AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಯೋಗ ಕೇವಲ ಜ್ಞಾನವಲ್ಲ, ವಿಜ್ಞಾನವೂ ಹೌದು: ಮೋದಿ

ಇಂದು ಅಂತಾರಾಷ್ಟ್ರೀಯ ಯೋಗ ದಿನ, ಪ್ರಧಾನಿ ನರೇಂದ್ರ ಮೋದಿ ಶ್ರೀನಗರದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

International Yoga Day 2024: ಯೋಗ ಕೇವಲ ಜ್ಞಾನವಲ್ಲ, ವಿಜ್ಞಾನವೂ ಹೌದು: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 21, 2024 | 8:26 AM

Share

ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ(International Yoga Day)ಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಮಾತನಾಡಿದರು, ಯೋಗದ ಪ್ರಯಾಣ ಮುಂದುವರೆಯುತ್ತಿದೆ, ಇಂದು ಜಗತ್ತಿನಲ್ಲಿ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ.

ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ. ಸೌದಿ ಅರೇಬಿಯಾ ಇದನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇರಿಸಿದೆ. ಜರ್ಮನಿಯಲ್ಲಿ 1.5 ಕೋಟಿ ಜನರು ಯೋಗಾಭ್ಯಾಸವನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

ಮತ್ತಷ್ಟು ಓದಿ: PM Modi: ಜಮ್ಮು ಕಾಶ್ಮೀರದ ಶತ್ರುಗಳಿಗೆ ಪಾಠ ಕಲಿಸಲು ಸರ್ಕಾರ ಹಿಂಜರಿಯುವುದಿಲ್ಲ; ಪ್ರಧಾನಿ ಮೋದಿ ಭರವಸೆ

ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

10 ವರ್ಷಗಳ ಹಿಂದೆ 2014ರಲ್ಲಿ ವಿಶ್ವಸಂಸ್ಥೆ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು. ಅಂದಿನಿಂದ ಇದನ್ನು ವಿವಿಧ ವಿಷಯಗಳಲ್ಲಿ ಆಚರಿಸಲಾಗುತ್ತಿದೆ. 2024 ರ ಯೋಗ ದಿನದ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’.

ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿದ್ದಾರೆ. 2013 ರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಇದು ಅವರ 25 ನೇ ಭೇಟಿಯಾಗಿದೆ. 2019 ರಲ್ಲಿ ಆರ್ಟಿಕಲ್ 370 ರದ್ದಾದ ನಂತರ ಇದು 7 ನೇ ಭೇಟಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿಯವರು ಇಲ್ಲಿಗೆ ಭೇಟಿ ನೀಡುವುದು ಮತ್ತು ಯೋಗ ದಿನದಂತಹ ಅಂತರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸಕಾರಾತ್ಮಕ ಸಂದೇಶ ಎಂದು ಪರಿಗಣಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ