AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RAW ನೂತನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

ಸಿನ್ಹಾ, 1988 ರ ಬ್ಯಾಚ್ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎರಡು ವರ್ಷಗಳ ಅವಧಿಗೆ R&AW ಕಾರ್ಯದರ್ಶಿಯಾಗಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RAW ನೂತನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ
ರವಿ ಸಿನ್ಹಾ
ರಶ್ಮಿ ಕಲ್ಲಕಟ್ಟ
|

Updated on:Jun 19, 2023 | 4:01 PM

Share

ಛತ್ತೀಸ್‌ಗಢ (Chhattisgarh) ಕೇಡರ್‌ನ ಹಿರಿಯ ಐಪಿಎಸ್ (IPS) ಅಧಿಕಾರಿ ರವಿ ಸಿನ್ಹಾ (Ravi Sinha), ಸೋಮವಾರ ಭಾರತದ ಬಾಹ್ಯ ಗುಪ್ತಚರ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಹೊಸ ಮುಖ್ಯಸ್ಥರಾಗಿ (R&AW )ನೇಮಕಗೊಂಡಿದ್ದಾರೆ. ಸಿನ್ಹಾ ಅವರು ಜೂನ್ 30 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸಮಂತ್ ಗೋಯೆಲ್ ಅವರ ಉತ್ತರಾಧಿಕಾರಿಯಾಗಲಿರುವ ಸಿನ್ಹಾ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ಸಿನ್ಹಾ, 1988 ರ ಬ್ಯಾಚ್ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎರಡು ವರ್ಷಗಳ ಅವಧಿಗೆ R&AW ಕಾರ್ಯದರ್ಶಿಯಾಗಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎರಡು ವರ್ಷಗಳ ಅವಧಿಗೆR&AW   ನೂತನ ಮುಖ್ಯಸ್ಥರಾಗಿ ರವಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ, ಜೂನ್ 30, 2023 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಸಮಂತ್ ಕುಮಾರ್ ಗೋಯೆಲ್ ಅವರ ನಂತರ ಅದೇ ಸ್ಥಾನಕ್ಕೆ ಸಿನ್ಹಾ  ನೇಮಕ ಮಾಡಲು ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಡ್ತಿಗೆ ಮುನ್ನ ರವಿ ಸಿನ್ಹಾ RAW ನ ಕಾರ್ಯಾಚರಣೆಯ ವಿಭಾಗಕ್ಕೆ ಮುಖ್ಯಸ್ಥರಾಗಿದ್ದರು. ನೆರೆಹೊರೆಯ ತಜ್ಞರೆಂದು ಪರಿಗಣಿಸಲ್ಪಟ್ಟಿರುವ ಅಧಿಕಾರಿಯು ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ಇತರ ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲವು ದೇಶಗಳಿಂದ ಸಿಖ್ ಉಗ್ರವಾದವನ್ನು ಬೆದರಿಕೆಯೊಡ್ಡುತ್ತಿರುವ ಸಮಯದಲ್ಲಿ ಸಿನ್ಹಾ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ ವಿವಿಯಲ್ಲಿ ನಡೆದ ಜಗಳದಲ್ಲಿ ಇರಿತಕ್ಕೊಳಗಾಗಿ ವಿದ್ಯಾರ್ಥಿ ಸಾವು; ಮಗನನ್ನು ನೆನೆದು ಮಾಧ್ಯಮಗಳ ಮುಂದೆ ಕಣ್ಣೀರಾದ ಅಪ್ಪ

ಸಿನ್ಹಾ ಅವರಿಗಿಂತ ಮುಂಚೆ ಇದ್ದ ಗೋಯೆಲ್ ಅವರನ್ನು ಜೂನ್ 2019 ರಲ್ಲಿ ಎರಡು ವರ್ಷಗಳ ಕಾಲ RAW ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ನಂತರ ಅವರಿಗೆ 2021 ಮತ್ತು ಜೂನ್ 2022 ರಲ್ಲಿ ತಲಾ ಒಂದು ವರ್ಷದ ಎರಡು ವಿಸ್ತರಣೆಗಳನ್ನು ನೀಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Mon, 19 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ