ಪ್ರಧಾನಿ ಮೋದಿ ನೇತೃತ್ವದಲ್ಲಿ ಜೂನ್ 21ರಂದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ: ಇಲ್ಲಿದೆ ಕಾರ್ಯಕ್ರಮದ ವೇಳಾಪಟ್ಟಿ

ಈ ವರ್ಷ, ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20-24 ರ ನಡುವೆ ಅಮೆರಿಕಗೆ ತಮ್ಮ ಭೇಟಿಯ ಸಂದರ್ಭದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ ಸಮಾರಂಭವನ್ನು ಆಯೋಜಿಸಲಿದ್ದಾರೆ

ಪ್ರಧಾನಿ ಮೋದಿ ನೇತೃತ್ವದಲ್ಲಿ ಜೂನ್ 21ರಂದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ: ಇಲ್ಲಿದೆ ಕಾರ್ಯಕ್ರಮದ ವೇಳಾಪಟ್ಟಿ
ಯೋಗಾಸನ ಮಾಡುತ್ತಿರುವ ಮೋದಿ (ಸಂಗ್ರಹ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
|

Updated on:Jun 20, 2023 | 1:07 PM

ಒಂಬತ್ತನೇ ವಾರ್ಷಿಕ ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ವಿಶ್ವಸಂಸ್ಥೆಯಲ್ಲಿ ನಡೆಯಲಿದೆ. 2015 ರಿಂದ ಜೂನ್ 21 ರಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ, ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20-24 ರ ನಡುವೆ ಅಮೆರಿಕಗೆ ತಮ್ಮ ಭೇಟಿಯ ಸಂದರ್ಭದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ ಸಮಾರಂಭವನ್ನು ಆಯೋಜಿಸಲಿದ್ದಾರೆ. ಯುಎನ್‌ಗೆ ಭಾರತದ ಆಯೋಗ ಪ್ರಕಾರ, ಈ ವರ್ಷ ಯೋಗ ದಿನದ ಸಮಯವು ಜೂನ್ 21 ರ ಬುಧವಾರದಂದು ಬೆಳಗ್ಗೆ 8 ಗಂಟೆಯಿಂದ-9 ಗಂಟೆಗೆ ಆಗಿರುತ್ತದೆ.ಅಂದರೆ ಭಾರತದಲ್ಲಿ  ಸಂಜೆ ಸಂಜೆ 5:30 ರಿಂದ 6:30 ಆಗಿರುತ್ತದೆ.

ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮವನ್ನು ವಿದೇಶದಲ್ಲಿ ಆಯೋಜಿಸಲಾಗುತ್ತಿದ್ದು, ಈ ಹಿಂದೆ ಪ್ರಧಾನಿಯವರು ದೆಹಲಿ, ಚಂಡೀಗಢ, ಲಕ್ನೋ, ಡೆಹ್ರಾಡೂನ್, ರಾಂಚಿ ಮತ್ತು ಮೈಸೂರು ನಗರದಲ್ಲಿ ಸಮಾರಂಭವನ್ನು ಆಯೋಜಿಸಿದ್ದರು.

ಯೋಗ ದಿನದ 2023 ರ ಥೀಮ್: ಯೋಗಕ್ಕಾಗಿ ವಸುಧೈವ ಕುಟುಂಬಕಮ್ (ಅಂದರೆ: ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ)

ಅಂತರಾಷ್ಟ್ರೀಯ ಯೋಗ ದಿನದ ಇತಿಹಾಸ

ಯೋಗದ ಸಮಗ್ರ ಅಭ್ಯಾಸದ ಜಾಗೃತಿಯನ್ನು ಹರಡಲು ಜಾಗತಿಕವಾಗಿ ಗುರುತಿಸಲ್ಪಟ್ಟ ದಿನದ ಕಲ್ಪನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ವಿಶ್ವ ಸಂಸ್ಥೆಯ ಜನರಲ್ ಅಸೆಂಬ್ಲಿಯ (UNGA) 69 ನೇ ಅಧಿವೇಶನದಲ್ಲಿ ಮಂಡಿಸಿದರು. ಡಿಸೆಂಬರ್ 11, 2014 ರಂದು, ಎಲ್ಲಾ 193 ಯುಎನ್ ದೇಶಗಳು ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಯೋಗದ ಮಹತ್ವ ಮತ್ತು ಮಾನ್ಯತೆ ಮತ್ತು ಯೋಗದ ಮಹತ್ವವನ್ನು ಸರ್ವಾನುಮತದಿಂದ ಒಪ್ಪಿಕೊಂಡ ನಂತರ UNGA ‘ವಿಶ್ವ ಯೋಗ ದಿನ’ವನ್ನು ಸ್ಥಾಪಿಸಿತು. ಅಂತರರಾಷ್ಟ್ರೀಯ ಯೋಗ ದಿನ ಅಥವಾ ಯೋಗ ದಿನ ಎಂದು ಕರೆಯಲ್ಪಡುವ ವಿಶ್ವ ಯೋಗ ದಿನವನ್ನು ಈಗ ಪ್ರತಿ ವರ್ಷ ಜೂನ್ 21 ರಂದು ಆಚರಿಸಲಾಗುತ್ತದೆ.

ಇದುವರೆಗಿನ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ ಹೀಗಿತ್ತು

2015: ಸಾಮರಸ್ಯ ಮತ್ತು ಶಾಂತಿಗಾಗಿ ಯೋಗ

2016: ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗಾಗಿ ಯೋಗ

2017: ಆರೋಗ್ಯಕ್ಕಾಗಿ ಯೋಗ

2018: ಶಾಂತಿಗಾಗಿ ಯೋಗ

2019: ಹೃದಯಕ್ಕಾಗಿ ಯೋಗ

2020: ಮನೆಯಲ್ಲಿ ಯೋಗ ಮತ್ತು ಕುಟುಂಬದೊಂದಿಗೆ ಯೋಗ

2021: ಯೋಗಕ್ಷೇಮಕ್ಕಾಗಿ ಯೋಗ

2022: ‘ಮಾನವೀಯತೆಗಾಗಿ ಯೋಗ’

ಇದನ್ನೂ ಓದಿ: International Yoga Day 2023: ಯೋಗಾಸನ ಮಾಡುವ ಮೊದಲು ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಯುಎನ್‌ನಲ್ಲಿ 180 ಕ್ಕೂ ಹೆಚ್ಚು ರಾಷ್ಟ್ರಗಳ ಜನರೊಂದಿಗೆ ಯೋಗ ದಿನಾಚರಣೆ ಆಚರಿಸಲಿದ್ದು ಪ್ರಧಾನ ಮಂತ್ರಿ ಯೋಗ ದಿನಾಚರಣೆಗೆ ನೇತೃತ್ವ ವಹಿಸಲಿದ್ದಾರೆ.  ಜೂನ್ 21 ರಂದು ನ್ಯೂಯಾರ್ಕ್ ನಲ್ಲಿ ನಡೆಯುವ  ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ರಾಜತಾಂತ್ರಿಕರು, ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಸೇರಿದಂತೆ 180 ಕ್ಕೂ ಹೆಚ್ಚು ದೇಶಗಳ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 20 June 23

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ