ಸರಳ ರೀತಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಮೋದಿ

International Lawyers' Conference 2023: ಭಾರತ ಸರ್ಕಾರದಲ್ಲಿ ನಾವು ಕಾನೂನನ್ನು ಎರಡು ರೀತಿಯಲ್ಲಿ ರಚಿಸಬೇಕೆಂದು ಯೋಚಿಸುತ್ತಿದ್ದೇವೆ. ಒಂದು ಕರಡು ನೀವು ಬಳಸುತ್ತಿರುವ ಭಾಷೆಯಲ್ಲಿರುತ್ತದೆ ಎಂದು ಅವರು ಕಾನೂನು ಕ್ಷೇತ್ರದಲ್ಲಿರುವವರನ್ನು ಉದ್ದೇಶಿಸಿ ಹೇಳಿದ್ದಾರೆ. ಎರಡನೆಯ ಕರಡು ದೇಶದ ಸಾಮಾನ್ಯ ಜನರಿಗೆ ಅರ್ಥವಾಗುವ ಭಾಷೆಯಲ್ಲಿರುತ್ತದೆ. ಯಾಕೆಂದರೆ ಅದು ಅವರಿಗೂ ಅರ್ಥವಾಗಬೇಕು ಎಂದು ಮೋದಿ ಹೇಳಿದ್ದಾರೆ.

ಸರಳ ರೀತಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 23, 2023 | 1:11 PM

ದೆಹಲಿ ಸೆಪ್ಟೆಂಬರ್ 23: ದೇಶದ ಸ್ವಾತಂತ್ರ್ಯ ಚಳವಳಿ ಮತ್ತು ಅದರ ಮುಂದುವರಿದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಕಾನೂನು ತಜ್ಞರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ‘ಅಂತರರಾಷ್ಟ್ರೀಯ ವಕೀಲರ ಸಮ್ಮೇಳನ 2023’ (International Lawyers’ Conference 2023)  ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಕಾನೂನು ವ್ಯವಸ್ಥೆಯನ್ನು ರೂಪಿಸುವಲ್ಲಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಕೀಲರು ಮತ್ತು ನ್ಯಾಯಾಂಗವು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಪೂರೈಸಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ, ಕಾನೂನು ತಜ್ಞರು ಮಹತ್ತರ ಪಾತ್ರವಹಿಸಿದ್ದಾರೆ. ಅನೇಕ ವಕೀಲರು ತಮ್ಮ ವೃತ್ತಿ ತೊರೆದು ಸ್ವಾತಂತ್ರ್ಯ ಚಳವಳಿಯಲ್ಲಿ ಸೇರಿದ್ದಾರೆ. ಯಾವುದೇ ದೇಶದ ನಿರ್ಮಾಣದಲ್ಲಿ ಕಾನೂನು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ವರ್ಷಗಳಿಂದ, ನ್ಯಾಯಾಂಗ ಮತ್ತು ವಕೀಲರು ಭಾರತದ ಕಾನೂನು ಮತ್ತು ಸುವ್ಯವಸ್ಥೆಯ ಪೋಷಕರಾಗಿದ್ದಾರೆ ಎಂದು ಮೋದಿ ಹೇಳಿದರು.

ತಮ್ಮ ಸರ್ಕಾರವು ಕಾನೂನುಗಳನ್ನು ಸರಳ ರೀತಿಯಲ್ಲಿ ಮತ್ತು ಗರಿಷ್ಠ ಪ್ರಮಾಣದಲ್ಲಿ ಭಾರತೀಯ ಭಾಷೆಗಳಲ್ಲಿ ರಚಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ.

ಭಾರತ ಸರ್ಕಾರದಲ್ಲಿ ನಾವು ಕಾನೂನನ್ನು ಎರಡು ರೀತಿಯಲ್ಲಿ ರಚಿಸಬೇಕೆಂದು ಯೋಚಿಸುತ್ತಿದ್ದೇವೆ. ಒಂದು ಕರಡು ನೀವು ಬಳಸುತ್ತಿರುವ ಭಾಷೆಯಲ್ಲಿರುತ್ತದೆ ಎಂದು ಅವರು ಕಾನೂನು ಕ್ಷೇತ್ರದಲ್ಲಿರುವವರನ್ನು ಉದ್ದೇಶಿಸಿ ಹೇಳಿದ್ದಾರೆ. ಎರಡನೆಯ ಕರಡು ದೇಶದ ಸಾಮಾನ್ಯ ಜನರಿಗೆ ಅರ್ಥವಾಗುವ ಭಾಷೆಯಲ್ಲಿರುತ್ತದೆ. ಯಾಕೆಂದರೆ ಅದು ಅವರಿಗೂ ಅರ್ಥವಾಗಬೇಕು ಎಂದು ಮೋದಿ ಹೇಳಿದ್ದಾರೆ.

ಪಂಚಾಯತ್‌ಗಳ ಮೂಲಕ ಸಂಘರ್ಷ ಪರಿಹಾರದ ಸಾಂಪ್ರದಾಯಿಕ ಭಾರತೀಯ ಅಭ್ಯಾಸವನ್ನು ಎತ್ತಿ ಹಿಡಿದ ಪ್ರಧಾನಿ, ಇದು ದಶಕಗಳಿಂದ ದೇಶದ ಸಂಸ್ಕೃತಿಯಲ್ಲಿ ಬೇರೂರಿದೆ ಎಂದು ಹೇಳಿದರು. ಈ ಹಳೆಯ ವ್ಯವಸ್ಥೆಯನ್ನು ಔಪಚಾರಿಕಗೊಳಿಸಲು, ಸರ್ಕಾರವು ಇತ್ತೀಚೆಗೆ ಮಧ್ಯಸ್ಥಿಕೆ ಕಾಯಿದೆಯನ್ನು (Mediation Act) ಜಾರಿಗೊಳಿಸಿತು, ಇದು ಅನೌಪಚಾರಿಕ ಸಂಘರ್ಷ ಪರಿಹಾರ ಪ್ರಕ್ರಿಯೆಗೆ ನಿಯಂತ್ರಿತ ರಚನೆಯನ್ನು ತರುವ ಗುರಿಯನ್ನು ಹೊಂದಿದೆ.

“ಈ ಅನೌಪಚಾರಿಕ ವ್ಯವಸ್ಥೆಗೆ ನಿಯಂತ್ರಿತ ರೂಪವನ್ನು ನೀಡಲು, ಸರ್ಕಾರವು ಮಧ್ಯಸ್ಥಿಕೆ ಕಾಯಿದೆಯನ್ನು ಮಾಡಿದೆ” ಎಂದು ಅವರು ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರ ಮತ್ತು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಮಿಷನ್‌ನ ಯಶಸ್ವಿ ಲ್ಯಾಂಡಿಂಗ್ ಸೇರಿದಂತೆ ಭಾರತದಲ್ಲಿನ ಹಲವಾರು ಐತಿಹಾಸಿಕ ಬೆಳವಣಿಗೆಗಳೊಂದಿಗೆ ಅಂತರರಾಷ್ಟ್ರೀಯ ವಕೀಲರ ಸಮ್ಮೇಳನವು ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಭಾರತವು ಹಲವಾರು ಐತಿಹಾಸಿಕ ಹೆಜ್ಜೆಗಳನ್ನು ಇಡುತ್ತಿರುವ ಅವಧಿಯಲ್ಲಿ ಈ ಸಮ್ಮೇಳನ ನಡೆಯುತ್ತಿದೆ. ಇತ್ತೀಚೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿತ್ತು. ನಾರಿ ಶಕ್ತಿ ವಂದನ್ ಅಧಿನಿಯಮ್  ಭಾರತದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ’ಗೆ ಹೊಸ ದಿಶೆ ಮತ್ತು ಶಕ್ತಿಯನ್ನು ನೀಡುತ್ತದೆ.

ಇದನ್ನೂ ಓದಿ: ಹೊಸ ಸಂಸತ್ತನ್ನು ‘ಮೋದಿ ಮಲ್ಪಿಪ್ಲೆಕ್ಸ್’​ ಎಂದು ಕರೆದ ಕಾಂಗ್ರೆಸ್​ನ ಹಿರಿಯ ನಾಯಕ ಜೈರಾಮ್ ರಮೇಶ್​

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಗುರಿಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದು, ಈ ಉದ್ದೇಶವನ್ನು ಸಾಧಿಸುವಲ್ಲಿ ಪಕ್ಷಪಾತವಿಲ್ಲದ, ಬಲವಾದ ಮತ್ತು ಸ್ವತಂತ್ರ ನ್ಯಾಯಾಂಗದ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

ನಾವು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ (ರಾಷ್ಟ್ರ) ಆಗಲು ಕೆಲಸ ಮಾಡುತ್ತಿದ್ದೇವೆ. ಇದಕ್ಕಾಗಿ, ಪಕ್ಷಪಾತವಿಲ್ಲದ, ಬಲವಾದ ಮತ್ತು ಸ್ವತಂತ್ರ ನ್ಯಾಯಾಂಗದ ಅಗತ್ಯವಿದೆ . ಈ ಸಮ್ಮೇಳನದ ಮೂಲಕ ನಾವೆಲ್ಲರೂ ಪರಸ್ಪರ ಕಲಿಯಬಹುದು ಎಂದು ನಾನು ಭಾವಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್