“ಸ್ಪೆಷಲ್ 26” ಸಿನಿಮಾದಿಂದ ಸ್ಫೂರ್ತಿ ಪಡೆದು ಉದ್ಯಮಿಗೆ ಸಮನ್ಸ್ ನೀಡಿದ ನಕಲಿ ಇಡಿ

ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ ನಕಲಿ ಜಾರಿ ನಿರ್ದೇಶನಾಲಯವು ಸಮನ್ಸ್ ಕಳುಹಿಸಿ ಸುಮಾರು 20 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಒಂಬತ್ತು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ

ಸ್ಪೆಷಲ್ 26 ಸಿನಿಮಾದಿಂದ ಸ್ಫೂರ್ತಿ ಪಡೆದು ಉದ್ಯಮಿಗೆ ಸಮನ್ಸ್ ನೀಡಿದ ನಕಲಿ ಇಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 18, 2022 | 12:52 PM

ದೆಹಲಿ; ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ ನಕಲಿ ಜಾರಿ ನಿರ್ದೇಶನಾಲಯವು ಸಮನ್ಸ್ ಕಳುಹಿಸಿ ಸುಮಾರು 20 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಒಂಬತ್ತು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾಡಲು ಬಾಲಿವುಡ್‌ನ ಜನಪ್ರಿಯ ಸಿನಿಮಾ ಅಕ್ಷಯ್ ಕುಮಾರ್ ನಟನೆಯ ‘ಸ್ಪೆಷಲ್ 26’ (Special 26) ನಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಆರೋಪಿಯು ನಿಪ್ಪಾನ್ ಇಂಡಿಯಾ ಪೇಂಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಹರ್ದೇವ್ ಸಿಂಗ್ ಅವರಿಗೆ ಎರಡು ನಕಲಿ ನೋಟೀಸ್ ಕಳುಹಿಸಿದ್ದಾರೆ ಮತ್ತು ಫೆಡರಲ್ ಏಜೆನ್ಸಿ ತನ್ನ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಅಪರಾಧ ಬ್ರಾಂಚ್) ರವೀಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಈ ಕಾರಣದಿಂದ ಹರ್ದೇವ್ ಸಿಂಗ್ ಅವರಿಗೆ ಇದರಿಂದ ತೀವ್ರ ತೊಂದರೆಯಾಗಿದೆ ಮತ್ತು ಇಡಿ ಕಚೇರಿಯಲ್ಲಿ ಮಾತನಾಡಿದ ನಂತರ ಈ ವಿಚಾರದ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ರವೀಂದ್ರ ಸಿಂಗ್ ಯಾದವ್ ಹೇಳಿದ್ದಾರೆ. ಹರ್ದೇವ್ ಸಿಂಗ್ ಸ್ಪೀಡ್ ಪೋಸ್ಟ್ ಮೂಲಕ ನಕಲಿ ನೋಟೀಸ್‌ಗಳನ್ನು ಸ್ವೀಕರಿಸಿದರು, ಇದರಿಂದ ಮುಕ್ತಿ ನೀಡುವಂತೆ ಆರೋಪಿಯನ್ನು ಸಂಪರ್ಕಿಸಿದಾಗ ಅವರು ಮೊದಲಿಗೆ 2-3 ಕೋಟಿ ರೂ. ಬೇಡಿಕೆಯಿಟ್ಟರು ಮತ್ತು ದೆಹಲಿಯಲ್ಲಿ ಭೇಟಿಯಾಗುವಂತೆಯೂ ಹೇಳಿದರು ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ: 17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ

ನವೆಂಬರ್ 11 ರಂದು, ಹರ್ದೇವ್ ಸಿಂಗ್ ಮೊತ್ತವನ್ನು ಕಡಿಮೆ ಮಾಡಲು ಆರೋಪಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಖುದ್ದಾಗಿ ಭೇಟಿಯಾಗುವಂತೆ ಹೇಳಲಾಗಿತ್ತು ಎಂದು ಅವರು ಹೇಳಿದರು. ಮರುದಿನ, ಹರ್ದೇವ್ ಸಿಂಗ್ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರು ಆರೋಪಿಗಳನ್ನು ಭೇಟಿಯಾಗಿದ್ದಾರೆ. ನಕಲಿ ಇಡಿ ಅಧಿಕಾರಿಗಳು ನಿಮ್ಮ (ಹರ್ದೇವ್ ಸಿಂಗ್) ಸಾವಿರಾರು ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದೆ ಎಂದು ಹೇಳಿದ್ದಾರೆ. ಇದನ್ನು 2-3 ಕೋಟಿಗಳಲ್ಲಿ ಇತ್ಯರ್ಥಪಡಿಸಬಹುದು. ಈ ಆರೋಪದಿಂದ ಹೊರಬರಲು ದೆಹಲಿಯಲ್ಲಿ ಉಳಿಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿಕೊಳ್ಳಿ ಎಂದು ನಕಲಿ ಇಡಿ ಅಧಿಕಾರಿಗಳು ಹೇಳಿದ್ದರೆ ಎಂದು ಅಧಿಕಾರಿ ತನಿಖೆಯಲ್ಲಿ ತಿಳಿಸಿದ್ದಾರೆ.

ಅವರ ಬೇಡಿಕೆಗಳಿಗೆ ಮಣಿದ ಹರ್ದೇವ್ ಸಿಂಗ್ ಅವರು ತಮ್ಮ ವಿಮಾನ ಕಾಯ್ದಿರಿಸಿ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಐಷಾರಾಮಿ ಹೋಟೆಲ್‌ನಲ್ಲಿ ಭೇಟಿಯಾಗಿ ಮೀಟಿಂಗ್ ಮಾಡಿದ್ದಾರೆ. ಆದರೆ ಆರೋಪಿಗಳು ಏಕಾಏಕಿ 20 ಕೋಟಿ ರೂ. ನೀಡುವಂತೆ ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿಗಳು ಬೇಡಿಕೆಯನ್ನು ಹೆಚ್ಚಿಸಿದ್ದಾರೆ ಎಂದು ಪೊಲೀಸ್ ಯಾದವ್ ಹೇಳಿದ್ದಾರೆ.

ಇದರ ನಂತರ, ಹರ್ದೇವ್ ಸಿಂಗ್ ಪೊಲೀಸರನ್ನು ಸಂಪರ್ಕಿಸಿದ್ದರೆ ಪ್ರಕರಣದ ಬಗ್ಗೆ ವಿವರಿಸಿದ್ದರೆ, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಹೋಟೆಲ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಅದೇ ಹೋಟೆಲ್‌ನ ಕೋಣೆಯಲ್ಲಿ ತಮ್ಮ ಮೂವರು ಸಹಚರರು ಇದ್ದರು ಎಂದು ಆರೋಪಿಗಳು ಬಹಿರಂಗಪಡಿಸಿದರು ಎಂದು ಅಧಿಕಾರಿ ಹೇಳಿದರು. ಪೊಲೀಸರು ಅವರನ್ನು ಕೂಡ ಬಂಧಿಸಿದ್ದಾರೆ. ಈ ಇಡೀ ಪ್ರಕರಣದಲ್ಲಿ ಇದನ್ನು ನಿಖರವಾಗಿ ಯೋಜಿಸಲಾಗಿದೆ ಮತ್ತು ಪ್ಲಾನ್ ಪ್ರಕಾರವೇ ಎಲ್ಲವೂ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ, 12 ಮೊಬೈಲ್ ಫೋನ್‌ಗಳು ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Published On - 12:52 pm, Fri, 18 November 22

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ