ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆ; ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

ಚುನಾವಣಾ ನಿಯಮಗಳಿಗೆ ತಿದ್ದುಪಡಿ ಮಾಡಿದ್ದರ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಇದರಿಂದ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಚ್ಯುತಿ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸಿಸಿಟಿವಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವಿಡಿಯೋ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆ; ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್
Supreme Court
Follow us
ಸುಷ್ಮಾ ಚಕ್ರೆ
|

Updated on: Dec 24, 2024 | 3:31 PM

ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿರುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು ಆರೋಪಿಸಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ ಎಂದು ಕಾಂಗ್ರೆಸ್ ಹೇಳಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಚುನಾವಣಾ ಆಯೋಗವು ಇಂತಹ ಮಹತ್ವದ ಕಾನೂನನ್ನು ಏಕಪಕ್ಷೀಯವಾಗಿ ತಿದ್ದುಪಡಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ; ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ 11 ಪ್ರಸ್ತಾವನೆಗಳಿವು

“1961ರ ಚುನಾವಣಾ ನಿಯಮಗಳ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚುನಾವಣಾ ಪ್ರಕ್ರಿಯೆಯ ಸಮಗ್ರತೆಯು ವೇಗವಾಗಿ ನಾಶವಾಗುತ್ತಿದೆ. ಅದನ್ನು ಮರುಸ್ಥಾಪಿಸಲು ಸುಪ್ರೀಂ ಕೋರ್ಟ್ ಸಹಾಯ ಮಾಡುತ್ತದೆ ಎಂದು ಭಾವಿಸುತ್ತೇವೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಕಾನೂನು ಸಚಿವಾಲಯವು ಡಿಸೆಂಬರ್ 20ರಂದು ಸಾರ್ವಜನಿಕ ತಪಾಸಣೆಗೆ ತೆರೆದಿರುವ “ಪೇಪರ್” ಅಥವಾ ದಾಖಲೆಗಳ ಪ್ರಕಾರವನ್ನು ನಿರ್ಬಂಧಿಸಲು ಚುನಾವಣಾ ನಿಯಮಗಳ ನಡವಳಿಕೆ, 1961 ರ ನಿಯಮ 93(2)(a) ಅನ್ನು ತಿದ್ದುಪಡಿ ಮಾಡಿದೆ.

ಇದನ್ನೂ ಓದಿ: One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

ಮತಗಟ್ಟೆಯೊಳಗೆ ಸಿಸಿಟಿವಿ ಕ್ಯಾಮೆರಾಗಳಿಗೆ ಅವಕಾಶ ನೀಡುವುದರಿಂದ ಮತದಾರರ ಗೌಪ್ಯತೆಯನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಈ ಕ್ರಮವು ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆ ತರುತ್ತದೆ ಎಂದು ಕಾಂಗ್ರೆಸ್ ಟೀಕಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ