AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಕುರಿತು ಹೆಚ್ಚಿದ ಒತ್ತಡ; ಹರಿಯಾಣ ಡಿಜಿಪಿಗೆ ರಜೆ

ಹರಿಯಾಣದ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಗಳು ಹೆಚ್ಚಾಗುತ್ತಲೇ ಇವೆ. ಈ ಆತ್ಮಹತ್ಯೆಯ ಸುತ್ತ ಜಾತಿ, ಭ್ರಷ್ಟಾಚಾರ, ಅಧಿಕಾರಿಗಳ ಕಿರುಕುಳದ ಲಿಂಕ್ ಉಂಟಾಗಿದೆ. ಇದರ ನಡುವೆ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಗೆ ಒತ್ತಡ ಹೆಚ್ಚುತ್ತಿರುವಂತೆ ಹರಿಯಾಣದ ಡಿಜಿಪಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಕುರಿತು ಹೆಚ್ಚಿದ ಒತ್ತಡ; ಹರಿಯಾಣ ಡಿಜಿಪಿಗೆ ರಜೆ
Haryana Dgp
ಸುಷ್ಮಾ ಚಕ್ರೆ
|

Updated on: Oct 14, 2025 | 5:00 PM

Share

ಗುರುಗ್ರಾಮ, ಅಕ್ಟೋಬರ್ 14: 2001ರ ಬ್ಯಾಚ್ ಐಪಿಎಸ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪೂರಣ್ ಕುಮಾರ್ (Puran Kumar) ಅವರು ಅಕ್ಟೋಬರ್ 7ರಂದು ಚಂಡೀಗಢದ ತಮ್ಮ ಮನೆಯಲ್ಲಿ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವುದು ಪತ್ತೆಯಾಗಿತ್ತು. ಸೋಮವಾರ ತಡರಾತ್ರಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ, ಹರಿಯಾಣ ಸರ್ಕಾರವು ಪೊಲೀಸ್ ಮಹಾನಿರ್ದೇಶಕ ಶತ್ರುಜೀತ್ ಸಿಂಗ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಿದೆ. ತನಗೆ ಡಿಜಿಪಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆಯ ಬಗ್ಗೆ ದಲಿತ ಸಂಘಟನೆಗಳು ಮತ್ತು ವಿರೋಧ ಪಕ್ಷಗಳಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪೂರಣ್ ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿಯಾದ ಅಮ್ನೀತ್ ಪಿ. ಕುಮಾರ್ ರಾಜ್ಯ ಪೊಲೀಸ್ ಮುಖ್ಯಸ್ಥರ ಬಂಧನಕ್ಕೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಬಿಕ್ಕಟ್ಟು ಮುಂದುವರೆದಿದೆ. ಗೃಹ ಇಲಾಖೆಯು 1992ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಕರ್ನಾಲ್‌ನ ಮಧುಬನ್‌ನಲ್ಲಿರುವ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಒ.ಪಿ. ಸಿಂಗ್ ಅವರಿಗೆ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಅಮಾನತು

ಪೂರಣ್ ಕುಮಾರ್ ಸಾವನ್ನಪ್ಪಿದ ಒಂದು ವಾರದ ನಂತರ ಈ ಬೆಳವಣಿಗೆ ಸಂಭವಿಸಿದೆ. ಅವರ 8 ಪುಟಗಳ ಸೂಸೈಡ್ ನೋಟ್​​ನಲ್ಲಿ ಡಿಜಿಪಿ ಮತ್ತು ಇತರ 14 ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳಿಂದ ಅವರ ಮೇಲೆ ಜಾತಿ ಆಧಾರಿತ ನಿಂದನೆಗಳು, ಕಿರುಕುಳ, ಅವಮಾನ ಮತ್ತು ತಾರತಮ್ಯವನ್ನು ಅವರು ಪಟ್ಟಿ ಮಾಡಿದ್ದಾರೆ.

2001ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಕುಮಾರ್ , ಭವಿಷ್ಯ, ನಾಗರಿಕ ವಿಮಾನಯಾನ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆಗಳ ಆಯುಕ್ತ ಮತ್ತು ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ನನ್ನ ಪತಿಯ ಸಾವಿಗೆ ಕಾರಣರಾದ ಹಿರಿಯ ಅಧಿಕಾರಿಗಳನ್ನು ಬಂಧಿಸುವವರೆಗೂ ತಮ್ಮ ಮೃತ ಪತಿಯ ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ನೀಡಲು ಅವರು ನಿರಾಕರಿಸುತ್ತಿದ್ದಾರೆ.

ಇದನ್ನೂ ಓದಿ: ಹರಿಯಾಣದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಸಾವಿನ ತನಿಖೆಗೆ 6 ಸದಸ್ಯರ ಎಸ್‌ಐಟಿ ರಚನೆ

ಹೀಗಾಗಿ, ಪೂರಣ್ ಕುಮಾರ್ ಅವರ ಮೃತದೇಹವನ್ನು ಈಗ ಚಂಡೀಗಢದ ಪಿಜಿಐಎಂಇಆರ್‌ನ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಗುರುತಿಸಲು ಚಂಡೀಗಢ ಪೊಲೀಸರು ಭಾನುವಾರ ಅಮ್ನೀತ್‌ಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ