ದೆಹಲಿ: ಫೆಬ್ರವರಿಯಲ್ಲಿ ದುಬೈನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದಾಗ ಏರ್ ಇಂಡಿಯಾ (Air India) ಪೈಲಟ್ ತನ್ನ ಸ್ನೇಹಿತರೊಬ್ಬರಿಗೆ ಕಾಕ್‌ಪಿಟ್‌ಗೆ ಪ್ರವೇಶಿಸಲು ಮತ್ತು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿ ಅವಕಾಶ ನೀಡಿದ ಘಟನೆಯ ಕುರಿತು ಭಾರತದ ವಾಯುಯಾನ ನಿಯಂತ್ರಕರು ವಿವರವಾದ ತನಿಖೆಗೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಶುಕ್ರವಾರ ವರದಿ ಮಾಡಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ ಮತ್ತು ಇದಕ್ಕೆ ಸಂಬಂಧಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ವಿಮಾನ ನಿಯಮದ ಪ್ರಕಾರ ವಾಯುಯಾನ ನಿಯಂತ್ರಕ ಡಿಜಿಸಿಎ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಹಿರಿಯ ಡಿಜಿಸಿಎ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.
ಫೆಬ್ರವರಿ 27ರಂದು ದುಬೈನಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪೈಲಟ್ ಒಬ್ಬರ ಸ್ನೇಹಿತನನ್ನು ಕಾಕ್‌ಪಿಟ್ ಒಳಗೆ ಬರಲು ಅವಕಾಶ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೈಲಟ್ ಅವಕಾಶ ನೀಡಿ ವ್ಯಕ್ತಿ ವಿಮಾನ ಲ್ಯಾಂಡಿಂಗ್ ಆಗುವರೆಗೆ ಅಲ್ಲಿ ಇದ್ದರು ಎಂದು ಹೇಳಲಾಗಿದೆ. ಅಧಿಕೃತ ಮಾಹಿತಿಗಳ ಪ್ರಕಾರ ಸುಮಾರು ಮೂರು ಗಂಟೆಗಳ ಕಾಲ ಕಾಕ್‌ಪಿಟ್‌ನಲ್ಲಿ ಸಮಯ ಕಳೆದಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:Air India Flight : ಏರ್ ಇಂಡಿಯಾ ಪೈಲಟ್, ಕ್ಯಾಬಿನ್ ಸಿಬ್ಬಂದಿಗಳ ವೇತನ ಹೆಚ್ಚಳ
ಇದು ಭದ್ರತೆಯ ಉಲ್ಲಂಘನೆ ಮಾತ್ರವಲ್ಲ, ವಿಮಾನ ಮತ್ತು ಅದರ ಪ್ರಯಾಣಿಕರ ಸುರಕ್ಷತೆ ಪ್ರಶ್ನೆಯು ಕೂಡ ಹೌದು ಎಂದು ಅಧಿಕಾರಿ ಹೇಳಿದ್ದಾರೆ. ತನಿಖೆಯ ಆಧಾರದ ಮೇಲೆ ಪೈಲಟ್ನ ಪರವಾನಗಿಯನ್ನು ಅಮಾನತುಗೊಳಿಸುವುದು ಅಥವಾ ರದ್ದುಗೊಳಿಸುವುದು ಸೇರಿದಂತೆ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆ ಕುರಿತು ಏರ್ ಇಂಡಿಯಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏರ್ ಇಂಡಿಯಾ ವಿಮಾನದಲ್ಲಿ ಇತ್ತೀಚೆಗೆ, ಅನೇಕ ಇಂತಹ ಘಟನೆಗಳು ನಡೆದಿದೆ. ಏಪ್ರಿಲ್ 18 ರಂದು, ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ವಿಂಡ್ ಶೀಲ್ಡ್ ಬಿರುಕು ಬಿಟ್ಟಿದೆ ಎಂದು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದ್ಯತೆಯ ಮೇರೆಗೆ ಲ್ಯಾಂಡಿಂಗ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದಲ್ಲಿ ಇಂತಹ ಅನೇಕ ಘಟನೆಗಳ ಬಗ್ಗೆ ವರದಿಯಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:59 pm, Fri, 21 April 23