AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ ಎಂದಿದ್ದರು.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Dec 21, 2021 | 3:33 PM

Share

ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ (​Instagram Accounts Hacked) ಆಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಇಂದು ಆರೋಪ ಮಾಡಿದ್ದಾರೆ. ಇತ್ತೀಚೆಗೆಷ್ಟೇ ಸಮಾಜವಾದಿ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​, ತಮ್ಮ ಫೋನ್​ನ್ನು ಯೋಗಿ ಆದಿತ್ಯನಾಥ್​ ಕದ್ದಾಲಿಕೆ ಮಾಡುತ್ತಿದ್ದಾರೆ. ನನ್ನ ಕಚೇರಿ, ನನ್ನ ಸುತ್ತಲಿನ ಜನರ ಫೋನ್​ಗಳೆಲ್ಲ ಟ್ಯಾಪ್​ ಆಗಿವೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ, ತಮ್ಮ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.  ಇನ್ನು ಅಖಿಲೇಶ್ ಯಾದವ್​ ಫೋನ್​ ಟ್ಯಾಪ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್​, ಅಖಿಲೇಶ್ ಯಾದವ್​ ತಾವು ಮುಖ್ಯಮಂತ್ರಿಯಾಗಿದ್ದಾಗ ಹೀಗೆ ಫೋನ್ ಕದ್ದಾಲಿಕೆ ಮಾಡಿದ್ದಿರಬೇಕು. ಅದಕ್ಕೆ ಈಗ ಉಳಿದವರೂ ಅದೇ ರೀತಿ ಮಾಡುತ್ತಾರೆ ಎಂದು ನ್ಕೊಂ​ ಡು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ನಿರಂಕುಶಾಧಿಕಾರಿಗಳನ್ನು ನಿಯಂತ್ರಿಸುತ್ತಿಲ್ಲ. ಇವೆಲ್ಲವನ್ನೂ ಬಿಟ್ಟು ಪ್ರತಿಪಕ್ಷಗಳ ಫೋನ್​ ಕದ್ದಾಲಿಕೆಯಂತ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದ್ದರು.  ಹಾಗೇ, ಇಂದು ಪ್ರಯಾಗ್​ ರಾಜ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಪ್ರಿಯಾಂಕಾ ಗಾಂಧಿ, ನಾನೊಬ್ಬಳು ಹುಡುಗಿಯಾಗಿ ಹುಟ್ಟಿದ್ದೇನೆ..ನಾನು ಹೋರಾಟವನ್ನೂ ಮಾಡಬಲ್ಲೆ. ಇಂದು ಪ್ರಧಾನಮಂತ್ರಿ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸ್ತ್ರೀಯರಲ್ಲೂ ಅರಿವು ಮೂಡಿದೆ. ಈ ದೇಶದ ಶಕ್ತಿಯಾಗಿರುವ ಮಹಿಳೆಯರ ಎದುರು ಪ್ರಧಾನಮಂತ್ರಿ ನರೇಂದ್ರ ಮೋದಿ ತಲೆ ಬಾಗಿದ್ದಾರೆ. ಉತ್ತರ ಪ್ರದೇಶದ ಮಹಿಳೆಯರಿಗೆ ಸಿಕ್ಕ ಜಯ ಇದಾಗಿದೆ. ನನಗೆ ತುಂಬ ಸಂತೋಷವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಅನುಪಯೋಗಿ ಸಿಎಂ ನನ್ನ ಫೋನ್ ಟ್ಯಾಪ್​ ಮಾಡಿಸುತ್ತಿದ್ದಾರೆ, ದಿನಾ ಸಂಜೆ ಅವರು ರೆಕಾರ್ಡಿಂಗ್​ ಕೇಳುತ್ತಾರೆ: ಅಖಿಲೇಶ್​ ಯಾದವ್ ಆರೋಪ

Published On - 3:33 pm, Tue, 21 December 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ