ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್​ಗೆ ಪತ್ರ

ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್​ಗೆ ಪತ್ರ
ಮಲ್ಲಿಕಾರ್ಜುನ ಖರ್ಗೆ
Follow us
ನಯನಾ ರಾಜೀವ್
|

Updated on:Dec 19, 2024 | 2:02 PM

ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.

ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್​ಗೆ ಖರ್ಗೆ ಪತ್ರ ಬರೆದಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.

82 ವರ್ಷದ ಖರ್ಗೆ ಅವರು 2017ರ ಜೂನ್‌ನಲ್ಲಿ ದೆಹಲಿಯ ಏಮ್ಸ್‌ನಲ್ಲಿ ಎಡ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಷಯವಾಗಿ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಇನ್ನೂ ಸಂಸತ್‌ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ನಾನು ಯಾರನ್ನೂ ತಳ್ಳಿಲ್ಲ.

ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ

ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತು ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Thu, 19 December 24