ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

| Updated By: Rakesh Nayak Manchi

Updated on: Mar 08, 2024 | 2:51 PM

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ
ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ
Follow us on

ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.

ನರೇಂದ್ರ ಮೋದಿ ಎಕ್ಸ್ ಸಂದೇಶ

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದರು.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ್​ಗೆ ಪ್ರಧಾನಿ ಮೋದಿ ಭೇಟಿ: ಜನರಲ್ಲಿ ಹರ್ಷೋನ್ಮಾದ, ಕಣಿವೆಯಲ್ಲಿ ಪ್ರತಿಧ್ವನಿಸುತ್ತಿರುವ ಮೋದಿ ಸಾಬ್ ಜಿಂದಾಬಾದ್ ಘೋಷಣೆ!

ಮಹಿಳಾ ದಿನದಂದೇ ಸುಧಾ ಮೂರ್ತಿ ರಾಜ್ಯಸಭೆಗೆ

ಮಹಿಳಾ ದಿನಾಚರಣೆಯು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯದ ಸಾಧನೆಯನ್ನು ಗುರುತಿಸಲು ಮತ್ತು ಸಮಾನತೆಗಳನ್ನು ಪ್ರತಿಪಾದಿಸಲು ಆಚರಿಸಲಾಗುವ ವಿಶೇಷ ದಿನವಾಗಿದೆ. ಈ ದಿನದಂದೇ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Fri, 8 March 24