AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಾನ್, ಕುವೈತ್​ ನಾಯಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ; ಇರಾನ್ ದಾಳಿಗೆ ಖಂಡನೆ

ಪ್ರಧಾನಿ ನರೇಂದ್ರ ಮೋದಿ ಒಮಾನ್, ಕುವೈತ್ ದೇಶಗಳ ನಾಯಕರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ವೇಲೆ ಅವರು ಆ ದೇಶಗಳಲ್ಲಿರುವ ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ. ಹಾಗೇ, ಇರಾನ್ ನಡೆಸಿದ​ ದಾಳಿಯನ್ನು ಖಂಡಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆಯೇ ಪ್ರಧಾನಿ ಮೋದಿ ಅವರು ಒಮಾನ್, ಕತಾರ್, ಕುವೈತ್‌ನ ನಾಯಕರೊಂದಿಗೆ ಮಾತನಾಡಿದ್ದಾರೆ.

ಒಮಾನ್, ಕುವೈತ್​ ನಾಯಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ; ಇರಾನ್ ದಾಳಿಗೆ ಖಂಡನೆ
Pm Modi
ಸುಷ್ಮಾ ಚಕ್ರೆ
|

Updated on: Mar 03, 2026 | 9:27 PM

Share

ನವದೆಹಲಿ, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇಬ್ಬರು ಪ್ರಮುಖ ಗಲ್ಫ್ ನಾಯಕರೊಂದಿಗೆ ಮಾತನಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಕೊಂದ ನಂತರ ಈ ಪ್ರದೇಶವು ನಿರಂತರವಾಗಿ ದಾಳಿಗಳು ಮತ್ತು ಪ್ರತಿದಾಳಿಗಳಿಗೆ ಸಾಕ್ಷಿಯಾಗುತ್ತಿದೆ. ಖಮೇನಿಯ ಸಾವಿಗೆ ಪ್ರತೀಕಾರವಾಗಿ ಇರಾನ್ ಗಲ್ಫ್​ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಧ್ವಂಸ ಮಾಡಿದೆ.

ಪ್ರಧಾನಿ ಮೋದಿ ಅವರು ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಇಬ್ಬರೂ ನಾಯಕರೊಂದಿಗೆ ಚರ್ಚಿಸಿದರು. ಪ್ರಧಾನಿ ಮೋದಿ ಇಂದು ಒಮಾನ್ ರಾಜ ಹೈತಮ್ ಬಿನ್ ತಾರಿಕ್ ಮತ್ತು ಕುವೈತ್‌ನ ಕ್ರೌನ್ ಪ್ರಿನ್ಸ್ ಸಬಾ ಅಲ್-ಖಾಲೆದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾ ಅವರೊಂದಿಗೆ ಮಾತನಾಡಿದರು. ಇಬ್ಬರೊಂದಿಗಿನ ಮಾತುಕತೆಯ ಸಮಯದಲ್ಲಿ ಪ್ರಧಾನಿ ಮೋದಿ ಮಧ್ಯಪ್ರಾಚ್ಯದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ಒಳಗೆ ದೊಡ್ಡ ಪ್ರಮಾಣದ ಮಿಲಿಟರಿ ದಾಳಿಗಳನ್ನು ನಡೆಸಿದ ನಂತರ ಭಾನುವಾರ ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಯಿತು. ಈ ದಾಳಿಗಳು ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ನೌಕಾ ಹಡಗುಗಳ ಮೇಲೆ ಕೇಂದ್ರೀಕರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದ ಅತ್ಯಂತ ತೀವ್ರವಾದ ಸಂಘರ್ಷದಲ್ಲಿ ಒಂದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More