ಐಪಿಸಿ, ಸಿಆರ್​ಪಿಸಿ ಇನ್ನು ಗತ ಇತಿಹಾಸ; ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಅಸ್ತಿತ್ವಕ್ಕೆ

New Criminal Laws in India from today: ನೂರಕ್ಕೂ ಹೆಚ್ಚು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ಕ್ರಿಮಿನಲ್ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿಲಾಂಜಲಿ ಹೇಳಿದೆ. ಐಪಿಸಿ, ಸಿಆರ್​ಪಿಸಿ, ಎವಿಡೆನ್ಸ್ ಆ್ಯಕ್ಟ್ ಬದಲು ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ. ಸಾಕ್ಷ್ಯ ಅಧಿನಿಯಮ ಇಂದಿನಿಂದ ಜಾರಿಗೆ ಬಂದಿದೆ. ತ್ವರಿತವಾಗಿ ವಿಚಾರಣೆ ಮತ್ತು ನ್ಯಾಯ ಸಿಗುವ ರೀತಿಯಲ್ಲಿ ಕಾನೂನು ರೂಪಿಸಲಾಗಿದೆ.

ಐಪಿಸಿ, ಸಿಆರ್​ಪಿಸಿ ಇನ್ನು ಗತ ಇತಿಹಾಸ; ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಅಸ್ತಿತ್ವಕ್ಕೆ
ಭಾರತೀಯ ನ್ಯಾಯ ಸಂಹಿತೆ
Follow us
|

Updated on: Jul 01, 2024 | 11:55 AM

ನವದೆಹಲಿ, ಜುಲೈ 1: ಇನ್ಮುಂದೆ ಸಿಆರ್​ಪಿಸಿ, ಐಪಿಸಿ ಇತ್ಯಾದಿ ಸೆಕ್ಷನ್​ಗಳು ಇತಿಹಾಸ ಪುಟ ಸೇರಲಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಈ ಕ್ರಿಮಿನಲ್ ಕಾನೂನುಗಳ ಬದಲು ಹೊಸ ಮಾದರಿಯ ಕಾನೂನು ಇಂದಿನಿಂದ ಜಾರಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಕಾನೂನುಗಳು ಇಂದು ಸೋಮವಾರದಿಂದ ಅನುಷ್ಠಾನಕ್ಕೆ ಬರಲಿವೆ. ಇಂಡಿಯನ್ ಪೀನಲ್ ಕೋಡ್ ಬದಲು ಭಾರತೀಯ ನ್ಯಾಯ ಸಂಹಿತೆಯನ್ನು ರೂಪಿಸಲಾಗಿದೆ. ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ ಅಥವಾ ಸಿಆರ್​ಪಿಸಿ ಬದಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯನ್ನು ರಚಿಸಲಾಗಿದೆ. ಸಾಕ್ಷ್ಯ ಕಾಯ್ದೆ ಬದಲು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು ಜಾರಿಗೆ ತರಲಾಗಿದೆ.

ಈ ಹೊಸ ಮಾದರಿಯ ಅಪರಾಧ ಕಾನೂನುಗಳಲ್ಲಿನ ಕೆಲ ಅಂಶಗಳ ಬಗ್ಗೆ ವಿಪಕ್ಷಗಳು ಚಕಾರ ಎತ್ತಿವೆ. ಅದರ ನಡುವೆಯೇ ಹೊಸ ಕಾನೂನು ಇಂದಿನಿಂದ ಜಾರಿಯಲ್ಲಿರುತ್ತದೆ. ಪುರುಷರ ಮೇಲಿನ ಲೈಂಗಿಕ ದೌರ್ಜನ್ಯ, ಟ್ರಾನ್ಸ್​ಜೆಂಡರ್​ಗಳ ಮೇಲಿನ ಲೈಂಗಿಕ ಅಪರಾಧ ಇವೆಲ್ಲವನ್ನೂ ಹೊಸ ಕ್ರಿಮಿನಲ್ ಕಾನೂನಿನಲ್ಲಿ ಒಳಗೊಳ್ಳಲಾಗಿದೆ.

ಹೊಸ ಕಾನೂನುಗಳು ಜಾರಿಗೆ ಬಂದರೆ ಪ್ರತಿಯೊಬ್ಬರಿಗೂ ತ್ವರಿತವಾಗಿ ನ್ಯಾಯ ಸಿಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೇಶದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ಹೊಸ ಕಾನೂನುಗಳನ್ನು ಸ್ವಾಗತಿಸಿದ್ದಾರೆ. ಇನ್ನೊಂದೆಡೆ ವಿಪಕ್ಷಗಳು ಇದನ್ನು ವಿರೋಧಿಸಿವೆ. ಆತುರಾತುರವಾಗಿ ಜಾರಿಗೆ ತರಲಾದ ಈ ಹೊಸ ಕ್ರಿಮಿನಲ್ ಕಾನೂನುಗಳನ್ನು ತಾತ್ಕಾಲಿಕವಾಗಿ ತಡೆದು ಅದನ್ನು ಸಂಸತ್ತು ಮರುಪರಿಶೀಲಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಮಮತಾರ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ: ಜೆಪಿ ನಡ್ಡಾ ವಾಗ್ದಾಳಿ

ಹೊಸ ಕ್ರಿಮಿನಲ್ ಕಾನೂನುಗಳ ಮುಖ್ಯಾಂಶಗಳಿವು…

  • ಅಪರಾಧ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಮೊದಲ ವಿಚಾರಣೆ ನಡೆದು 60 ದಿನದೊಳಗೆ ಆರೋಪಪಟ್ಟಿ ದಾಖಲಾಗಬೇಕು. ವಿಚಾರಣೆ ಮುಗಿದು 45 ದಿನದೊಳಗೆ ನ್ಯಾಯತೀರ್ಪು ಬರಬೇಕು.
  • ಯಾವುದೇ ವ್ಯಕ್ತಿ ಯಾವುದೇ ಪೊಲೀಸ್ ಠಾಣೆಯ್ಲಿ ಝೀರೋ ಎಫ್​ಐಆರ್ ದಾಖಲಿಸಬಹುದು.
  • ಎಲ್ಲಾ ರೀತಿಯ ಘೋರ ಅಪರಾಧಗಳಲ್ಲಿ ಅಪರಾಧ ಸ್ಥಳಗಳಲ್ಲಿ ವಿಡಿಯೋಗ್ರಫಿ ಕಡ್ಡಾಯ.
  • ಗ್ಯಾಂಗ್ ರೇಪ್, ಸಾಮೂಹಿಕ ಹಲ್ಲೆ, ಮದುವೆಗೆ ಸುಳ್ಳು ಭರವಸೆ ಮತ್ತಿತರ ಹೊಸ ರೀತಿಯ ಅಪರಾಧಗಳನ್ನು ಕಾನೂನಿನ ವ್ಯಾಪ್ತಿಗೆ ತರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು