ಮಹಿಳಾ ದಿನದಂತೆ ‘ವಿಶ್ವ ಪುರುಷ ದಿನ’ವನ್ನೂ ಆಚರಿಸಬೇಕು: ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್

ವಿಶ್ವ ಮಹಿಳಾ ದಿನದಂತೆ (International Women‘s Day), ವಿಶ್ವ ಪುರುಷ ದಿನಾಚರಣೆಯನ್ನು ಕೂಡ (International Men‘s Day) ಆಚರಿಸಬೇಕು ಎಂದು ಸೋನಲ್ ಮಾನ್​ಸಿಂಗ್ ಆಶಯ ವ್ಯಕ್ತಪಡಿಸಿದ್ದಾರೆ.

ಮಹಿಳಾ ದಿನದಂತೆ ‘ವಿಶ್ವ ಪುರುಷ ದಿನ’ವನ್ನೂ ಆಚರಿಸಬೇಕು: ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್
ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್
Follow us
TV9 Web
| Updated By: ganapathi bhat

Updated on:Apr 06, 2022 | 7:22 PM

ದೆಹಲಿ: ಮಹಿಳಾ ದಿನಾಚರಣೆಯು (International Women’s Day) ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕೊಡುಗೆಗಳನ್ನು ಮತ್ತು ಸಾಧನೆಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲು, ಸಂಭ್ರಮಿಸಲು ಮತ್ತು ಗೌರವಿಸಲು ಇರುವ ದಿನವಾಗಿದೆ. ಸ್ತ್ರೀಯರ ದೃಢತೆ ಮತ್ತು ಪರಿಶ್ರಮ ಮುಖ್ಯವಾಗಿದೆ ಎಂದು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ತಿಳಿಸಿದರು. ವಿಶ್ವ ಮಹಿಳಾ ದಿನದ ಅಂಗವಾಗಿ ಅವರು ಶುಭಹಾರೈಸಿದರು.

ಬಜೆಟ್ ಅಧಿವೇಶನದ ಎರಡನೇ ಸೆಷನ್ ಇಂದಿನಿಂದ (ಮಾರ್ಚ್ 8) ಆರಂಭವಾಗಿದೆ. ಕರ್ನಾಟಕದ ರಾಜಕೀಯ ಧುರೀಣ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ. ಅಧಿವೇಷನದಲ್ಲಿ ಮಹಿಳಾ ದಿನದ ಅಂಗವಾಗಿ ಹಲವು ಸದಸ್ಯರು ಮಾತನಾಡಿದ್ದಾರೆ.

ಬಿಜೆಪಿ ನಾಯಕಿ, ಲೋಕಸಭಾ ಸದಸ್ಯೆ ಸೋನಲ್ ಮಾನ್​ಸಿಂಗ್ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ವಿಶ್ವ ಮಹಿಳಾ ದಿನದಂತೆ (International Women‘s Day), ವಿಶ್ವ ಪುರುಷ ದಿನಾಚರಣೆಯನ್ನು ಕೂಡ (International Men‘s Day) ಆಚರಿಸಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಅಂಕಿ ಅಂಶಗಳು ತೋರಿಸುವಂತೆ ಶೇ. 6ಕ್ಕಿಂತ ಹೆಚ್ಚು ಮಹಿಳೆಯರಿಗೆ ನಾಯಕತ್ವ ಲಭಿಸಿಲ್ಲ. ನಾವು ಈ ಬಗ್ಗೆ ಯೋಚಿಸಬೇಕು. ರಾಜ್ಯಸಭೆ ಮತ್ತು ಲೋಕಸಭೆಯ ಶೇ. 33 ಮಹಿಳಾ ಮೀಸಲಾತಿಯನ್ನು ಬಳಸಿಕೊಳ್ಳುವ ಮೂಲಕ ಈ ಬದಲಾವಣೆಗೆ ನಾಂದಿ ಹಾಡಬೇಕು ಎಂದು ಎನ್​ಸಿಪಿ ಸದಸ್ಯೆ ಡಾ. ಫೌಜಿಯಾ ಖಾನ್ ಹೇಳಿದ್ದಾರೆ. 24 ವರ್ಷಗಳ ಹಿಂದೆ ನಾವು ಸಂಸತ್ತಿನಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿಗಾಗಿ ಬೇಡಿಕೆ ಇಟ್ಟೆವು. ಇಂದು 24 ವರ್ಷಗಳ ಬಳಿಕ ಈ ಮೀಸಲಾತಿ ಪ್ರಮಾಣವನ್ನು ಶೇ. 50ಕ್ಕೆ ಏರಿಕೆ ಮಾಡಬೇಕು ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ.

ರೈತ ಚಳುವಳಿಯಲ್ಲಿ ಮಹಿಳಾ ಪ್ರಾಬಲ್ಯ ಕೇಂದ್ರದ ನೂತನ ಕೃಷಿ ಕಾಯ್ದೆ ತಿದ್ದುಪಡಿಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು ನೂರು ದಿನಗಳ ಗಡಿ ದಾಟಿದೆ. ಮಹಿಳಾ ದಿನವಾದ ಇಂದು ರೈತ ಚಳುವಳಿಯಲ್ಲಿ ರೈತ ಮಹಿಳೆಯರು ಕೂಡ ಪಾಲ್ಗೊಂಡಿದ್ದಾರೆ. ಪಂಜಾಬ್​ನ ರೈತ ಮಹಿಳೆಯರು ದೆಹಲಿ ಹರ್ಯಾಣ ಗಡಿ ಪ್ರದೇಶವಾದ ಟಿಕ್ರಿಗೆ ತಲುಪಿದ್ದಾರೆ. ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ವಿವಿಧೆಡೆ ಮಹಿಳಾ ದಿನಾಚರಣೆ ವಿಶ್ವ ಮಹಿಳಾ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಜಕೀಯ ನಾಯಕರು, ಸಿನಿಮಾ ಸೆಲೆಬ್ರಿಟಿಗಳು ಮಹಿಳಾ ದಿನದ ಶುಭಾಶಯ ಹೇಳಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳಾ ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭೋಪಾಲ್​ನ ನೆಹರೂ ನಗರದಲ್ಲಿ ಮಾತನಾಡಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಕಿರೆಣ್ ರಿಜಿಜು ಮಹಿಳಾ ದಿನದ ಅಂಗವಾಗಿ ದೆಹಲಿಯಲ್ಲಿ ವಾಕಥಾನ್​ಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವ ಮಹಿಳಾ ದಿನಾಚರಣೆ: ಟ್ವಿಟರ್​ನಲ್ಲಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ 

ಮಹಿಳಾ ದಿನಾಚರಣೆ 2021: ಬೆಳಕು ಹರಿಯದ ಮುಂಜಾನೆಯಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ಆಸರೆಯಾದ ಆಟೋ ಚಾಲಕಿ

Published On - 10:55 am, Mon, 8 March 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ