AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 2 ವರ್ಷಗಳ ಬಳಿಕ ಮಾರ್ಚ್​ 27ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭ

ಜಗತ್ತಿನಾದ್ಯಂತ ಬಹುತೇಕ ಜನರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವುದರಿಂದ ಮೊದಲಿಗಿಂತಲೂ ಇದೀಗ ಕೊರೊನಾವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬಂದಿರುವುದರಿಂದ ಭಾರತ ಸರ್ಕಾರ ಮಾರ್ಚ್​ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ.

ಭಾರತದಲ್ಲಿ 2 ವರ್ಷಗಳ ಬಳಿಕ ಮಾರ್ಚ್​ 27ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 08, 2022 | 6:47 PM

Share

ನವದೆಹಲಿ: ಕೊರೊನಾದಿಂದಾಗಿ ಎರಡು ವರ್ಷ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನಗಳ (International Flights) ಹಾರಾಟ ಈ ತಿಂಗಳ ಅಂತ್ಯದಿಂದ ಮತ್ತೆ ಆರಂಭವಾಗಲಿದೆ. 2 ವರ್ಷಗಳ ಅಂತರದ ನಂತರ ಭಾರತ ಇಂದು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಹಿಂತೆಗೆದುಕೊಂಡಿದೆ. ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸ್ಥಗಿತಗೊಂಡಿರುವ ಸಾಗರೋತ್ತರ ವಿಮಾನಗಳು ಮಾರ್ಚ್ 27ರಿಂದ ಪುನರಾರಂಭವಾಗಲಿವೆ. ಜಗತ್ತಿನಾದ್ಯಂತ ಬಹುತೇಕ ಜನರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವುದರಿಂದ ಮೊದಲಿಗಿಂತಲೂ ಇದೀಗ ಕೊರೊನಾವೈರಸ್ (Coronavirus) ಹರಡುವಿಕೆ ನಿಯಂತ್ರಣಕ್ಕೆ ಬಂದಿರುವುದರಿಂದ ಭಾರತ ಸರ್ಕಾರವು ಮಾರ್ಚ್​ 27ರಿಂದ ಭಾರತಕ್ಕೆ ಮತ್ತು ಭಾರತದಿಂದ ಇತರೆ ದೇಶಗಳಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ.

ಏರ್ ಬಬಲ್ ವ್ಯವಸ್ಥೆಗಳ ಮೂಲಕ ಕೆಲವು ಷರತ್ತುಗಳಿಗೆ ಒಳಪಟ್ಟು ಎರಡು ದೇಶಗಳು ಪರಸ್ಪರರ ಪ್ರದೇಶಗಳಿಗೆ ವಿಮಾನಗಳನ್ನು ನಿರ್ವಹಿಸಲು ಅನುವು ಮಾಡಿಕೊಡಲಾಗುತ್ತಿತ್ತು. ಈ ವ್ಯವಸ್ಥೆ ಅಡಿಯಲ್ಲಿ ಜುಲೈ 2020ರಿಂದ ಭಾರತ ಮತ್ತು 37 ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಅಂತಾರಾಷ್ಟ್ರೀಯ ವಿಮಾನದ ಕಾರ್ಯಾಚರಣೆಗಳು, ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ವಿಮಾನಯಾನ ಸಚಿವಾಲಯ ಹೇಳಿದೆ. 25 ತಿಂಗಳ ನಿಷೇಧದ ನಂತರ ಭಾರತಕ್ಕೆ ಮತ್ತು ಭಾರತದಿಂದ ಅಂತಾರರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

2020ರ ಮಾರ್ಚ್ 23ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿಷೇಧ ಜಾರಿಯಲ್ಲಿದೆ. ಆದರೂ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಮೇ 2020ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ದ್ವಿಪಕ್ಷೀಯ ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ. 2020ರ ಮಾರ್ಚ್​ 23ರಿಂದ ಏಕಾಏಕಿ ಭಾರತದಲ್ಲಿ ಕೊರೊನಾವೈರಸ್ ಹೆಚ್ಚಾಗಿದ್ದರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ವಿಶೇಷ ಪ್ರಯಾಣಿಕ ವಿಮಾನಗಳು ಜುಲೈ 2020 ರಿಂದ ಭಾರತ ಮತ್ತು ಸುಮಾರು 45 ದೇಶಗಳ ನಡುವೆ ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಇದನ್ನೂ ಓದಿ: Covid 4th Wave: ಕೊವಿಡ್ 4ನೇ ಅಲೆ ಡೆಲ್ಟಾದಷ್ಟೇ ಅಪಾಯಕಾರಿಯಾಗಿರುತ್ತಾ?; ವಿಜ್ಞಾನಿಗಳ ಉತ್ತರ ಹೀಗಿದೆ

ಭಾರತದಲ್ಲಿ ಕಮರ್ಷಿಯಲ್ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ವಿಸ್ತರಣೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?