Jammu-Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳಲು ಪ್ರಯತ್ನ, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ಒಳನುಸಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ.
ಕುಪ್ವಾರ, ಜು.18 : ಇಂದು ಬೆಳಿಗ್ಗೆ (ಜುಲೈ 19) ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ಒಳನುಸಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ. ಭಾರತೀಯ ಸೇನೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಚರಣೆ ಸಮಯದಲ್ಲಿ ಭದ್ರತಾ ಪಡೆಗಳು ನಾಲ್ಕು ಎಕೆ ರೈಫಲ್‌ಗಳು, ಆರು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧದಂತಹ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಭಾರತೀಯ ಸೇನೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ LOCಯ ಉದ್ದಕ್ಕೂ ಎಚ್ಚರಿಕೆಯ ಪಡೆಗಳು ಇಂದು ಬೆಳಿಗ್ಗೆ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿದೆ. 02 x ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ ಮತ್ತು 04 x ಎಕೆ ರೈಫಲ್ಸ್, 06 x ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧದಂತಹ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೂಡ ಈ ಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಟ್ವೀಟ್‌ನಲ್ಲಿ ತಿಳಿಸಿದೆ.
ಇದನ್ನೂ ಓದಿ: ಸೇನೆ, ಜಮ್ಮು-ಕಾಶ್ಮೀರ ಪೊಲೀಸರಿಂದ ಅತಿದೊಡ್ಡ ಕಾರ್ಯಾಚರಣೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ
ಇದೀಗ ಎರಡು ಭಯೋತ್ಪಾದಕರ ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:16 am, Wed, 19 July 23