AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Oath Ceremony: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ

ಶನಿವಾರದಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಈ ಪ್ರಮಾಣ ವಚನ ಸಮಾರಂಭದಲ್ಲಿ ಅನೇಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಇದರಲ್ಲೂ ವಿಶ್ವದ ಬೇರೆ ಬೇರೆ ನಾಯಕರಿಗೆ ಆಹ್ವಾನ ನೀಡಲಾಗಿದೆ. ಯಾರಿಗೆಲ್ಲ ಆಹ್ವಾನ ನೀಡಲಾಗಿದೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

PM Modi Oath Ceremony: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2024 | 12:19 PM

Share

ದೆಹಲಿ, ಜೂ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುದ್ಧವಾರದಂದು (ಜೂ5) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದಾರೆ. ಇದರ ಜತೆಗೆ ಎನ್​​ಡಿಎ ಸಭೆಯನ್ನು ನಡೆಸಿ ಎನ್​​ಡಿಎ ನಾಯಕರ ಸರ್ವಾನುಮತದ ಮೂಲಕ ಎನ್​​ಡಿಎ ನಾಯಕನಾಗಿ ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್​​ ಕರೆ ಮೂಲಕ ತಿಳಿಸಿದ್ದಾರೆ. ಹಾಗೂ ಪ್ರಧಾನಿ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಇನ್ನು ಕಾರ್ಯಕ್ರಮಕ್ಕೂ ಮುನ್ನ ಅಂದರೆ ಜೂ. 7ಕ್ಕೆ ಭಾರತಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನು ಅವರು ದೃಢಪಡಿಸಿಲ್ಲ.

ಇದನ್ನೂ ಓದಿ:  ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಮುಂದೂಡಿಕೆ

ಬಿಜೆಪಿ ಈಗಾಗಲೇ 240 ಸ್ಥಾನಗಳನ್ನು ಪಡೆದುಕೊಂಡಿದೆ. ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಎನ್​ಡಿಎ ಮೈತ್ರಿಕೂಟ ಮ್ಯಾಜಿಕ್ ಸಂಖ್ಯೆಯನ್ನು ಆರಾಮವಾಗಿ ದಾಟಿದೆ. ಈಗಾಗಲೇ ಎನ್​​​ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ ಎನ್‌ಡಿಎ ಪಾಲುದಾರರು ಜತೆಗೆ ನೆನ್ನೆ ಪ್ರಧಾನಿ ಮೋದಿ ಸಭೆಯನ್ನು ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Thu, 6 June 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ