ದೆಹಲಿ: ಉತ್ತರಾಖಂಡದಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಪ್ರವಾಸ ಹೊರಡುವ ಆಸೆ ಹೊಂದಿರುವವರಿಗೆ ಐಆರ್ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದೆ. ಹಲವು ಅಗತ್ಯ ಸೌಲಭ್ಯಗಳಿರುವ ಪ್ಯಾಕೇಜ್ ಟೂರ್ಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ರಿಯಾಯ್ತಿಯೂ ಸಿಗುತ್ತಿದೆ. ಬದರಿನಾಥ್, ಕೇದಾರ್ನಾಥ್, ಗಂಗೋತ್ರಿ ಮತ್ತು ಯಮುನೋತ್ರಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಈ ಪ್ಯಾಕೇಜ್ನಲ್ಲಿದೆ. ಈ ನಾಲ್ಕು ತೀರ್ಥ ಕ್ಷೇತ್ರಗಳ ದರ್ಶನದಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಹಿಂದೂಗಳು ನಂಬುತ್ತಾರೆ.
ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್ ಉಪಕ್ರಮಗಳ ಭಾಗವಾಗಿ ಐಆರ್ಸಿಟಿಸಿ ಈ ಯೋಜನೆಯನ್ನು ಪರಿಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ.
ಹರಿದ್ವಾರ, ಬಾರ್ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.
ಒಬ್ಬರಿಗೆ ₹ 77,600 ಮತ್ತು ಇಬ್ಬರಿಗೆ ₹ 61,400 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಪ್ರಯಾಣದರದೊಂದಿಗೆ ವಸತಿ, ಊಟೋಪಚಾರ ವೆಚ್ಚಗಳನ್ನೂ ಒಳಗೊಂದಿದೆ. ಹೆಚ್ಚಿನ ಮಾಹಿತಿಗೆ www.irctctourism.com ಜಾಲತಾಣ ನೋಡಿ.
Visit the most revered pilgrim places for Hindus in #India with #IRCTCTourism‘s all-incl. 12D/11N Char Dham Yatra air tour package. From temple visits to holy ceremonies, experience it all on this divine pilgrimage. For #details, visit https://t.co/rmhSHk2pW9.@AmritMahotsav
— IRCTC (@IRCTCofficial) March 25, 2022
ಇದನ್ನೂ ಓದಿ: ಮೈಸೂರು: ಸಫಾರಿ ವೇಳೆ ಒಂದೆರಡಲ್ಲ, ಮೂರು ಹುಲಿಗಳ ದರ್ಶನ! ಪ್ರವಾಸಿಗರಿಗೆ ಧಮಾಕ; ವಿಡಿಯೋ ನೋಡಿ
Published On - 1:06 pm, Sat, 2 April 22