Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾದ ಅನಿಲ್ ಅಂಬಾನಿ: ವರದಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ ₹814 ಕೋಟಿಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ ₹420 ಕೋಟಿ ತೆರಿಗೆ ವಂಚನೆ ಆರೋಪದಡಿ ಕಪ್ಪುಹಣ ತಡೆ ಕಾಯ್ದೆಯಡಿ ಅಂಬಾನಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು.

ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾದ ಅನಿಲ್ ಅಂಬಾನಿ: ವರದಿ
ಅನಿಲ್ ಅಂಬಾನಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 03, 2023 | 7:36 PM

ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani)ಸೋಮವಾರ ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಪ್ರಕರಣಕ್ಕೆ (foreign exchange violation case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate) ಮುಂದೆ ಹಾಜರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದ ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗಿದ್ದರು ಎಂದು ವರದಿ ಹೇಳಿದೆ. ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೈಗಾರಿಕೋದ್ಯಮಿ 2020 ರಲ್ಲಿ ಇಡಿ ಮುಂದೆ ಹಾಜರಾಗಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ ₹814 ಕೋಟಿಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ ₹420 ಕೋಟಿ ತೆರಿಗೆ ವಂಚನೆ ಆರೋಪದಡಿ ಕಪ್ಪುಹಣ ತಡೆ ಕಾಯ್ದೆಯಡಿ ಅಂಬಾನಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: Maharashtra Politics: ಪ್ರಫುಲ್ ಪಟೇಲ್​​ನ್ನು ಎನ್‌ಸಿಪಿ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಿದ ಶರದ್ ಪವಾರ್

ಬಾಂಬೆ ಹೈಕೋರ್ಟ್, ಮಾರ್ಚ್‌ನಲ್ಲಿ ಇದಕ್ಕೆ ಸಂಬಂಧಿಸಿದಂತ ಐಟಿ ಶೋಕಾಸ್ ನೋಟಿಸ್ ಮತ್ತು ದಂಡದ ಬೇಡಿಕೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ