AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ಬೃಹತ್ ನೇಮಕಾತಿ; ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) 291 ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಮ್ಯಾನೇಜರ್, ಐಟಿ, ಕ್ರೆಡಿಟ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅರ್ಜಿ ಸಲ್ಲಿಸಬಹುದು. ಪದವಿ, ಬಿ.ಇ/ಬಿ.ಟೆಕ್, ಎಂಬಿಎ ವಿದ್ಯಾರ್ಹತೆ ಹೊಂದಿರುವವರು ಸೆಪ್ಟೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಇರಲಿದೆ. ಇದು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ.

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ಬೃಹತ್ ನೇಮಕಾತಿ; ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ
ಇಂಡಿಯನ್ ಓವರ್ಸೀಸ್ ಬ್ಯಾಂಕ್‌
ಅಕ್ಷತಾ ವರ್ಕಾಡಿ
|

Updated on: Aug 30, 2026 | 4:04 PM

Share

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಒಟ್ಟು 291 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಖಾಲಿ ಹುದ್ದೆಗಳ ವಿವರಗಳು:

ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶಾಖಾ ನಿರ್ವಹಣಾ ಮ್ಯಾನೇಜರ್ (100), ಐಟಿ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ (75), ಕ್ರೆಡಿಟ್ ಮ್ಯಾನೇಜರ್ (50) ಹಾಗೂ ಸೆಕ್ಯುರಿಟಿ ಅಸಿಸ್ಟೆಂಟ್ ಮ್ಯಾನೇಜರ್ (25) ಪ್ರಮುಖವಾಗಿವೆ. ಇವುಗಳ ಜೊತೆಗೆ ಡೇಟಾಬೇಸ್/ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ (15), ಮಾಹಿತಿ ಭದ್ರತೆ (8), ಐಎಸ್ ಆಡಿಟ್ (7), ರಿಸ್ಕ್ ಸೀನಿಯರ್ ಮ್ಯಾನೇಜರ್ (6) ಮತ್ತು ಸೈಬರ್ ಸೆಕ್ಯುರಿಟಿ ಅಡ್ಮಿನಿಸ್ಟ್ರೇಟರ್ (5) ಹುದ್ದೆಗಳನ್ನು ಕೂಡ ಭರ್ತಿ ಮಾಡಲಾಗುತ್ತಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಅಥವಾ ಎಂಬಿಎ (ಹಣಕಾಸು) ಅರ್ಹತೆಯನ್ನು ಹೊಂದಿರಬೇಕು. ಇದರೊಂದಿಗೆ ಸಂಬಂಧಿತ ಕ್ಷೇತ್ರದಲ್ಲಿ ಅಗತ್ಯ ಕೆಲಸದ ಅನುಭವ ಇರುವುದು ಕಡ್ಡಾಯ. ಅಭ್ಯರ್ಥಿಗಳ ವಯೋಮಿತಿ 25 ರಿಂದ 45 ವರ್ಷಗಳ ನಡುವೆ ಇರಬೇಕಾಗಿದ್ದು, ಸರ್ಕಾರಿ ನಿಯಮಾವಳಿ ಪ್ರಕಾರ ಅರ್ಹ ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ (General/OBC/EWS) ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 1000 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 175 ಶುಲ್ಕ ಇರಲಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ಪದ್ಧತಿ:

ಅಭ್ಯರ್ಥಿಗಳ ಆಯ್ಕೆಯನ್ನು ಸ್ಕ್ರೀನಿಂಗ್, ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ನೆರವೇರಿಸುವ ಸಂದರ್ಶನದ ಮೂಲಕ ಮಾಡಲಾಗುತ್ತದೆ. ಅಂತಿಮ ಮೆರಿಟ್ ಪಟ್ಟಿಯಲ್ಲಿ ಆನ್‌ಲೈನ್ ಪರೀಕ್ಷೆಗೆ ಶೇಕಡಾ 80 ರಷ್ಟು ಹಾಗೂ ಸಂದರ್ಶನಕ್ಕೆ ಶೇಕಡಾ 20 ರಷ್ಟು ತೂಕವನ್ನು (Weightage) ನೀಡಲಾಗುತ್ತದೆ. ಪರೀಕ್ಷೆಯಲ್ಲಿ ಪ್ರತಿಯೊಂದು ತಪ್ಪು ಉತ್ತರಕ್ಕೂ 1/4 (0.25) ರಷ್ಟು ಋಣಾತ್ಮಕ (Negative) ಅಂಕಗಳನ್ನು ಕಳೆಯಲಾಗುತ್ತದೆ.

ವೇತನ ಶ್ರೇಣಿ ಮತ್ತು ಸೌಲಭ್ಯಗಳು:

ಐಒಬಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಯ ಹಂತಕ್ಕೆ ಅನುಗುಣವಾಗಿ ರೂ. 48,480 ರಿಂದ ರೂ. 1,05,280 ರವರೆಗೆ ಆರಂಭಿಕ ಮೂಲ ವೇತನ ಲಭ್ಯವಿರುತ್ತದೆ. ಇದರ ಜೊತೆಗೆ ಬ್ಯಾಂಕಿಂಗ್ ನಿಯಮಾವಳಿಗಳ ಪ್ರಕಾರ ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರ ಭತ್ಯೆಗಳು ದೊರೆಯಲಿವೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ