ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ಈ ರೀತಿ ಹೆಸರು ಬದಲಿಸುವುದರಿಂದ ವಾಸ್ತವತೆ ಬದಲಾಗುವುದಿಲ್ಲ ಎಂದ ಭಾರತ

Arunachal Pradesh: ನಾವು ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿರುವುದು ಇದೇ ಮೊದಲಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ. ಅರುಣಾಚಲ ಪ್ರದೇಶವು ಯಾವತ್ತಿಗೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಭಾರತ ಪ್ರತಿಕ್ರಿಯಿಸಿದೆ

ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ಈ ರೀತಿ ಹೆಸರು ಬದಲಿಸುವುದರಿಂದ ವಾಸ್ತವತೆ ಬದಲಾಗುವುದಿಲ್ಲ ಎಂದ ಭಾರತ
ಅರಿಂದಮ್ ಬಾಗ್ಚಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 05, 2023 | 7:26 PM

ಗುವಾಹಟಿ: ಚೀನಾ (China) , ಅರುಣಾಚಲ ಪ್ರದೇಶದ (Arunachal Pradesh)11 ಸ್ಥಳಗಳ ಮರುನಾಮಕರಣ ಮಾಡಿರುವುದನ್ನು ತಿರಸ್ಕರಿಸಿದ ಭಾರತ, ಅರುಣಾಚಲ ಯಾವತ್ತಿಗೂ ಭಾರತದ ಅವಿಭಾಜ್ಯ ಅಂಗ ಎಂದು ಹೇಳಿದೆ.ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಪುನಃ ಒತ್ತಿಹೇಳುವ ಪ್ರಯತ್ನದ ಭಾಗವಾಗಿ ಚೀನಾ ನಿನ್ನೆ 11 ಸ್ಥಳಗಳಿಗೆ ಹೊಸ ಹೆಸರುಗಳನ್ನು ಬಿಡುಗಡೆ ಮಾಡಿದೆ. ಚೀನಾವು ಮೂರನೇ ಬಾರಿ ಅರುಣಾಚಲ ಪ್ರದೇಶದ ಸ್ಥಳಗಳಿಗೆ ‘ಮರುನಾಮಕರಣ’ ಮಾಡಿದ್ದು, ಅದನ್ನು ಝಂಗ್ನಾನ್ (Zangnan), ಟಿಬೆಟ್‌ನ ದಕ್ಷಿಣ ಭಾಗ ಎಂದು ಕರೆದಿದೆ. ಚೀನಾ ಬಿಡುಗಡೆ ಮಾಡಿರುವ ಹೆಸರುಗಳ ಪಟ್ಟಿಯಲ್ಲಿ ಐದು ಪರ್ವತ ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಅಂತಹ ಮೊದಲ ಎರಡು ಪಟ್ಟಿಗಳನ್ನು 2017 ಮತ್ತು 2021 ರಲ್ಲಿ ಬಿಡುಗಡೆ ಮಾಡಿತ್ತು. ಚೀನಾ 2017 ರಲ್ಲಿ ಆರು ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,  2021 ರಲ್ಲಿ ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ‘ಮರುನಾಮಕರಣ’ ಮಾಡಿದೆ.

ಈ ಬಗ್ಗೆ ಭಾರತ ಪ್ರತಿಕ್ರಿಯಿಸಿದ್ದು, ಆವಿಷ್ಕಾರ ಮಾಡುವ ಹೆಸರಿನಿಂದಾಗಿ ನಿಜಸ್ಥಿತಿ ಬದಲಾಗುವುದಿಲ್ಲ ಎಂದು ಹೇಳಿದೆ. ನಾವು ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿರುವುದು ಇದೇ ಮೊದಲಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ. ಅರುಣಾಚಲ ಪ್ರದೇಶವು ಯಾವತ್ತಿಗೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಪ್ರಯತ್ನಗಳು ಈ ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಚೀನಾದಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಮುಖವಾಣಿ ಪೀಪಲ್ಸ್ ಡೈಲಿ ಗುಂಪಿನ ಭಾಗವಾಗಿರುವ ದಿ ಗ್ಲೋಬಲ್ ಟೈಮ್ಸ್ ಪ್ರಕಾರ, ಚೀನಾದ ಅಧಿಕಾರಿಗಳು ಈ ಕ್ರಮವನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆಯುತ್ತಿದ್ದಾರೆ.

2017ರಲ್ಲಿ ದಲೈ ಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮೊದಲ ಹೆಸರುಗಳನ್ನು ಚೀನಾ ಘೋಷಿಸಿತು. ಟಿಬೆಟಿಯನ್ ಆಧ್ಯಾತ್ಮಿಕ ನಾಯಕನ ಭೇಟಿಯನ್ನು ಚೀನಾ ಕಟುವಾಗಿ ಟೀಕಿಸಿದೆ. 1950 ರಲ್ಲಿ ಚೀನಾ ಹಿಮಾಲಯ ಪ್ರದೇಶವನ್ನು ಮಿಲಿಟರಿ ನಿಯಂತ್ರಣಕ್ಕೆ ತೆಗೆದುಕೊಂಡ ನಂತರ ದಲೈ ಲಾಮಾ ಟಿಬೆಟ್‌ನಿಂದ ಅರುಣಾಚಲ ಪ್ರದೇಶದ ತವಾಂಗ್ ಮೂಲಕ ಓಡಿಹೋಗಿ 1959 ರಲ್ಲಿ ಭಾರತದಲ್ಲಿ ಆಶ್ರಯ ಪಡೆದರು.

ಇದನ್ನೂ ಓದಿ:Arunachal Pradesh: ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ

ಪೂರ್ವ ಲಡಾಖ್‌ನಲ್ಲಿ ತಿಂಗಳುಗಳ ಕಾಲ ಗಡಿ ಬಿಕ್ಕಟ್ಟಿನ ನಡುವೆ ನಡೆದ ಮುಖಾಮುಖಿಯಲ್ಲಿ, ಕಳೆದ ಡಿಸೆಂಬರ್‌ನಲ್ಲಿ ರಾಜ್ಯದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಪಡೆಗಳು ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಘರ್ಷಣೆ ನಡೆಸಿದ್ದವು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗ ಚೀನಾ ವಾಸ್ತವಿಕ ನಿಯಂತ್ರಣ ರೇಖೆಜೊತೆಗೆ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 4 April 23

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್