AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಶ್ರೀನಗರದಲ್ಲಿ ಇಂದು ಮೋದಿ ನೇತೃತ್ವದಲ್ಲಿ ಯೋಗ ದಿನಾಚರಣೆ; 7,000ಕ್ಕೂ ಹೆಚ್ಚು ಜನ ಭಾಗಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಮಣಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA) ಪ್ರತಿ ವರ್ಷ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನ (IDY) ಎಂದು ಆಚರಿಸುವುದಾಗಿ ಡಿಸೆಂಬರ್ 2014ರಲ್ಲಿ ಘೋಷಣೆ ಮಾಡಿತು. ಈ ಬಾರಿ 10ನೇ ವರ್ಷದ ಯೋಗ ದಿನಾಚರಣೆಯನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಈ ಯೋಗ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ.

International Yoga Day 2024: ಶ್ರೀನಗರದಲ್ಲಿ ಇಂದು ಮೋದಿ ನೇತೃತ್ವದಲ್ಲಿ ಯೋಗ ದಿನಾಚರಣೆ; 7,000ಕ್ಕೂ ಹೆಚ್ಚು ಜನ ಭಾಗಿ
2023ರಲ್ಲಿ ನ್ಯೂಯಾರ್ಕ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on:Jun 21, 2024 | 4:19 PM

ಶ್ರೀನಗರ: ಜಾಗತಿಕವಾಗಿ ಯೋಗವನ್ನು ಪ್ರಚಾರ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. 2015ರಿಂದ ದೆಹಲಿಯ ಕರ್ತವ್ಯ ಪಥ್, ಚಂಡೀಗಢ, ಡೆಹ್ರಾಡೂನ್, ರಾಂಚಿ, ಜಬಲ್‌ಪುರ್ ಮತ್ತು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Yoga Day 2024) ಮುನ್ನಡೆಸಿದ್ದಾರೆ. ಈ ಬಾರಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ 10ನೇ ವರ್ಷದ ಯೋಗ ದಿನಾಚರಣೆಯನ್ನು ಏರ್ಪಡಿಸಲಾಗಿದೆ. ಇಂದು ಈ ಯೋಗ ದಿನಾಚರಣೆಯ ನೇತೃತ್ವವನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ.

ಕಳೆದ ವರ್ಷ ನ್ಯೂಯಾರ್ಕ್​ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಒಟ್ಟು 84 ದೇಶಗಳು ಒಂದೇ ಸ್ಥಳದಲ್ಲಿ ಯೋಗ ಸೆಷನ್‌ನಲ್ಲಿ ಭಾಗವಹಿಸಿದ್ದವು. ಕ್ರಮೇಣ ಪ್ರತಿ ವರ್ಷ ಪ್ರಪಂಚದಾದ್ಯಂತ ಭಾಗವಹಿಸುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವರ್ಷ 2023ರಲ್ಲಿ ಪ್ರಪಂಚದಾದ್ಯಂತ ಒಟ್ಟು 23.4 ಕೋಟಿ ಜನರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Rahul Gandhi: ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದ ದಡದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ವಿವಿಧ ಕ್ಷೇತ್ರಗಳ 7,000ಕ್ಕೂ ಹೆಚ್ಚು ಜನರು ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜೊತೆಯಾಗಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಇಲ್ಲಿ ಪ್ರಧಾನಿ ಭಾಗಿಯಾಗಿರುವುದು ಇಡೀ ಕಾಶ್ಮೀರ ಕಣಿವೆಗೆ ಸಂದ ಗೌರವ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪಿಟಿಐಗೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಬಂದಿರುವುದು ಇಡೀ ಕಣಿವೆಗೆ ಸಿಕ್ಕ ಗೌರವವಾಗಿದೆ. ಅವರು ಇಂದು (ಜೂನ್ 21) ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ 7,000ಕ್ಕೂ ಹೆಚ್ಚು ಜನರೊಂದಿಗೆ ದಾಲ್ ಸರೋವರದ ದಡದಲ್ಲಿ ಯೋಗ ಪ್ರದರ್ಶಿಸಲಿದ್ದಾರೆ ಎಂದು ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ: PM Modi: ಜಮ್ಮು ಕಾಶ್ಮೀರದ ಶತ್ರುಗಳಿಗೆ ಪಾಠ ಕಲಿಸಲು ಸರ್ಕಾರ ಹಿಂಜರಿಯುವುದಿಲ್ಲ; ಪ್ರಧಾನಿ ಮೋದಿ ಭರವಸೆ

ಈ ವರ್ಷದ ಯೋಗ ದಿನಾಚರಣೆಯ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’. ಪ್ರಧಾನಿ ನರೇಂದ್ರ ಮೋದಿ ಈ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಬುಧವಾರ ತಿಳಿಸಿದೆ.

ಕಳೆದ 10 ವರ್ಷಗಳಲ್ಲಿ ಯೋಗವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಯನ್ನು ಪಡೆದಿದೆ. ಇದುವರೆಗೆ 23.5 ಕೋಟಿಗೂ ಹೆಚ್ಚು ಜನರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ 23 ಲಕ್ಷ ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಒತ್ತಡ ಮುಕ್ತ ಜೀವನಕ್ಕಾಗಿ ಜನರು ಯೋಗದತ್ತ ಒಲವು ತೋರುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 am, Fri, 21 June 24

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!