on 7th May till the understanding on cessation of firing and military action on 10th May, there were conversations between Indian and US… pic.twitter.com/iBAoLpg8n5
— ANI (@ANI) May 13, 2025
ಇತರ ರಾಷ್ಟ್ರಗಳೊಂದಿಗಿನ ಸಂಭಾಷಣೆಗಳಿಗೆ ಸಂಬಂಧಿಸಿದಂತೆ ಭಾರತದಿಂದ ಬಂದ ಸಂದೇಶವು ಸ್ಪಷ್ಟ ಮತ್ತು ಸ್ಥಿರವಾಗಿತ್ತು. ನಾವು ಸಾರ್ವಜನಿಕ ವೇದಿಕೆಗಳಿಂದ ತಿಳಿಸುತ್ತಿದ್ದ ಅದೇ ಸಂದೇಶವನ್ನು ಖಾಸಗಿ ಸಂಭಾಷಣೆಗಳಲ್ಲಿಯೂ ನೀಡಿದ್ದೇವೆ. ಏಪ್ರಿಲ್ 22ರ ಭಯೋತ್ಪಾದಕ ದಾಳಿಗೆ ಭಾರತ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಪ್ರತಿಕ್ರಿಯಿಸಿತ್ತು. ಹಾಗೇ, ಪಾಕಿಸ್ತಾನಿ ಸಶಸ್ತ್ರ ಪಡೆಗಳು ಗುಂಡು ಹಾರಿಸಿದರೆ ಭಾರತೀಯ ಸಶಸ್ತ್ರ ಪಡೆಗಳು ಪ್ರತಿಯಾಗಿ ಗುಂಡು ಹಾರಿಸುತ್ತವೆ, ಪಾಕಿಸ್ತಾನ ನಿಲ್ಲಿಸಿದರೆ ಭಾರತವೂ ದಾಳಿ ನಿಲ್ಲಿಸುತ್ತದೆ ಎಂಬುದು ಆಪರೇಷನ್ ಸಿಂಧೂರ್ ಆರಂಭದ ಸಮಯದಲ್ಲಿ ಪಾಕಿಸ್ತಾನಕ್ಕೆ ರವಾನಿಸಲಾದ ಸಂದೇಶವಾಗಿತ್ತು. ಆ ಸಮಯದಲ್ಲಿ ಪಾಕಿಸ್ತಾನದ ಕಡೆಯವರು ಇದನ್ನು ಗಮನಿಸಲಿಲ್ಲ. ನಮ್ಮಿಂದ ಇದನ್ನು ಕೇಳಿದ ಅನೇಕ ವಿದೇಶಿ ನಾಯಕರು ಅದನ್ನು ತಮ್ಮ ಪಾಕಿಸ್ತಾನಿ ಸಂವಾದಕರೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ಜೈಸ್ವಾಲ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ