AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಯೋಗದ ಮಹತ್ವ ತಿಳಿಸಿಕೊಟ್ಟ ಸಚಿವ ಭೂಪೇಂದ್ರ ಯಾದವ್

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದ್ದು, ಈ ಕಾರ್ಯಕ್ರಮದ ಅಂಗವಾಗಿ ಸಚಿವ ಭೂಪೇಂದ್ರ ಸಿಂಗ್ ಯಾದವ್(Bhupendra Singh Yadav) ಅವರು ಫರಿದಾಬಾದ್‌ನ ಇಎಸ್‌ಐಸಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಯೋಗ ದಿನದಲ್ಲಿ ಪಾಲ್ಗೊಂಡಿದ್ದರು.

International Yoga Day: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಯೋಗದ ಮಹತ್ವ ತಿಳಿಸಿಕೊಟ್ಟ ಸಚಿವ ಭೂಪೇಂದ್ರ ಯಾದವ್
ಭೂಪೇಂದ್ರ ಯಾದವ್
ನಯನಾ ರಾಜೀವ್
|

Updated on: Jun 21, 2023 | 12:13 PM

Share

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದ್ದು, ಈ ಕಾರ್ಯಕ್ರಮದ ಅಂಗವಾಗಿ ಸಚಿವ ಭೂಪೇಂದ್ರ ಸಿಂಗ್ ಯಾದವ್(Bhupendra Singh Yadav) ಅವರು ಫರಿದಾಬಾದ್‌ನ ಇಎಸ್‌ಐಸಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಯೋಗ ದಿನದಲ್ಲಿ ಪಾಲ್ಗೊಂಡಿದ್ದರು. ಯೋಗದ ವಿಭಾಗಗಳೆಂದರೆ ಶಾಸನ ಮತ್ತು ಅನುಶಾಸನ. ಶಾಸನ ಎಂದರೆ ಯಾರಾದರೂ ನಿಮ್ಮ ಮೇಲೆ ಹೇರುವ ನಿಯಮಗಳು. ಅನುಶಾಸನವು ನಿಮ್ಮ ಮೇಲೆ ನೀವು ವಿಧಿಸುವ ನಿಯಮವಾಗಿದೆ. ಈ ಸಂದರ್ಭದಲ್ಲಿ ಭೂಪೇಂದ್ರ ಯಾದವ್ ಮಾತನಾಡಿ, ಯೋಗವನ್ನು ಮಾನಸಿಕ ಅಥವಾ ಆಂತರಿಕ ಶಿಸ್ತಿಗಾಗಿ ಮಾಡುತ್ತೇವೆ ಎಂದರು.

ಯೋಗ ಹಾಗೂ ಶಿಸ್ತು ಯಮ ಎಂಬುದು ಸಮಾಜದೊಂದಿಗೆ ಶಿಸ್ತನ್ನು ಕಲಿಸಿಕೊಡುತ್ತದೆ, ನಿಯಮ ಎಂಬುದು ನಿಮ್ಮೊಳಗೆ ಶಿಸ್ತನ್ನು ಕಲಿಸುತ್ತದೆ. ಆಸನವು ಶರೀರಕ್ಕೆ ಶಿಸ್ತನ್ನು ಕಲಿಸುತ್ತದೆ, ಪ್ರಾಣಾಯಾಮವು ಶ್ವಾಸದೊಂದಿಗೆ ಶಿಸ್ತನ್ನು ಕಲಿಸುತ್ತದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜೂನ್ 21 ರಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯನ್ನು ಪ್ರಧಾನ ಮಂತ್ರಿ ಮೋದಿ ಮುನ್ನಡೆಸಲಿದ್ದಾರೆ.

ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಅಂತಾರಾಷ್ಟ್ರೀಯ ಯೋಗ ದಿನ ಹೊಂದಿದೆ.

ಮತ್ತಷ್ಟು ಓದಿ: Photos: ಅಮೆರಿಕದಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಜೂನ್ 23 ರಂದು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ವಿಶೇಷ ಆಹ್ವಾನಿತ ಅನಿವಾಸಿ ಭಾರತೀಯರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್