International Flights: ಭಾರತದಲ್ಲಿ ಆ. 31ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ

ಕೋವಿಡ್ ಹಿನ್ನೆಲೆಯಲ್ಲಿ ಭಾರತದಲ್ಲಿ ಜುಲೈ 31ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಆ. 31ರವರೆಗೂ ವಿಸ್ತರಿಸಲಾಗಿದೆ.

International Flights: ಭಾರತದಲ್ಲಿ ಆ. 31ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 30, 2021 | 4:20 PM

ನವದೆಹಲಿ: ಜಗತ್ತಿನ ಬಹುತೇಕ ಕಡೆ ಇನ್ನೂ ಕೊರೋನಾ ಅಟ್ಟಹಾಸ ಕಡಿಮೆಯಾಗಿಲ್ಲ. ಭಾರತದಲ್ಲೂ ಕೋವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್​ಗಳ ಹಾವಳಿಯೂ ಶುರುವಾಗಿದೆ. ಹೀಗಾಗಿ, 3ನೇ ಅಲೆಯ ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಸಲುವಾಗಿ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ಆ.31ರವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜುಲೈ 31ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧವನ್ನು ಆ. 31ರವರೆಗೂ ವಿಸ್ತರಿಸಿರುವುದಾಗಿ ಏವಿಯೇಷನ್ ರೆಗ್ಯುಲೇಟರ್ ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಘೋಷಿಸಿದೆ.

ಇಂದು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಇದು ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. ಡಿಜಿಸಿಎಯಿಂದ ಅನುಮತಿ ಪಡೆದಿರುವ ಕಾರ್ಗೋ ವಿಮಾನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ತಿಳಿಸಲಾಗಿದೆ. ಕಳೆದ ವರ್ಷದಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿಷೇಧ ವಿಧಿಸಲಾಗಿದೆ. 2020ರ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

2020ರ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನಕ್ಕೆ ಅನುಮತಿ ನೀಡಲಾಗಿತ್ತು. ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ಮಾಡಿಕೊಂಡಿದೆ.

ಈ ದೇಶಗಳ ಪೈಕಿ ಎರಡೂ ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು. ಇದಲ್ಲದೆ, ಡೊಮೆಸ್ಟಿಕ್ ಅಥವಾ ದೇಶೀಯ ವಿಮಾನಗಳಲ್ಲೂ ಹಲವು ರಾಜ್ಯಗಳು ಆರ್​ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಇರುವವರಿಗೆ ಮಾತ್ರ ವಿಮಾನ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ.

ಇದನ್ನೂ ಓದಿ: ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್

Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ

(International Passengers Flights Suspension Extended till August 31 in India DGCA announces)

Published On - 4:19 pm, Fri, 30 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್