ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿರುವ ಪ್ರಕರಣ ಮುನ್ನೆಲೆಗೆ ಬಂದಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು
ಕನ್ಹಯ್ಯ ಕುಮಾರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 01, 2022 | 4:12 PM

ಲಕ್ನೋ: ಲಕ್ನೋದ ಕಾಂಗ್ರೆಸ್ ಕಚೇರಿಯಲ್ಲಿ ಜೆಎನ್​ಯು (JNU) ಮಾಜಿ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಲಾಗಿದೆ. ಆದರೆ, ಅದು ಇಂಕ್ ಅಲ್ಲ, ಒಂದು ರೀತಿಯ ಆಸಿಡ್ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆರೋಪಿಗಳು ಕನ್ಹಯ್ಯಾ ಕುಮಾರ್ (Kanhaiya Kumar) ಅವರ ಮೇಲೆ ಆಸಿಡ್ ಎಸೆಯಲು ಪ್ರಯತ್ನಿಸಿದರು. ಆದರೆ ಅದು ವಿಫಲವಾಯಿತು. ಆ ಆಸಿಡ್​ನ ಕೆಲವು ಹನಿಗಳು ಹತ್ತಿರದಲ್ಲಿ ನಿಂತಿದ್ದ 3ರಿಂದ 4 ಯುವಕರ ಮೇಲೆ ಬಿದ್ದವು. ಪ್ರಸ್ತುತ, ಆರೋಪಿಗಳ ಬಗ್ಗೆ ಯಾರೂ ಏನನ್ನೂ ಹೇಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು (Congress Leaders) ಆಪಾದಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಲಕ್ನೋದ ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯಾ ಕುಮಾರ್ ಮೇಲೆ ಈ ಮಸಿ ಎರಚಲಾಗಿದೆ ಎಂದು ಹೇಳಲಾಗುತ್ತಿದೆ. ಮಸಿ ಎಂದು ಎಲ್ಲರನ್ನೂ ನಂಬಿಸಲಾಗುತ್ತದೆ. ಆದರೆ, ಅದು ಒಂದು ರೀತಿಯ ಆಸಿಡ್ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.

ಕಾಂಗ್ರೆಸ್ ಯುವ ಮುಖಂಡ ಕನ್ಹಯ್ಯಾ ಕುಮಾರ್ ಲಕ್ನೋದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದರು. ಇಂದು ಅವರು ಲಕ್ನೋದ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಾಗಿ ಕೈ ಜೋಡಿಸಿ ಮತ ಕೇಳಿದರು. ಈ ವೇಳೆ ಸಂವಾದದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಸಾರ್ವಜನಿಕರ ಹಾದಿ ಹಿಡಿದಿದ್ದು, ಉಳಿದವರೆಲ್ಲರೂ ವರ್ಚುವಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪಕ್ಷ ತೊರೆಯುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕನ್ಹಯ್ಯ ಕುಮಾರ್, ಕೆಲವು ನಾಯಕರು ವಯಸ್ಸಾದ ಕಾರಣದಿಂದ ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಮ್ಮಂಥವರು ಕಾಂಗ್ರೆಸ್ ಸೇರಲು ಮುಂದೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ಹಯ್ಯ ಕುಮಾರ್ ಇಂದು ಹೇಳಿದ್ದರು. ದೇಶವನ್ನು ಸೃಷ್ಟಿಸದವರು ದೇಶವನ್ನು ಮಾರುತ್ತಿದ್ದಾರೆ, ಕಾಂಗ್ರೆಸ್ ದೇಶವನ್ನು ಸೃಷ್ಟಿಸಿದೆ, ಆದ್ದರಿಂದ ಕಾಂಗ್ರೆಸ್ ಈ ದೇಶವನ್ನು ಉಳಿಸುತ್ತಿದೆ ಎಂದು ಚುನಾವಣಾ ಪ್ರಚಾರದ ವೇಳೆ ಕನ್ಹಯ್ಯ ಕುಮಾರ್ ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

Published On - 4:11 pm, Tue, 1 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್