AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಸಮುದಾಯದ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ದೇಶದ ಪ್ರತಿ ಸಮುದಾಯವೂ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆಯುತ್ತಿದೆ. ಅಭಿವೃದ್ಧಿಯ ದಿಸೆಯಲ್ಲಿ ಹೆಜ್ಜೆ ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲ ಸಮುದಾಯದ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ಅಲಿಗಢ ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on: Dec 22, 2020 | 1:18 PM

Share

ಲಖನೌ: ದೇಶದ ಪ್ರತಿ ಸಮುದಾಯವೂ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆಯುತ್ತಿದೆ. ಅಭಿವೃದ್ಧಿಯ ದಿಸೆಯಲ್ಲಿ ಹೆಜ್ಜೆ ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವದಲ್ಲಿ ವರ್ಚುವಲ್ ಕಾನ್ಫರೆನ್ಸ್​ ಮೂಲಕ ಭಾಗವಹಿಸಿದ ಅವರು, ದೇಶದ ಯಾವುದೇ ಸಮುದಾಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಎಲ್ಲರ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡುತ್ತಿದೆ. ಎಲ್ಲರೂ ಒಟ್ಟಾಗಿ ಅಭಿವೃದ್ಧಿಯ ದಾರಿಯಲ್ಲಿ ವೇಗವಾಗಿ ನಡೆಯುತ್ತಿದ್ದೇವೆ ಎಂದು ತಿಳಿಸಿದರು.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಭಾರತದ ಹೆಸರನ್ನು ವಿದೇಶಗಳಲ್ಲಿ ಹೆಮ್ಮೆ ಪಡುವಂತೆ ಮಾಡಿದೆ. ಇಲ್ಲಿ ಅಧ್ಯಯನ ಕೈಗೊಂಡ ವಿದ್ಯಾರ್ಥಿಗಳು ವಿದೇಶಗಳಲ್ಲಿ ಹೆಮ್ಮೆಯಿಂದ ಅಲಿಗಢ ವಿವಿ ಹೆಸರು ಹೇಳುವುದನ್ನು ಕೇಳಿದ್ದೇನೆ. ಅಲಿಗಢ ವಿವಿ ಮಿನಿ ಭಾರತವಿದ್ದಂತೆ, ದೇಶದ ವೈವಿಧ್ಯತೆಯನ್ನು ಅಲಿಗಢ ವಿವಿ ಕಾಪಾಡಿಕೊಂಡಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯದ ಶತಮಾನೋತ್ಸವದ ನೆನಪಿಗೆ ಬಿಡುಗಡೆಯಾದ ಅಂಚೆ ಚೀಟಿಗಳು

ಕೇಂದ್ರ ಸರ್ಕಾರ ಕೈಗೊಂಡ ಮಹತ್ವದ ಕ್ರಮಗಳಿಂದ ಶಾಲೆ ತೊರೆಯುವ ಮುಸ್ಲಿಂ ಬಾಲಕಿಯರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಸರ್ಕಾರ, ವಿಶ್ವವಿದ್ಯಾಲಯಗಳು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ತ್ರಿವಳಿ ತಲಾಕ್​ನಂತಹ ಪದ್ಧತಿಗಳನ್ನು ಮಹಿಳೆಯರು ಶಿಕ್ಷಣವೇ ಅಂತ್ಯಗೊಳಿಸಲಿದೆ. ಅಲ್ಲದೇ ಆರ್ಥಿಕ ಸ್ವಾತಂತ್ರ್ಯಕ್ಕೆ ದಾರಿ ಮಾಡಿಕೊಡಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸಾಮಾಜಿಕ ಬದಲಾವಣೆಗೆ ಕಾರಣವಾಗಲಿದೆ. ಇದು ದೇಶದ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಅವರು ವಿವರಿಸಿದರು.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್, ಅಲಿಗಢ ವಿವಿಯ ಕುಲಪತಿ ಸೈದ್ನಾ ಮುಫಾದ್ದಲ್ ಸೈಫುದ್ದಿನ್, ಉಪ ಕುಲಪತಿ ಪ್ರೊ. ತಾರಿಕ್ ಮನ್ಸೂರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್