AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂ ಜಲ ಒಪ್ಪಂದ ಐತಿಹಾಸಿಕ ತಪ್ಪು; ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

ಈ ಐತಿಹಾಸಿಕ ನಡೆ ಮಹತ್ವದ ಬದಲಾವಣೆಯನ್ನು ಸೂಚಿಸುತ್ತದೆ. ಭಾರತ ದೇಶದ ಜಲ ಸಂಪನ್ಮೂಲಗಳನ್ನು ತನ್ನದೇ ಆದ ನಾಗರಿಕರ ಕಲ್ಯಾಣಕ್ಕಾಗಿ ಮಾತ್ರ ಬಳಸುವ ಭಾರತದ ಸಂಕಲ್ಪವನ್ನು ಪುನರುಚ್ಚರಿಸುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. "ಐಡಬ್ಲ್ಯೂಟಿಯನ್ನು ಮುಕ್ತಾಯಗೊಳಿಸುವುದು ಪಾಕಿಸ್ತಾನಕ್ಕೆ ಸೂಕ್ತವಾದ ಪ್ರತಿಕ್ರಿಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸಿಂಧೂ ಜಲ ಒಪ್ಪಂದ ಐತಿಹಾಸಿಕ ತಪ್ಪು; ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
Lg Sinha
ಸುಷ್ಮಾ ಚಕ್ರೆ
|

Updated on:Jul 19, 2025 | 10:31 PM

Share

ಶ್ರೀನಗರ, ಜುಲೈ 19: ಸಿಂಧೂ ಜಲ ಒಪ್ಪಂದವು “ಐತಿಹಾಸಿಕ ತಪ್ಪು”. ಅದರ ರದ್ದತಿಯು ಜಮ್ಮು ಮತ್ತು ಕಾಶ್ಮೀರಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಸಿಂಧೂ ಜಲ ಒಪ್ಪಂದದ ರದ್ದತಿ ಪಾಕಿಸ್ತಾನಕ್ಕೆ ಸೂಕ್ತವಾದ ಉತ್ತರವಾಗಿದೆ. ಕಾಶ್ಮೀರವು ತನ್ನ ನಿಜವಾದ ಜಲವಿದ್ಯುತ್ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ, ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ” ಎಂದು ಎಲ್.ಜಿ. ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಭಾರತ ನಿರ್ಮಿತ ಶಸ್ತ್ರಾಸ್ತ್ರಗಳ ಬಗ್ಗೆ ಜಾಗತಿಕ ಆಸಕ್ತಿ ಹೆಚ್ಚಾಗಿದೆ; ರಾಜನಾಥ್ ಸಿಂಗ್

“ಐಡಬ್ಲ್ಯೂಟಿಯನ್ನು ಮುಕ್ತಾಯಗೊಳಿಸುವುದು ಪಾಕಿಸ್ತಾನಕ್ಕೆ ಸೂಕ್ತವಾದ ಪ್ರತಿಕ್ರಿಯೆಯಾಗಿದೆ. ಅದು ಸಿಂಧೂ ನದಿ ವ್ಯವಸ್ಥೆಯನ್ನು ಅವಲಂಬಿಸಿರುವುದರಿಂದ ಅದು ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ಶಾಂತಕುಮಾರ್ ಶರ್ಮಾ ಅವರ ‘ಸಿಂಧೂ ಜಲ ಒಪ್ಪಂದವನ್ನು ಪ್ರತಿಬಿಂಬಿಸುವುದು’ ಎಂಬ ಪ್ರಬಂಧವನ್ನು ಬಿಡುಗಡೆ ಮಾಡುವಾಗ ಈ ಒಪ್ಪಂದದ ಐತಿಹಾಸಿಕ ಆಯಾಮಗಳನ್ನು ಎತ್ತಿ ತೋರಿಸುವಲ್ಲಿ ಲೇಖಕರ ಶ್ಲಾಘನೀಯ ಕೆಲಸಕ್ಕಾಗಿ ಲೆಫ್ಟಿನೆಂಟ್ ಗವರ್ನರ್ (ಎಲ್.ಜಿ.) ಅವರನ್ನು ಶ್ಲಾಘಿಸಿದರು.

ಇದನ್ನೂ ಓದಿ: ಭಾರತಕ್ಕೆ ಆಪರೇಷನ್ ಸಿಂಧೂರ್ ಸಮಯದಲ್ಲಾದ ಹಾನಿ ಎಷ್ಟು? ವಾಯುಪಡೆ ಅಧಿಕಾರಿ ಹೇಳಿದ್ದೇನು?

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್.ಜಿ. ಮನೋಜ್ ಸಿನ್ಹಾ ಸಮಯೋಚಿತ ಮತ್ತು ಉತ್ತಮವಾಗಿ ಸಂಶೋಧಿಸಲಾದ ಪ್ರಬಂಧವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ) ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸುತ್ತದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಯ ನಂತರ ಒಪ್ಪಂದವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಇನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:08 pm, Sat, 19 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ