Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ರೈಲುದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ನಾವು ಶಿಕ್ಷಣ ಕೊಡುತ್ತೇವೆ: ಉದ್ಯಮಿ ಗೌತಮ್ ಅದಾನಿ ಘೋಷಣೆ

Odisha Train Accident: ಒಡಿಶಾದಲ್ಲಿ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ.

Gautam Adani: ರೈಲುದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ನಾವು ಶಿಕ್ಷಣ ಕೊಡುತ್ತೇವೆ: ಉದ್ಯಮಿ ಗೌತಮ್ ಅದಾನಿ ಘೋಷಣೆ
ಗೌತಮ್ ಅದಾನಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 04, 2023 | 8:47 PM

ನವದೆಹಲಿ: ಜೂನ್ 2ರಂದು ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಘಟನೆಯಲ್ಲಿ (Odisha Train Accident) 290ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ (Gautam Adani) ಪ್ರಕಟಿಸಿದ್ದಾರೆ. ಒಂದು ಸಮಯದಲ್ಲಿ ವಿಶ್ವದ ಎರಡನೇ ಅತಿದೊಡ್ಡ ಶ್ರೀಮಂತ ಎನಿಸಿದ್ದ ಗೌತಮ್ ಅದಾನಿ, ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿ ದುರಂತದಿಂದ ಅನಾಥರಾದ ಮಕ್ಕಳ ಶಾಲಾ ಶಿಕ್ಷಣದ ವ್ಯವಸ್ಥೆ ತಾನು ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

‘ಒಡಿಸಾ ರೈಲು ದುರಂತ ಘಟನೆಯಿಂದ ನಮಗೆಲ್ಲಾ ಬಹಳ ನೋವು ತಂದಿದೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮುಗ್ಧ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅಡಾಣಿ ಸಮೂಹ ಸಂಸ್ಥೆಯು ವಹಿಸಿಕೊಳ್ಳುತ್ತದೆ. ಸಂತ್ರಸ್ತರು ಮತ್ತವರ ಕುಟುಂಬಗಳಿಗೆ ನೆರವು ಒದಗಿಸುವುದು ಮತ್ತು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿ ಆಗಿದೆ’ ಎಂದು ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಒಡಿಶಾ ರಾಜ್ಯದ ಬಾಲಾಸೋರ್ ಜಿಲ್ಲೆಯ ಬಹಾನಗ ಬಳಿ ಸಂಭವಿಸಿದ ಈ ಸರಣಿ ರೈಲು ಅಪಘಾತ ಘಟನೆಯಲ್ಲಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಗಾಯಾಳುಗಳ ಸಂಖ್ಯೆ ಸಾವಿರದಷ್ಟಿದೆ. ತಪ್ಪಾದ ಸಿಗ್ನಲ್ ಕಾರಣದಿಂದ ಈ ದುರಂತ ಸಂಭವಿಸಿರುವುದು ಸದ್ಯಕ್ಕೆ ಗೊತ್ತಾಗಿರುವ ಸಂಗತಿ. ರೈಲ್ವೆ ಮಂಡಳಿಯು ಈ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿCBI Probe: ಒಡಿಶಾ ರೈಲು ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು- ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

ಇನ್ನೊಂದೆಡೆ, ವಿಪಕ್ಷಗಳು ಈ ರೈಲು ದುರಂತ ವಿಚಾರದಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ. ಈ ರೈಲು ದರುಂತಕ್ಕೆ ದಿವ್ಯ ನಿರ್ಲಕ್ಷ್ಯತನವೇ ಕಾರಣವಾಗಿದೆ ಎಂದು ಆರೋಪಿಸಿರುವ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್, ಬಿಜೆಪಿ ನೇತೃತ್ವದ ಸರ್ಕಾರ ರೈಲ್ವೆ ಇಲಾಖೆಯನ್ನು ನಾಶ ಮಾಡಿದೆ ಎಂದು ಟೀಕಿಸಿದ್ದಾರೆ.

ಇನ್ನೊಂದೆಡೆ, ರೈಲ್ವೆ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್