ಜಲಾವೃತಗೊಂಡ ಕೋಲ್ಕತ್ತಾ ವಿಮಾನ ನಿಲ್ದಾಣ, ಪಶ್ಚಿಮ ಬಂಗಾಳಕ್ಕೆ ಪ್ರವಾಹದ ಭೀತಿ
Netaji Subhas Chandra Bose International Airport: ಭಾರಿ ಮಳೆಗೆ ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ (ಎನ್‌ಎಸ್‌ಸಿಬಿಐ) ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಜಲಾವೃತಗೊಂಡಿದೆ, ಪಶ್ಚಿಮ ಬಂಗಾಳಕ್ಕೆ ಇದೀಗ ಪ್ರವಾಹದ ಭೀತಿ ಉಂಟಾಗಿದೆ. ವಿಮಾನ ನಿಲ್ದಾಣದ ರನ್ವೇಗಳಲ್ಲಿ ನೀರು ತುಂಬಿಕೊಂಡಿದ್ದು, ವಿಮಾನಗಳಲ್ಲಿಯೇ ಲ್ಯಾಂಡ್ ಆಗಿದೆ.
ಕೋಲ್ಕತ್ತಾದಲ್ಲಿ ಭಾರೀ ಮಳೆಗೆ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ (ಎನ್‌ಎಸ್‌ಸಿಬಿಐ) ವಿಮಾನ ನಿಲ್ದಾಣದಲ್ಲಿ ನೀರು ನಿಂತು ಪ್ರವಾಹದಂತಾಗಿದೆ. ಸಂಪೂರ್ಣ ವಿಮಾನ ನಿಲ್ದಾಣ ನೀರಿನಿಂದ ತುಂಬಿದೆ. ಬಂಗಾಳದ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಇದರ ಪರಿಣಾಮ ವಿಮಾನ ನಿಲ್ದಾಣಕ್ಕೂ ಬಂದಿದೆ. ರನ್‌ವೇ ಮತ್ತು ಟ್ಯಾಕ್ಸಿವೇಗಳಲ್ಲಿ ನೀರು ನಿಂತಿರವುದನ್ನು ಕಾಣಬಹುದು. ವಿಮಾನ ನೀರಿನ ಮೇಲೆ ನಿಂತಿದೆ.
ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್‌ಪುರ ಸೇರಿದಂತೆ ಕೋಲ್ಕತ್ತಾ ಮತ್ತು ಅದರ ನೆರೆಯ ಪ್ರದೇಶಗಳು ನಿರಂತರ ಮಳೆಯಿಂದ ಮುಳುಗಿ ಹೋಗಿದೆ. ಹವಾಮಾನ ಅಧಿಕಾರಿಗಳ ಪ್ರಕಾರ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಇನ್ನು ಈ ಪ್ರವಾಹದ ಪರಿಣಾಮ ಬಿಹಾರ ಹಾಗೂ ಉತ್ತರಪ್ರದೇಶಕ್ಕೂ ತಲುಪಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಲ್ಲಿ ಮಾನ್ಸೂನ್ ಕಾರಣದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಿದ್ದಾರೆ.
ಕೋಲ್ಕತ್ತಾದ ಹಲವಾರು ಭಾಗಗಳಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ. ಹವಾಮಾನ ಕಚೇರಿಯ ಪ್ರಕಾರ ಪರಿಸ್ಥಿತಿ ಸದ್ಯಕ್ಕೆ ಹತೋಟಿಗೆ ತರವುದು ಕಷ್ಟ ಎಂದು ಹೇಳಿದ್ದಾರೆ. ಹೌರಾ, ಪಶ್ಚಿಮ ಬರ್ಧಮಾನ್, ಬಿರ್ಭುಮ್, ಪುರ್ಬಾ ಬರ್ಧಮಾನ್, ಹೂಗ್ಲಿ, ನಾಡಿಯಾ ಮತ್ತು ಉತ್ತರ ಮತ್ತು ದಕ್ಷಿಣ 24 ಪರಗಣಗಳು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಮುಂದಿನ 12 ಗಂಟೆಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Kolkata airport runway flooded due to heavy rainfall.#Kolkata #flood #HeavyRain #WestBengal pic.twitter.com/Wpz8er4yRg
— Priyathosh Agnihamsa (@priyathosh6447) August 3, 2024
ಮಧ್ಯ ಮತ್ತು ದಕ್ಷಿಣ ಕೋಲ್ಕತ್ತಾದ ಕೆಲವು ಭಾಗಗಳಲ್ಲಿ ಕೂಡ ಹೆಚ್ಚಿನ ಮಳೆಯಾಗಿದ್ದು. ಶುಕ್ರವಾರ ಮಧ್ಯಾಹ್ನದಿಂದ ನಗರದ ಕೆಲವು ಪ್ರದೇಶಗಳಲ್ಲಿ 7 ಸೆಂ.ಮೀ.ವರೆಗೆ ಮಳೆಯಾಗಿದೆ. ಭಾರೀ ಮಳೆಯ ನಡುವೆಯೂ ಶುಕ್ರವಾರ ಕೋಲ್ಕತ್ತಾದಲ್ಲಿ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಕೋಲ್ಕತ್ತಾ ಸರ್ಕಾರ ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆಯನ್ನು ಕೂಡ ನೀಡಿದೆ.
ಇದನ್ನೂ ಓದಿ: ಭದ್ರತಾ ಸಮಸ್ಯೆ; ಪಂಜಾಬ್ ಸಿಎಂ ಭಗವಂತ್ ಮಾನ್ ಪ್ಯಾರಿಸ್ ಭೇಟಿಗೆ ಅನುಮತಿ ನಿರಾಕರಿಸಿದ ವಿದೇಶಾಂಗ ಸಚಿವಾಲಯ
ಪಶ್ಚಿಮ ಬಂಗಾಳದ ಗಂಗಾನದಿ ಜಿಲ್ಲೆಗಳಲ್ಲಿ 11 ಸೆಂ.ಮೀ ವರೆಗೆ ಭಾರೀ ಮಳೆಯಾಗಲಿದೆ. ಪುರುಲಿಯಾ, ಮುರ್ಷಿದಾಬಾದ್, ಮಾಲ್ಡಾ, ಕೂಚ್‌ಬೆಹಾರ್, ಜಲ್ಪೈಗುರಿ, ಡಾರ್ಜಿಲಿಂಗ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗಾಗಿ ಎಚ್ಚರಿಕೆ ವಹಿಸುವಂತೆ ಹೇಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ