ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ವಿರುದ್ಧ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಮೇಲ್ಮನವಿ

ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಹಾಕುವ ಪ್ರಕರಣ ಏನಿದು ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಶ್ನೆ ಮಾಡಿದ್ದು, ಇದೆಲ್ಲವೂ ಮಾಧ್ಯಮಗಳಲ್ಲಿ ಬಂದಿದೆ, ಆದರೆ ಇದು ಸರಿಯಲ್ಲ.

ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ವಿರುದ್ಧ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಮೇಲ್ಮನವಿ
ನ್ಯಾಯಮೂರ್ತಿ ಸಂದೇಶ್, ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 11, 2022 | 12:51 PM

ದೆಹಲಿ: ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ ಅಭಿಪ್ರಾಯದ ವಿರುದ್ಧ ಸುಪ್ರೀಂಕೋರ್ಟ್​ಗೆ ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿ ಸೀಮಂತ್​ ಕುಮಾರ್​ ಸಿಂಗ್​ ಸೋಮವಾರ (ಜುಲೈ 11) ಮೇಲ್ಮನವಿ ಸಲ್ಲಿಸಿದರು. ತಮ್ಮ ವಿರುದ್ಧ ನ್ಯಾಯಮೂರ್ತಿ ವ್ಯಕ್ತಪಡಿಸಿರುವ ಅಭಿಪ್ರಾಯ ತೆಗೆದು ಹಾಕಬೇಕೆಂದು ಕೋರಿ ಸೀಮಂತ್ ಕುಮಾರ್ ಸಿಂಗ್ ಅವರು ಈ ಮೊದಲು ಕರ್ನಾಟಕ ಹೈಕೋರ್ಟ್​ಗೂ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಹಾಕುವ ಪ್ರಕರಣ, ಏನಿದು ಎಂದು ಪ್ರಶ್ನಿಸಿದರು. ‘ಇದೆಲ್ಲವೂ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಇದು ಸರಿಯಲ್ಲ. ನ್ಯಾ ಎಚ್.ಪಿ.ಸಂದೇಶ್ ಅವರು ವ್ಯಕ್ತಪಡಿಸಿದ ಅಭಿಪ್ರಾಯದಿಂದ ನನ್ನ ಕಕ್ಷಿದಾರರ ಘನತೆಗೆ ಧಕ್ಕೆಯಾಗಿದೆ’ ಎಂದು ಸೀಮಂತ್ ಕುಮಾರ್ ಸಿಂಗ್​ ಪರ ವಕೀಲರು ವಿವರಿಸಿದರು. ನಾಳೆ ಸೂಕ್ತ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಸುವಂತೆ ಸಿಜೆಐ ರಮಣ ಸೂಚಿಸಿದರು.

ಇದನ್ನೂ ಓದಿ: ಎಸಿಬಿ ಎಡಿಜಿಪಿಗೆ ಆತ್ಮಸಾಕ್ಷಿಯಿಂದ ಕೇಳಿಕೊಳ್ಳಲು ಹೇಳಿ ಎಂದು ಎಡಿಜಿಪಿಗೆ ಮತ್ತೆ ಝಾಡಿಸಿದ ನ್ಯಾ. ಹೆಚ್.ಪಿ. ಸಂದೇಶ್!

ಏನಿದು ಪ್ರಕರಣ?

ಬೆಂಗಳೂರು ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಂದ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾ. ಹೆಚ್.ಪಿ. ಸಂದೇಶ್ ಅವರು ಮತ್ತಷ್ಟು ಖಾರವಾಗಿ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ವಿಚಾರಣೆ ವೇಳೆಯೇ ಟೀಕಾಪ್ರಹಾರ ಮಾಡಿದ್ದರು. ನೀವು ಕೊಟ್ಟ ವರದಿ ಸಂಪೂರ್ಣ ಸತ್ಯವಾದ ವರದಿಯಲ್ಲ. ನೀವು ಈ ಆಟ ಆಡುತ್ತೀರೆಂದು ತಿಳಿದೇ ಮಾಹಿತಿ ಪಡೆದಿದ್ದೇನೆ. ನೀವು ಈ ವರ್ಷ ಸಲ್ಲಿಸಿದ ಬಿ ರಿಪೋರ್ಟ್​ಗಳ ಮಾಹಿತಿ ನೀಡಿಲ್ಲ. ಆದರೆ ಮಾರ್ಚ್, ಜೂನ್ ತಿಂಗಳ ಬಿ ರಿಪೋರ್ಟ್ ಸಲ್ಲಿಸಿದ್ದೀರಿ. 819 ಸರ್ಚ್ ವಾರೆಂಟ್​ಗಳನ್ನು ಪಡೆಯಲಾಗಿತ್ತು. 28 ಸರ್ಚ್ ವಾರೆಂಟ್ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಕೋರ್ಟ್ ಹೇಳಿದ ಮೇಲೆ ಜಿಲ್ಲಾಧಿಕಾರಿಯನ್ನು ಆರೋಪಿ ಮಾಡಿದ್ದೀರಿ. ಈಗ ದಾಳಿ ಮಾಡಿದ್ದೀರಿ, ಮೊದಲೇ ಏಕೆ ಮಾಡಲಿಲ್ಲ? ಕ್ರಮ ಕೈಗೊಳ್ಳುವುದು ಎಸಿಬಿ ಎಡಿಜಿಪಿ ಕರ್ತವ್ಯವಲ್ಲವೇ? ನೌಕರನಲ್ಲದ ವ್ಯಕ್ತಿ ಡಿಸಿಗೆ ಸಹಾಯಕನಾಗಲು ಹೇಗೆ ಸಾಧ್ಯ? ಡಿಸಿ ಸ್ವತಃ 1ನೇ ಆರೋಪಿ ಜೊತೆ ಮಾತನಾಡಲು ಹೇಳಿದ್ದಾರೆ. 1 ನೇ ಆರೋಪಿ ಆದೇಶ ಸಿದ್ದವಿದ್ದರೂ ಡಿಸಿ ಏಕೆ ಸಹಿ ಮಾಡಿರಲಿಲ್ಲ? ಎಂದು ಒಂದೇ ಸಮನೆ ಎಸಿಬಿ ಪರ ವಕೀಲರಿಗೆ ನ್ಯಾ. ಹೆಚ್.ಪಿ. ಸಂದೇಶ್ ಪ್ರಶ್ನೆಗಳ ಸುರಿಮಳೆಗರೆದಿದ್ದರು.

ಇದನ್ನೂ ಓದಿ: ಎಸಿಬಿ ಕಲೆಕ್ಷನ್ ಸೆಂಟರ್ ಅಂದಿದ್ದಕ್ಕೆ ನನಗೆ ವರ್ಗಾವಣೆಯ ಬೆದರಿಕೆ! ನಾನು ಶುದ್ಧ ಹಸ್ತ, ಯಾವುದಕ್ಕೂ ಜಗ್ಗುವುದಿಲ್ಲ- ನ್ಯಾ. ಸಂದೇಶ್

ಎಡಿಜಿಪಿಗೆ ಬಗ್ಗದ ಎಸ್‌ಪಿಗೆ ಹೊಣೆ ನೀಡಿಲ್ಲ, ಇದೇನಾ ನಿಮ್ಮ ಕಾರ್ಯವೈಖರಿ: ಹೈಕೋರ್ಟ್ 

ಬೆಂಗಳೂರಿಗೆ ಸಾಮಾನ್ಯವಾಗಿ ಒಬ್ಬ ಎಸ್‌ಪಿ ಇರುತ್ತಾರೆ. ಎಸಿಬಿ ಕಾರ್ಯಾಲಯ ಸಹಾಯಕರಾಗಿ ಮತ್ತೊಬ್ಬರ ನೇಮಕವಾಗಿರುತ್ತದೆ. ಆ ಮತ್ತೊಬ್ಬ ಎಸ್‌ಪಿಗೆ ಬಿಡಿಎ, ಬಿಬಿಎಂಪಿ ಹೊಣೆ ನೀಡಿದ್ದಾರೆ. ಆದರೆ ಎಡಿಜಿಪಿಗೆ ಬಗ್ಗದ ಎಸ್‌ಪಿ ಯತೀಶ್ ಚಂದ್ರರಿಗೆ ಹೊಣೆ ನೀಡಿಲ್ಲ. ಇದೇನಾ ನಿಮ್ಮ ಕಾರ್ಯವೈಖರಿ ಎಂದು ಎಸಿಬಿ ಎಡಿಜಿಪಿ ಪರ ವಕೀಲರನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಶ್ನಿಸಿತ್ತು. ಬೆಂಗಳೂರಿಗೆ ಸಾಮಾನ್ಯವಾಗಿ ಒಬ್ಬ ಎಸ್‌ಪಿ ಇರುತ್ತಾರೆ. ಎಸಿಬಿ ಕಾರ್ಯಾಲಯ ಸಹಾಯಕರಾಗಿ ಮತ್ತೊಬ್ಬರ ನೇಮಕವಾಗಿರುತ್ತದೆ. ಆ ಮತ್ತೊಬ್ಬ ಎಸ್‌ಪಿಗೆ ಬಿಡಿಎ, ಬಿಬಿಎಂಪಿ ಹೊಣೆ ನೀಡಿದ್ದಾರೆ. ಆದರೆ ಎಡಿಜಿಪಿಗೆ ಬಗ್ಗದ ಎಸ್‌ಪಿ ಯತೀಶ್ ಚಂದ್ರರಿಗೆ ಹೊಣೆ ನೀಡಿಲ್ಲ. ಇದೇನಾ ನಿಮ್ಮ ಕಾರ್ಯವೈಖರಿ ಎಂದು ಎಸಿಬಿ ಎಡಿಜಿಪಿ ಪರ ವಕೀಲರನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಶ್ನಿಸಿತ್ತು.

Published On - 12:24 pm, Mon, 11 July 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ