ಕಾಂಗ್ರೆಸ್‌ ಮುಕ್ತ ಭಾರತದ ಭರದಲ್ಲಿ.. ಕಾಂಗ್ರೆಸ್‌ಯುಕ್ತ ಬಿಜೆಪಿಯಾಗುತ್ತಿದೆಯಾ ಬಿಜೆಪಿ?

ನವದೆಹಲಿ: ಭಾರತೀಯ ಜನತಾ ಪಾರ್ಟಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಅಡೆತಡೆಯಿಲ್ಲದೆ ಮುನ್ನುಗ್ಗುತ್ತಿದೆ. ಅದ್ರಲ್ಲೂ ‘ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುವ ಘೋಷವಾಕ್ಯದೊಂದಿಗೆ ಕಾಂಗ್ರೆಸ್‌ ಪಕ್ಷದ ನಿರ್ನಾಮವೇ ಗುರಿ ಎಂಬಂತೆ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದಲ್ಲದೇ, ಅದರ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ. ಆದ್ರೆ ಇದು ಈಗ ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆಯಾ ಎಂಬ ಸಂದೇಹಗಳು ಮೂಡುತ್ತಿವೆ. ಇದಕ್ಕೆ ಕಾರಣ ಪಕ್ಷದ ಮೂವರು ಪ್ರಮುಖ ನಾಯಕರ ಅಕಾಲಿಕ ನಿಧನ ಹಾಗೂ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ಯಾದಾಗಿನಿಂದ ತೆರವಾದ ಬಿಜೆಪಿಯ […]

ಕಾಂಗ್ರೆಸ್‌ ಮುಕ್ತ ಭಾರತದ ಭರದಲ್ಲಿ.. ಕಾಂಗ್ರೆಸ್‌ಯುಕ್ತ ಬಿಜೆಪಿಯಾಗುತ್ತಿದೆಯಾ ಬಿಜೆಪಿ?
Follow us
Guru
| Updated By: ಸಾಧು ಶ್ರೀನಾಥ್​

Updated on: Aug 29, 2020 | 1:45 PM

ನವದೆಹಲಿ: ಭಾರತೀಯ ಜನತಾ ಪಾರ್ಟಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಅಡೆತಡೆಯಿಲ್ಲದೆ ಮುನ್ನುಗ್ಗುತ್ತಿದೆ. ಅದ್ರಲ್ಲೂ ‘ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುವ ಘೋಷವಾಕ್ಯದೊಂದಿಗೆ ಕಾಂಗ್ರೆಸ್‌ ಪಕ್ಷದ ನಿರ್ನಾಮವೇ ಗುರಿ ಎಂಬಂತೆ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದಲ್ಲದೇ, ಅದರ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.

ಆದ್ರೆ ಇದು ಈಗ ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆಯಾ ಎಂಬ ಸಂದೇಹಗಳು ಮೂಡುತ್ತಿವೆ. ಇದಕ್ಕೆ ಕಾರಣ ಪಕ್ಷದ ಮೂವರು ಪ್ರಮುಖ ನಾಯಕರ ಅಕಾಲಿಕ ನಿಧನ ಹಾಗೂ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ಯಾದಾಗಿನಿಂದ ತೆರವಾದ ಬಿಜೆಪಿಯ ಕೇಂದ್ರ ಸಂಸದೀಯ ಬೋರ್ಡ್‌ನ ನಾಲ್ಕು ಸ್ಥಾನಗಳು ಇನ್ನೂ ಭರ್ತಿಯಾಗದೇ ಇರೋದು.

ಈ ಬಗ್ಗೆ ಈಗ ಬಿಜೆಪಿಯ ಆಂತರಿಕ ವಲಯದಲ್ಲಿ ಅಪಸ್ವರ ಮತ್ತು ಕಳವಳ ಕೇಳಿ ಬರಲಾರಂಭಿಸಿವೆ. ಅನಂತಕುಮಾರ್‌, ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌ ಮತ್ತು ವೆಂಕಯ್ಯ ನಾಯ್ಡು ಅವರಿಂದ ತೆರವಾದ ಸ್ಥಾನಗಳಿಗೆ ಹಲವಾರು ದಿನಗಳಾದ್ರೂ ಯಾರನ್ನೂ ನೇಮಕ ಮಾಡದೇ ಇರೋದು ಆಕಾಂಕ್ಷಿಗಳಲ್ಲಿ ಚಡಪಡಿಕೆ ಶುರುವಾಗುವಂತೆ ಮಾಡಿದೆ.

ಅಷ್ಟೇ ಅಲ್ಲ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮತ್ತು ಬಿಜೆಪಿಯ ಸಂಸದೀಯ ಬೋರ್ಡ್‌ಗೆ ನೇಮಕ ಮಾಡುವಾಗ ಕಾಂಗ್ರೆಸ್‌ನಿಂದ ಬಂದಿರುವ ಹಿರಿಯ ನಾಯಕರಿಗೆ ಮಣೆ ಹಾಕಲಿದ್ದಾರೆ ಎನ್ನುವ ಗುಸುಗುಸು ಮಾಹಿತಿ.

ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್‌ನಿಂದ ಬಂದ ಜ್ಯೋತಿರಾದಿತ್ಯ ಸಿಂದಿಯಾ ಕೇಂದ್ರ ಸಂಪುಟಕ್ಕೆ ಸೇರುತ್ತಾರೆ ಎನ್ನಲಾಗುತ್ತಿದೆ. ಹಾಗೇನೇ ಆಸ್ಸಾಂನ ಹೀಮಂತ್‌ ಬಿಸ್ವ ಶರ್ಮಾ ಅಲ್ಲಿನ ಮುಖ್ಯಮಂತ್ರಿಗಿಂತ ಪ್ರಬಲವಾಗಿ ಬೆಳೆದು ಇಡೀ ಈಶಾನ್ಯ ರಾಜ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಹೀಗಾಗಿ ಕಟ್ಟಾ ಬಿಜಿಪಿ ನಾಯಕರು ಈಗ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಹೋಗಿ ‘ಕಾಂಗ್ರೆಸ್‌ಯುಕ್ತ ಬಿಜೆಪಿ’ಯಾಗಿದ್ದೇವೆ ಎಂದು ಖಾಸಗಿಯಾಗಿ ಅವಲತ್ತುಕೊಳ್ಳುತ್ತಿದ್ದಾರೆ. ಹೀಗೆ ಆದರೆ ಪ್ರಮುಖ ಸ್ಥಾನಗಳಲ್ಲಿ ಅವರೇ ನೇಮಕವಾಗುತ್ತಾರೆ. ಹಾಗಾದ್ರೆ ಮೊದಲಿನಿಂದಲೂ ಬಿಜಿಪಿಯಲ್ಲಿರುವ ನಾವು ಏನು ಮಾಡೋದು ಎಂಬ ಆತಂಕ ಈ ನಾಯಕರಲ್ಲಿ ಶುರುವಾಗಿದೆ ಎನ್ನಲಾಗ್ತಿದೆ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ