AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ
ಬಿಜೆಪಿ ಶಾಸಕ ಸಂಜಯ್​ ಗುಪ್ತಾ
TV9 Web
| Edited By: |

Updated on:Feb 15, 2022 | 10:51 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ನಿನ್ನೆ (ಫೆ.14ರಂದು) ವಿಧಾನಸಭೆ ಚುನಾವಣೆ (Uttarakhand Assembly Election 2022) ಮುಕ್ತಾಯವಾಗಿದೆ. ಆದರೆ ಅದರ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಆಂತರಿಕ ಜಗಳ ಶುರುವಾಗಿದೆ. ಉತ್ತರಾಖಂಡ್​ನ ಬಿಜೆಪಿ ಶಾಸಕ ಸಂಜಯ್​ ಗುಪ್ತಾ ಅವರು, ರಾಜ್ಯದ ಬಿಜೆಪಿ ಮುಖ್ಯಸ್ಥ (BJP Party Chief) ಮದನ್​ ಕೌಶಿಕ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದನ್​ ಕೌಶಿಕ್​ ಒಬ್ಬ ದೇಶದ್ರೋಹಿ ಎಂದು ಹೇಳಿದ್ದಾರೆ.  ಉತ್ತರಾಖಂಡ್​​ನ ಬಿಜೆಪಿ ಮುಖ್ಯಸ್ಥ ಮದನ್​ ಕೌಶಿಕ್ ಈ ವಿಧಾನಸಭೆ ಚುನಾವಣೆಯಲ್ಲಿ​ ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಅವರನ್ನು ಹೈಕಮಾಂಡ್​ ನಾಯಕರು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರಾಖಂಡ್​ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮದನ್​ ಕೌಶಿಕ್​ ಪ್ರಯತ್ನಿಸಿದ್ದಾರೆ. ಹಾಗಾಗಿ ಅನೇಕ ಬಿಜೆಪಿ ಅಭ್ಯರ್ಥಿಗಳ ವಿರುದ್ಧವಾಗಿ ಪ್ರಚಾರ ನಡೆಸಿದ್ದಾರೆ. ನನ್ನ ವಿರುದ್ಧ ಸ್ಪರ್ಧಿಸಿದ್ದ ಬಿಎಸ್​ಪಿ (ಬಹುಜನ ಸಮಾಜ ಪಾರ್ಟಿ) ಅಭ್ಯರ್ಥಿಯ ಪರ ಚುನಾವಣಾ ಪ್ರಚಾರ ನಡೆಸಿದ್ದರು. ದಯವಿಟ್ಟು ಅವರನ್ನ ಉಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಸಂಜಯ್​ ಗುಪ್ತಾ ಮನವಿ ಮಾಡಿದ್ದಾರೆ. ಇವರು ಲಕ್ಸರ್​ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಂಜಯ್​ ಗುಪ್ತಾ ಆರೋಪಕ್ಕೆ ಮದನ್​ ಕೌಶಿಕ್​ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಮ್ಮ ಬಿಜೆಪಿಯೇ ಅವರ ಆದ್ಯತೆ ಎಂಬ ನಂಬಿಕೆ ಇದೆ. ಮುಂದೆ ಆಡಳಿತ ನಡೆಸಲಿರುವ ಸರ್ಕಾರ ಈ ಉತ್ತರಾಖಂಡ್​​ನ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತದೆ ಎಂದು ಹೇಳಿದ್ದರು. ನಿನ್ನೆ ಉತ್ತರಾಖಂಡ್​​ನ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಶೇ.62.5ರಷ್ಟು ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ.

ಇದನ್ನೂ ಓದಿ: ನಾಲ್ಕು ವರ್ಷದ ಬಳಿಕ ಉಗ್ರನರಸಿಂಹನ ದರ್ಶನಕ್ಕೆ ಅವಕಾಶ; ಎದೆ ಎತ್ತರದ ನೀರಿನಲ್ಲೂ 200 ಮೀಟರ್ ಸಾಗಿ ಬಂದ ಭಕ್ತರು

Published On - 9:58 am, Tue, 15 February 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ