AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

44 ಲಕ್ಷ ರೂ. ವಿಮಾ ಹಣಕ್ಕಾಗಿ ಪತ್ನಿಯ ಭೀಕರ ಕೊಲೆ: ಅಪಘಾತವೆಂದು ಬಿಂಬಿಸಲು ಹೋಗಿ ಜೈಲುಪಾಲಾದ ಗಂಡ

ಹಣದ ದುರಾಸೆಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿದ್ದ 44 ಲಕ್ಷ ರೂ. ವಿಮಾ ಮೊತ್ತವನ್ನು ಪಡೆಯಲು ಆಕೆಯನ್ನೇ ಭೀಕರವಾಗಿ ಕೊಲೆ ಮಾಡಿ, ನಂತರ ಅಪಘಾತವೆಂದು ಬಿಂಬಿಸಲು ಮೃತದೇಹದ ಮೇಲೆ ಕಾರು ಹರಿಸಿ ಸುಟ್ಟುಹಾಕಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರೀಟಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಅಮರ್ ಸಿಂಗ್ ಹಾಗೂ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

44 ಲಕ್ಷ ರೂ. ವಿಮಾ ಹಣಕ್ಕಾಗಿ ಪತ್ನಿಯ ಭೀಕರ ಕೊಲೆ: ಅಪಘಾತವೆಂದು ಬಿಂಬಿಸಲು ಹೋಗಿ ಜೈಲುಪಾಲಾದ ಗಂಡ
ಕ್ರೈಂ
ನಯನಾ ರಾಜೀವ್
|

Updated on: Aug 03, 2026 | 2:09 PM

Share

ಹಮೀರ್‌ಪುರ, ಆಗಸ್ಟ್ 03: ಹಣದ ದುರಾಸೆಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿದ್ದ 44 ಲಕ್ಷ ರೂ. ವಿಮಾ ಮೊತ್ತವನ್ನು ಪಡೆಯಲು ಆಕೆಯನ್ನೇ ಭೀಕರವಾಗಿ ಕೊಲೆ(Murder) ಮಾಡಿ, ನಂತರ ಅಪಘಾತವೆಂದು ಬಿಂಬಿಸಲು ಮೃತದೇಹದ ಮೇಲೆ ಕಾರು ಹರಿಸಿ ಸುಟ್ಟುಹಾಕಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರೀಟಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಅಮರ್ ಸಿಂಗ್ ಹಾಗೂ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಕಾಣೆಯಾಗಿದ್ದಾಳೆ ಎಂದು ಆರೋಪಿ ಅಮರ್ ಸಿಂಗ್ ಸ್ವತಃ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ. ಆದರೆ ಆತನ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ನೈಜ ಕೃತ್ಯ ಬಯಲಾಗಿದೆ.

ಲಾಲ್‌ಪುರ ಪ್ರದೇಶದ ಬೈತ್ಕಾ ಧಾಮ್ ದೇವಾಲಯದ ಬಳಿ ಪತ್ನಿಯನ್ನು ಕೋಲು ಮತ್ತು ದೊಣ್ಣೆಗಳಿಂದ ಅಮಾನವೀಯವಾಗಿ ಹೊಡೆದು ಕೊಂದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಕೊಲೆಯ ನಂತರ ಅದನ್ನು ರಸ್ತೆ ಅಪಘಾತವೆಂದು ತೋರಿಸಲು ಶವದ ಮೇಲೆ ಕಾರು ಹರಿಸಿ, ನಂತರ ಬೆಂಕಿ ಹಚ್ಚಿ ಸುಟ್ಟುಹಾಕಲು ಯತ್ನಿಸಿದ್ದರು.

12 ಕ್ಕೂ ಹೆಚ್ಚು ತೀವ್ರ ಗಾಯಗಳು: ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ರೀಟಾ ಅವರ ದೇಹದ ಮೇಲೆ 12 ಕ್ಕೂ ಹೆಚ್ಚು ಭೀಕರ ಹೊರಗಾಯಗಳಿದ್ದವು. ಮೂತ್ರಪಿಂಡಗಳನ್ನು ಹೊರತುಪಡಿಸಿ ದೇಹದ ಬಹುತೇಕ ಎಲ್ಲಾ ಆಂತರಿಕ ಅಂಗಾಂಗಗಳು ತೀವ್ರವಾಗಿ ಜಜ್ಜಲ್ಪಟ್ಟು ಹಾನಿಗೊಳಗಾಗಿದ್ದವು.

ಮತ್ತಷ್ಟು ಓದಿ: ಧರ್ಮದ ಹೆಸರಿನಲ್ಲಿ ಕ್ರೂರತೆ; ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಪ್ ನಾಯಕ ತಾಹಿರ್ ಹುಸೇನ್​ಗೆ ಜೀವಾವಧಿ ಶಿಕ್ಷೆ

44 ಲಕ್ಷದ ವಿಮೆ ಮತ್ತು ತಂದೆಯ ಆಕ್ರೋಶ ಮೊದಲ ಪತಿಯ ಮರಣದ ನಂತರ ರೀಟಾ ಕಾನ್ಪುರದಲ್ಲಿ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಅಮರ್ ಸಿಂಗ್‌ನನ್ನು ಭೇಟಿಯಾಗಿ, ಎರಡು ವರ್ಷಗಳ ಹಿಂದೆ ಆತನನ್ನು ಮದುವೆಯಾಗಿದ್ದರು. ರೀಟಾಗೆ ಮೊದಲ ಮದುವೆಯಿಂದ ನಾಲ್ವರು ಮಕ್ಕಳಿದ್ದಾರೆ. ರೀಟಾ ಅವರ ತಂದೆ ಸರ್ವೇಶ್ ಕುಮಾರ್ ನೀಡಿರುವ ಮಾಹಿತಿಯಂತೆ, ಅಮರ್ ಸಿಂಗ್ ಎರಡು ತಿಂಗಳ ಹಿಂದೆಯಷ್ಟೇ ಪತ್ನಿಯ ಹೆಸರಿನಲ್ಲಿ44 ಲಕ್ಷ ರೂ. ಜೀವವಿಮೆ ಪಾಲಿಸಿ ಮಾಡಿಸಿ, 2.60 ಲಕ್ಷ ರೂ. ಪ್ರಥಮ ಪ್ರೀಮಿಯಂ ಪಾವತಿಸಿದ್ದ. ವಿಮಾ ಹಣ ಕೈಸೇರಿದ ತಕ್ಷಣ ಆಕೆಯನ್ನು ಮುಗಿಸಲು ಪ್ಲಾನ್ ಮಾಡಿದ್ದ.

ಇತ್ತೀಚಿನ ದಿನಗಳಲ್ಲಿ ಜೀವವಿಮೆ ಹಣಕ್ಕಾಗಿ ಕುಟುಂಬದವರನ್ನೇ ಕೊಲೆ ಮಾಡುವ ಪ್ರಕರಣಗಳು ದೇಶದ ಹಲವೆಡೆ ಹೆಚ್ಚುತ್ತಿವೆ. ಹಮೀರ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಅರವಿಂದ್ ಕುಮಾರ್ ವರ್ಮಾ ಅವರು ಮಾತನಾಡಿ, ಆರೋಪಿಗಳು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರೂ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಕೇವಲ 24 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಎಲ್ಲರನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ತಾಯಿಯನ್ನು ಕಳೆದುಕೊಂಡ ರೀಟಾ ಅವರ ನಾಲ್ವರು ಮಕ್ಕಳು ಪ್ರಸ್ತುತ ಮೈನ್‌ಪುರಿಯಲ್ಲಿ ತಮ್ಮ ಅಜ್ಜ-ಅಜ್ಜಿಯ ಆಸರೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ