AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL Recruitment 2026: ಇಂಡಿಯನ್ ಆಯಿಲ್​​ನಲ್ಲಿ ಭರ್ಜರಿ​ ಉದ್ಯೋಗಾವಕಾಶ; ಕೇಂದ್ರ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸುವರ್ಣವಕಾಶ

ಕೇಂದ್ರ ಸರ್ಕಾರದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕಟಿಸಿದೆ. ಇಂಜಿನಿಯರ್, ಲಾ, MSc, ಡಿಪ್ಲೊಮಾ ಹಿನ್ನೆಲೆಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಮಾಸಿಕ 30,000 ದಿಂದ 1.6 ಲಕ್ಷ ರೂ. ವರೆಗೆ ವೇತನ ಲಭ್ಯವಿದೆ. ಆಸಕ್ತ ಭಾರತೀಯ ನಾಗರಿಕರು ಆಗಸ್ಟ್ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಸೆಪ್ಟೆಂಬರ್ 24ರಂದು ನಡೆಯಲಿದೆ.

IOCL Recruitment 2026: ಇಂಡಿಯನ್ ಆಯಿಲ್​​ನಲ್ಲಿ ಭರ್ಜರಿ​ ಉದ್ಯೋಗಾವಕಾಶ; ಕೇಂದ್ರ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸುವರ್ಣವಕಾಶ
ಇಂಡಿಯನ್ ಆಯಿಲ್​ ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on: Aug 20, 2026 | 1:15 PM

Share

ಕೇಂದ್ರ ಸರ್ಕಾರದ ಪ್ರಮುಖ ಸಾರ್ವಜನಿಕ ರಂಗದ ಸಂಸ್ಥೆಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಜಾಹೀರಾತು ಸಂಖ್ಯೆ IOCL/CO-HR/Rectt/2026/01 ರ ಅಡಿಯಲ್ಲಿ ಅರ್ಹ ಹಾಗೂ ಆಸಕ್ತ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿವಿಧ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ.

ಇಂಜಿನಿಯರ್ಸ್ ಮತ್ತು ಆಫೀಸರ್ಸ್ (ಗ್ರೇಡ್ A):

ಗ್ರಾಜುಯೇಟ್ ಇಂಜಿನಿಯರ್ಸ್ ಹಾಗೂ ಎಂ.ಬಿ.ಎ ಪದವೀಧರರಿಗೆ ಇಂಜಿನಿಯರ್ಸ್/ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೆಮಿಕಲ್, ಮೆಕ್ಯಾನಿಕಲ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಅಂಡ್ IT, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಇನ್‌ಸ್ಟ್ರುಮೆಂಟೇಷನ್ ಮತ್ತು ಮಾರ್ಕೆಟಿಂಗ್ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಯಾವುದೇ ಪೂರ್ವಾಪರ ಉದ್ಯೋಗ ಅನುಭವದ ಅಗತ್ಯವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 ರಿಂದ 1,60,000 ರೂ. ವೇತನ ಶ್ರೇಣಿ ಸಿಗಲಿದೆ.

ಕಾನೂನು ಅಧಿಕಾರಿಗಳು – ಲಾ ಆಫೀಸರ್ಸ್ (ಗ್ರೇಡ್ A):

ಕಾನೂನು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಲಾ ಆಫೀಸರ್ಸ್ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲ್.ಎಲ್.ಬಿ (LLB) ಪದವಿ ಪಡೆದ ನಂತರ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ಹುದ್ದೆಗೂ ಸಹ ಆರಂಭಿಕ ವೇತನ ಶ್ರೇಣಿಯು ಮಾಸಿಕ 50,000 ರಿಂದ 1,60,000 ರೂ. ಆಗಿರುತ್ತದೆ.

ಅಸಿಸ್ಟೆಂಟ್ ಕ್ವಾಲಿಟಿ ಕಂಟ್ರೋಲ್ ಆಫೀಸರ್ಸ್ (ಗ್ರೇಡ್ A0):

ರಸಾಯನಶಾಸ್ತ್ರ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಅಸಿಸ್ಟೆಂಟ್ ಕ್ವಾಲಿಟಿ ಕಂಟ್ರೋಲ್ ಆಫೀಸರ್ಸ್ ಹುದ್ದೆಗಳು ಲಭ್ಯವಿವೆ. ಕ್ವಾಲಿಟಿ ಕಂಟ್ರೋಲ್ (Chemistry) ವಿಭಾಗಕ್ಕೆ ಸಂಬಂಧಿಸಿದ ಈ ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ (M.Sc Chemistry) ಪೂರ್ಣಗೊಳಿಸಿದ ನಂತರ ಕನಿಷ್ಠ 2 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರಿಂದ 1,40,000 ರೂ. ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಜೂನಿಯರ್ ಇಂಜಿನಿಯರ್ಸ್ ಮತ್ತು ಜೂನಿಯರ್ ಆಫೀಸರ್ಸ್ (ಗ್ರೇಡ್ E0):

ಡಿಪ್ಲೊಮಾ ಪೂರ್ಣಗೊಳಿಸಿದ ಯುವಕರಿಗಾಗಿ ಜೂನಿಯರ್ ಇಂಜಿನಿಯರ್ಸ್ ಹಾಗೂ ಜೂನಿಯರ್ ಆಫೀಸರ್ಸ್ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಸೇಫ್ಟಿ ವಿಭಾಗಗಳಲ್ಲಿ ಡಿಪ್ಲೊಮಾ ಮಾಡಿದವರು ಈ ಹುದ್ದೆಗಳಿಗೆ ಅರ್ಹರಾಗಿದ್ದಾರೆ. ಈ ಹುದ್ದೆಗಳಿಗೆ ಯಾವುದೇ ಪೂರ್ವ ಅನುಭವದ ಅಗತ್ಯವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30,000 ದಿಂದ 1,20,000 ರೂ. ವೇತನ ಶ್ರೇಣಿಯನ್ನು ಪಡೆಯಲಿದ್ದಾರೆ.

ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಕೆ ವಿಧಾನ:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 12 ರಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು (CBT)ಸೆಪ್ಟೆಂಬರ್ 24 ರಂದು ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು IOCL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅಧಿಕೃತ ವೆಬ್‌ಸೈಟ್ ಲಿಂಕ್: iocl.com/latest-job-opening

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!