ಬಿಜೆಪಿಯ ನಿವೃತ್ತಿ ನಿಯಮ ಮೋದಿಗೆ ಅನ್ವಯಿಸುವುದಿಲ್ಲವೇ?; ಆರ್​ಎಸ್​ಎಸ್​ಗೆ ಪತ್ರ ಬರೆದ ಕೇಜ್ರಿವಾಲ್

ಬಿಜೆಪಿಯ ರಾಜಕೀಯ, ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ನಡೆಯ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಗೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಈಗಿನ ಬಿಜೆಪಿ ಹಳೆಯ ಬಿಜೆಪಿಯಂತೆಯೇ ಇದೆ ಎಂದು ನಿಮಗೆ ಅನಿಸುತ್ತದೆಯೇ? ಬಿಜೆಪಿಯ ನಿವೃತ್ತಿ ನಿಯಮ ಮೋದಿಗೆ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ನಿವೃತ್ತಿ ನಿಯಮ ಮೋದಿಗೆ ಅನ್ವಯಿಸುವುದಿಲ್ಲವೇ?; ಆರ್​ಎಸ್​ಎಸ್​ಗೆ ಪತ್ರ ಬರೆದ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Sep 25, 2024 | 3:52 PM

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಬಿಜೆಪಿಯ ರಾಜಕೀಯ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಗಳ ಕುರಿತು 5 ಪ್ರಶ್ನೆಗಳಿಗೆ ಉತ್ತರಗಳನ್ನು ಕೇಳಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದೆ? ಬಿಜೆಪಿಯ ರಾಜಕೀಯವು ಭಾರತಕ್ಕೆ ಹಾನಿಕಾರಕವಾಗಿದೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ವರ್ತನೆ ಇದೇ ರೀತಿ ಮುಂದುವರಿದರೆ ನಮ್ಮ ದೇಶ ಮತ್ತು ಪ್ರಜಾಪ್ರಭುತ್ವ ಕೊನೆಗೊಳ್ಳುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಮೋಹನ್ ಭಾಗವತ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಯಂತಹ ನಾಯಕರಿಗೆ ಅನ್ವಯಿಸಿದಂತೆ ನಿವೃತ್ತಿಯ ವಯಸ್ಸಿನ ಆರ್‌ಎಸ್‌ಎಸ್-ಬಿಜೆಪಿಯ ನಿಯಮವು ನರೇಂದ್ರ ಮೋದಿಗೂ ಅನ್ವಯಿಸುತ್ತದೆಯೇ? ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷಕ್ಕೆ ಆರ್​ಎಸ್​ಎಸ್​ನ ಅಗತ್ಯವಿಲ್ಲ ಎಂದು ಹೇಳಿದಾಗ ಮೋಹನ್ ಭಾಗವತ್ ಅವರಿಗೆ ಹೇಗೆ ಅನಿಸಿತು? ಎಂಬ ಪ್ರಶ್ನೆಗಳನ್ನು ಕೂಡ ಅರವಿಂದ್ ಕೇಜ್ರಿವಾಲ್ ಕೇಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಅವರ ಕುರ್ಚಿಯಲ್ಲಿ ಕೂರದೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ

ರಾಜಕೀಯ ಸಂಘಟನೆಗಳನ್ನು ಒಡೆಯಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುವ ಬಿಜೆಪಿಯ ರಾಜಕೀಯವನ್ನು ನೀವು ಒಪ್ಪುತ್ತೀರಾ? ಎಂದು ಅರವಿಂದ್ ಕೇಜ್ರಿವಾಲ್ ಆರ್‌ಎಸ್‌ಎಸ್ ಮುಖ್ಯಸ್ಥರನ್ನು ಕೇಳಿದ್ದಾರೆ. ಈ ಪ್ರಶ್ನೆಗಳು ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿದೆ. ಮೋಹನ್ ಭಾಗವತ್ ಅವರು ಈ ಬಗ್ಗೆ ಯೋಚಿಸಿ ಉತ್ತರಗಳನ್ನು ನೀಡುತ್ತಾರೆ ಎಂದು ಜನರು ನಿರೀಕ್ಷಿಸುತ್ತಾರೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್